20 ವರ್ಷಗಳ ಬಳಿಕವೂ ಶಾಲೆಯೊಂದಿಗಿನ ಬಾಂಧವ್ಯ: ಹಳೆಯ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ
A bond with the school that endures even after 20 years: Alumni reunion
ಬಳ್ಳಾರಿ 16: ಕಳೆದ ಇಪ್ಪತ್ತು ವರ್ಷಗಳಿಂದ ಈ ಗ್ರಾಮ ಹಾಗೂ ಇಲ್ಲಿನ ವಿದ್ಯಾರ್ಥಿಗಳನ್ನು ತಮ್ಮ ಹೃದಯದಲ್ಲಿ ಪೂಜಿಸುತ್ತಿರುವುದಾಗಿ ನಿವೃತ್ತ ಮುಖ್ಯ ಶಿಕ್ಷಕ ಗಂಗೇಶ ಅವರು ಹೇಳಿದರು. ಗ್ರಾಮಸ್ಥರ ಸಹಕಾರದಿಂದಲೇ ಗ್ರಾಮದಲ್ಲಿ ಹೈಸ್ಕೂಲ್ ಆರಂಭಿಸಲು ಸಾಧ್ಯವಾಯಿತು. ವಿದ್ಯಾರ್ಥಿಗಳು ಕೆಟ್ಟ ಚಟಗಳನ್ನು ತೊರೆದು ಸದು್ಗುಣಗಳನ್ನು ಬೆಳೆಸಿಕೊಂಡು, ಇಡೀ ಜಿಲ್ಲೆಗೆ ಕೀರ್ತಿ ತರಬೇಕು ಎಂದು ಅವರು ಕರೆ ನೀಡಿದರು. ಪೋಷಕರು ತಮ್ಮ ಮಕ್ಕಳನ್ನು ಕೇವಲ ಆಸ್ತಿಯನ್ನಾಗಿ ಮಾಡದೆ, ಉತ್ತಮ ಸಂಸ್ಕಾರ ಮತ್ತು ಸನ್ನಡತೆಯ ಸಂಪತ್ತನ್ನಾಗಿ ರೂಪಿಸಬೇಕು ಎಂದರು.
ತಾಲೂಕಿನ ಹಿರೇಹಡ್ಲಗಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಳೆಯ ವಿದ್ಯಾರ್ಥಿಗಳ ಒಕ್ಕೂಟದ ವತಿಯಿಂದ ಹಮ್ಮಿಕೊಂಡಿದ್ದ ‘ಸ್ನೇಹ ಸಮ್ಮಿಲನ ಹಾಗೂ ಗುರು ವಂದನಾ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕಾರ್ಯಕ್ರಮದ ಸಾನ್ನಿಧ್ಯ ವಹಿಸಿದ್ದ ಶಂಭುಲಿಂಗ ಶಿವಾಚಾರ್ಯ ಸ್ವಾಮೀಜಿ ಆಶೀರ್ವಚನ ನೀಡಿ, ತಂದೆ-ತಾಯಿ, ಶಿಕ್ಷಕರು ಹಾಗೂ ಸಹಾಯ ಮಾಡಿದವರನ್ನು ಎಂದಿಗೂ ಮರೆಯಬಾರದು ಎಂದು ಹೇಳಿದರು. ಶಿಕ್ಷಣ ವ್ಯಾಪಾರೀಕರಣಗೊಳ್ಳುತ್ತಿರುವ ಇಂದಿನ ಸಂದರ್ಭದಲ್ಲಿ ಸರ್ಕಾರಿ ಶಾಲೆಗಳು ಬದುಕಿನ ನೈಜ ಮೌಲ್ಯಗಳನ್ನು ಕಲಿಸುತ್ತಿವೆ. ಶಿಕ್ಷಕ ವೃತ್ತಿಗೆ ಎಂದಿಗೂ ನಿವೃತ್ತಿ ಇಲ್ಲ; ಈ ವೃತ್ತಿಗೆ ನಿರಂತರ ಗೌರವವಿದೆ ಎಂದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 