ಕಜಾಪ ಮುದ್ದೇಬಿಹಾಳ ತಾಲೂಕಾಧ್ಯಕ್ಷರಾಗಿ ಎ.ಆರ್. ಮುಲ್ಲಾ ಆಯ್ಕೆ
A.R. Mulla selected as KJP Muddebihal Taluk President
ಮುದ್ದೇಬಿಹಾಳ 31: ಕರ್ನಾಟಕ ಜಾನಪದ ಪರಿಷತ್ತಿನ ಮುದ್ದೇಬಿಹಾಳ ತಾಲೂಕು ಘಟಕದ ನೂತನ ಅಧ್ಯಕ್ಷರಾಗಿ ನಿವೃತ್ತ ಶಿಕ್ಷಕ ಹಾಗೂ ಹಿರಿಯ ಜಾನಪದ ಸಂಘಟಕ ಎ.ಆರ್. ಮುಲ್ಲಾ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ಬಸರಕೋಡ ಗ್ರಾಮದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಜರುಗಿದ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು.
ಎ.ಆರ್. ಮುಲ್ಲಾ ಅವರು ಶೈಕ್ಷಣಿಕ ಕ್ಷೇತ್ರದಲ್ಲಿ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತರಾಗಿದ್ದು, ಶಿಕ್ಷಣ ಕ್ಷೇತ್ರದ ಜೊತೆಗೆ ತಾಲೂಕಿನ ಕನ್ನಡ ಜಾನಪದ ಸಾಹಿತ್ಯದ ಬೆಳವಣಿಗೆಗೆ ಶ್ರಮಿಸಿದ್ದಾರೆ. ತಾಲೂಕಿನಾದ್ಯಂತ ಜಾನಪದ ಕಲಾವಿದರ ಸಮಗ್ರ ಸಮೀಕ್ಷೆ ನಡೆಸಿ, ಗ್ರಾಮೀಣ ಭಾಗದ ಜನಪದ ಕಲೆ ಹಾಗೂ ಕಲಾವಿದರನ್ನು ಗುರುತಿಸಿ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.
ಅನೇಕ ಸಾರ್ವಜನಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಜನಮುಖಿ ಸೇವಕರಾಗಿ ಗುರುತಿಸಿಕೊಂಡಿರುವ ಇವರ ರಂಗಸೇವೆ ಮತ್ತು ಸಾಹಿತ್ಯಿಕ ಕೊಡುಗೆಗೆ ಹಲವು ಪ್ರಶಸ್ತಿ-ಪುರಸ್ಕಾರಗಳು ಲಭಿಸಿವೆ.
ಈ ಆಯ್ಕೆ ಪ್ರಕ್ರಿಯೆಗೆ ಬಸರಕೋಡ ಪವಾಡ ಬಸವೇಶ್ವರ ಸಂಸ್ಥೆಯ ಅಧ್ಯಕ್ಷ ಕೆ.ವಾಯ್. ಬಿರಾದಾರ ಅವರು ಸೂಚಕರಾಗಿ ಹಾಗೂ ಮುದ್ದೇಬಿಹಾಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷರು ಮತ್ತು ವಕೀಲ ಎಂ.ಎಚ್. ಹಾಲನ್ನವರ ಅವರು ಅನುಮೋದಕರಾಗಿ ಬೆಂಬಲ ಸೂಚಿಸಿದರು. ಎ.ಆರ್. ಮುಲ್ಲಾ ಅವರ ನೇಮಕಕ್ಕೆ ತಾಲೂಕಿನ ಜಾನಪದ ಕಲಾವಿದರು, ಸಾಹಿತ್ಯಾಭಿಮಾನಿಗಳು ಹಾಗೂ ಗಣ್ಯರು ಹರ್ಷ ವ್ಯಕ್ತಪಡಿಸಿ ಶುಭಾಶಯ ಕೋರಿದ್ದಾರೆ.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 