ತಾಲೂಕಿನ ಉಪನ್ಯಾಸಕನಿಗೆ ಪಿಎಚ್.ಡಿ ಪದವಿ ಪ್ರಧಾನ
A Ph.D degree is preferred for a Taluk Lecturer
ಶಿಗ್ಗಾವಿ 01 : ತಾಲೂಕಿನ ಶಿವಪುರ ತಾಂಡಾದ ನಿವಾಸಿ ಹಾಗೂ ಉಪನ್ಯಾಸಕ ಮಹೇಶ್ ಪಾಂಡಪ್ಪ ಲಮಾಣಿ ಅವರಿಗೆ ಮಂಗಳೂರು ವಿಶ್ವವಿದ್ಯಾಲಯವು ಯೋಗ ವಿಜ್ಞಾನದಲ್ಲಿ ಪಿಎಚ್.ಡಿ ಪದವಿ ಪ್ರದಾನ ಮಾಡಿದೆ. ಇವರು ಎರಡು ವರ್ಷಗಳ ಕಾಲ ವಿದೇಶಗಳಲ್ಲಿ ಯೋಗ ಥೆರಪಿಸ್ಟ್ ಆಗಿ ಚೀನಾ ಮತ್ತು ವಿಯೆಟ್ನಾಂ ದೇಶಗಳಲ್ಲಿ ಸೇವೆ ಸಲ್ಲಿಸಿ, ನಂತರ ಹೆಚ್ಚಿನ ಅಧ್ಯಯನಕ್ಕಾಗಿ ಮಂಗಳೂರು ವಿಶ್ವವಿದ್ಯಾಲಯಕ್ಕೆ ಸಂಶೋಧಕ ವಿದ್ಯಾರ್ಥಿಯಾಗಿ ಸೇರಿದ್ದರು.
ಮಂಗಳೂರು ವಿಶ್ವವಿದ್ಯಾಲಯದ ಮಾನವ ಪ್ರಜ್ಞೆ ಮತ್ತು ಯೋಗ ವಿಜ್ಞಾನ ವಿಭಾಗದ ನಿವೃತ್ತ ಪ್ರಾಧ್ಯಾಪಕ ಡಾ. ಕೆ. ಕೃಷ್ಣ ಶರ್ಮಾ ಅವರ ಮಾರ್ಗದರ್ಶನದಲ್ಲಿ ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆಯಲ್ಲಿ ಕಾರ್ಯನಿರ್ವಹಿಸುವ ಪೊಲೀಸರ ಮೇಲೆ ಯೋಗಾಭ್ಯಾಸದ ಪರಿಣಾಮ ಮತ್ತು ಅಧಿಕ ರಕ್ತದೊತ್ತಡ ನಿಯಂತ್ರಣದ ಮೌಲ್ಯಮಾಪನ ಎಂಬ ವಿಷಯದ ಮೇಲೆ ಮಹಾಪ್ರಬಂಧ ಸಲ್ಲಿಸಿದ್ದರು. ಈ ಮಹಾಪ್ರಬಂಧಕ್ಕಾಗಿ ಮಂಗಳೂರು ವಿಶ್ವವಿದ್ಯಾಲಯವು ಯೋಗ ವಿಜ್ಞಾನದಲ್ಲಿ ಪಿಎಚ್.ಡಿ ಪದವಿಯನ್ನು ಪ್ರದಾನ ಮಾಡಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 