ಮನೆಗೊಂದು ಗ್ರಂಥಾಲಯ: ಓದುವ ಸಂಸ್ಕೃತಿ ಬೆಳೆಸಲು ಕನ್ನಡ ಪುಸ್ತಕ ಪ್ರಾಧಿಕಾರದ ಅಭಿಯಾನ
A Library in Every Home: Kannada Book Authority's Campaign to Foster a Reading Culture
ಲೋಕದರ್ಶನ ವರದಿ
ಹೊಸಪೇಟೆ, ಆ.18: ನಗರದ ಬುಡ್ಗ ಜಂಗಮ ಕಾಲೊನಿಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕನ್ನಡ ಪುಸ್ತಕ ಪ್ರಾಧಿಕಾರ ಹಾಗೂ ವಿಜಯನಗರ ಜಿಲ್ಲಾ ಜಾಗೃತಿ ಸಮಿತಿ ವತಿಯಿಂದ ‘ಮನೆಗೊಂದು ಗ್ರಂಥಾಲಯ’ ಕಾರ್ಯಕ್ರಮಕ್ಕೆ ಆ.16ರಂದು ಚಾಲನೆ ನೀಡಲಾಯಿತು.
ಕನ್ನಡ ಪುಸ್ತಕ ಪ್ರಾಧಿಕಾರದ ರಾಜ್ಯಾಧ್ಯಕ್ಷ ಡಾ. ಮಾನಸ ಅವರು ಸಸಿಗೆ ನೀರು ಹಾಕುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ರಾಜ್ಯಾದ್ಯಂತ ಮನೆಗೊಂದು ಗ್ರಂಥಾಲಯ ನಿರ್ಮಿಸುವ ಮೂಲಕ ಪುಸ್ತಕ ಸಂಸ್ಕೃತಿಯನ್ನು ಬೆಳೆಸಲು ಪ್ರಾಧಿಕಾರ ಕಾರ್ಯನಿರ್ವಹಿಸುತ್ತಿದೆ. ಪುಸ್ತಕಗಳ ಓದಿನಿಂದ ಅರಿವು ಹಾಗೂ ಜ್ಞಾನ ವೃದ್ಧಿಯಾಗುತ್ತದೆ. ಈ ನಿಟ್ಟಿನಲ್ಲಿ ಪ್ರತಿಯೊಂದು ಮನೆಯಲ್ಲೂ ಗ್ರಂಥಾಲಯ ಸ್ಥಾಪನೆಯಾಗಬೇಕು ಎಂದು ಹೇಳಿದರು.
ವಿಜಯನಗರ ಜಿಲ್ಲಾ ಜಾಗೃತಿ ಸಮಿತಿ ಈಗಾಗಲೇ ನಗರದ ಹಲವು ಮನೆಗಳಲ್ಲಿ ಗ್ರಂಥಾಲಯ ಸ್ಥಾಪನೆಯ ಕುರಿತು ಜಾಗೃತಿ ಮೂಡಿಸಿರುವುದಾಗಿ ತಿಳಿಸಿದರು.
ಕರ್ನಾಟಕ ರಾಜ್ಯ ಬುಡ್ಗ ಜಂಗಮ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಸಣ್ಣ ಮಾರೆಪ್ಪ ಮಾತನಾಡಿ, “ಎದೆಗೆ ಬಿದ್ದ ಅಕ್ಷರ, ಭೂಮಿಗೆ ಬಿದ್ದ ಬೀಜ ಎಂದಿಗೂ ಹುಸಿಯಾಗದು” ಎಂದು ಹೇಳಿದರು. ಬುಡ್ಗ ಜಂಗಮ ಕಾಲೊನಿಯಲ್ಲಿ ಸಾಕ್ಷರತೆ ಮತ್ತು ಓದುವ ಸಂಸ್ಕೃತಿ ಬೆಳೆಸುವ ಉದ್ದೇಶದಿಂದ ಗ್ರಂಥಾಲಯ ಆರಂಭಿಸಿರುವುದು ಶ್ಲಾಘನೀಯ ಎಂದರು.
ಪುಸ್ತಕಗಳು ಆತ್ಮೀಯ ಮಿತ್ರರಿದ್ದಂತೆ. ಓದುವ ಹವ್ಯಾಸದಿಂದ ಸಾಮಾಜಿಕ ಚಿಂತನೆ ಹಾಗೂ ಅರಿವು ಮೂಡಿ ಬದುಕಿಗೆ ಬೆಳಕಿನ ದಾರಿ ತೋರಿಸುತ್ತದೆ. ಮಕ್ಕಳಲ್ಲಿ ಮತ್ತು ಕುಟುಂಬದ ಸದಸ್ಯರಲ್ಲಿ ಪುಸ್ತಕ ಓದುವ ಹವ್ಯಾಸ ಬೆಳೆಸಿದರೆ ಜೀವನದಲ್ಲಿ ಉತ್ತಮ ಸಾಧನೆ ಮಾಡಲು ಸಾಧ್ಯ ಎಂದು ಹೇಳಿದರು.
ಕವಿ ಹಾಗೂ ಸಾಹಿತಿಗಳಾದ ಟಿ.ಎಂ.ಮನಪ್ಪ, ಶ್ರೀಮತಿ ರೇಖಾ ಉದಯ್, ನಿರ್ದೇಶಕ ಮುಂಡೇನೂರು ಉಮಾಮಹೇಶ್ವರ ಸೇರಿದಂತೆ ಹಲವರು ಕಾರ್ಯಕ್ರಮದ ಉದ್ದೇಶ ಕುರಿತು ಮಾತನಾಡಿದರು. ಈ ಸಂದರ್ಭದಲ್ಲಿ ಸಣ್ಣ ಮಾರೆಪ್ಪ ಅವರನ್ನು ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ ಸನ್ಮಾನಿಸಿ ಅಭಿನಂದಿಸಲಾಯಿತು.
ಕಾರ್ಯಕ್ರಮದ ಆರಂಭದಲ್ಲಿ ಗ್ರಂಥಗಳ ಮಹತ್ವ ಸಾರುವ ಪ್ರಾರ್ಥನಾ ಗೀತೆ ನಡೆಯಿತು. ಸಾಹಿತಿ ಸೋ.ದಾ. ವಿರೂಪಾಕ್ಷಗೌಡ ಸ್ವಾಗತ, ಪ್ರಾಸ್ತಾವಿಕ, ನಿರೂಪಣೆ ಹಾಗೂ ವಂದನಾರೆ್ಣ ನೆರವೇರಿಸಿದರು.
ವಿಜಯನಗರ ಜಿಲ್ಲಾ ಜಾಗೃತಿ ಸಮಿತಿಯ ಸಂಚಾಲಕ ಎಂ.ಉಮಾಮಹೇಶ್ವರ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಿತು. ಮುಖ್ಯ ಅತಿಥಿಗಳಾಗಿ ಟಿ.ಎಂ.ಮನಪ್ಪ, ಶ್ರೀಮತಿ ರೇಖಾ ಉದಯ್, ಕರ್ನಾಟಕ ರಾಜ್ಯ ಅಲೆಮಾರಿ, ಅರೆ ಅಲೆಮಾರಿ ಮತ್ತು ವಿಮುಕ್ತ ಬುಡಕಟ್ಟುಗಳ ಒಕ್ಕೂಟದ ರಾಜ್ಯ ಉಪಾಧ್ಯಕ್ಷರು ಹಾಗೂ ಕರ್ನಾಟಕ ರಾಜ್ಯ ಬುಡ್ಗಜಂಗಮ ಕ್ಷೇಮಾಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷ ಸಣ್ಣ ಮಾರೆಪ್ಪ ಉಪಸ್ಥಿತರಿದ್ದರು.
ಕಾರ್ಯಕ್ರಮದ ಕೊನೆಯಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಸಣ್ಣ ಮಾರೆಪ್ಪ ಅವರಿಗೆ ‘ಮನೆಗೊಂದು ಗ್ರಂಥಾಲಯ’ ಯೋಜನೆ ಕುರಿತು ಅಭಿನಂದನಾ ಪತ್ರ ನೀಡಿ ಸನ್ಮಾನಿಸಲಾಯಿತು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 