ಸತತ ಪರಿಶ್ರಮದಿಂದ ಉಜ್ವಲ ಭವಿಷ್ಯ ನಿರ್ಮಾಣ ಸಾಧ್ಯ : ಶರಣಯ್ಯ ಭಂಡಾರಿಮಠ
A bright future can be built with continuous effort: Sharaniah Bhandari Math
ಸತತ ಪರಿಶ್ರಮದಿಂದ ಉಜ್ವಲ ಭವಿಷ್ಯ ನಿರ್ಮಾಣ ಸಾಧ್ಯ : ಶರಣಯ್ಯ ಭಂಡಾರಿಮಠ
ಗೋಕಾಕ, 24 : ನಗರದ ಪ್ರತಿಷ್ಠಿತ ಗೋಕಾಕ ಶಿಕ್ಷಣ ಸಂಸ್ಥೆಯ ಜೆ. ಎಸ್. ಎಸ್. ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ಹಳೆಯ ವಿದ್ಯಾರ್ಥಿಗಳ ಸಂಘ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕಮಿಟಿ ಸಹಯೋಗದಲ್ಲಿ ಹಮ್ಮಿಕೊಂಡಿದ್ದ “ಸ್ಪರ್ಧಾತ್ಮಕ ಪರೀಕ್ಷೆಗಳು” ಎಂಬ ವಿಷಯದ ಕುರಿತು ಒಂದು ದಿನದ ರಾಜ್ಯಮಟ್ಟದ ತರಬೇತಿ ಕಾರ್ಯಾಗಾರದಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ತರಬೇತುದಾರ ಶರಣಯ್ಯ ಭಂಡಾರಿಮಠ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಮಾತನಾಡುತ್ತಾ ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಸತತ ಪರಿಶ್ರಮ ಇದ್ದರೆ ಮಾತ್ರ ಉಜ್ವಲ ಭವಿಷ್ಯ ನಿರ್ಮಾಣ ಸಾಧ್ಯ ಎಂದು ಹೇಳಿದರು.
ಪದವಿ ಹಂತದಿಂದಲೇ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ನಡೆಯುತ್ತಿರುವ ಎಲ್ಲಾ ಪರೀಕ್ಷೆಗಳ ಬಗ್ಗೆ ಮಾಹಿತಿ ಹಾಗೂ ನಿರಂತರ ಅಧ್ಯಯನ ಇದ್ದಾಗ ಮಾತ್ರ ತಮ್ಮ ಗುರಿ-ಸಾಧನೆ ಮಾಡಲು ಸಾಧ್ಯವಾಗುತ್ತದೆ ಎಂದು ಗೋಕಾಕ ನಗರದ ತಹಶೀಲ್ದಾರ ಡಾ. ಮೋಹನ ಭಸ್ಮೆ ಮಾತನಾಡಿದರು. ಕಾರ್ಯಾಗಾರದಲ್ಲಿ ಗೋಕಾಕ ನಗರ ಪೋಲಿಸ್ ಅಧಿಕಾರಿಗಳಾದ ಶ್ರೀ ಕಿರಣ ಮೋಹಿತೆರವರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿ ಬಗ್ಗೆ ಮಾಹಿತಿ ನೀಡಿದರು. ಇನ್ನೋರ್ವ ಸಂಪನ್ಮೂಲ ವ್ಯಕ್ತಿಗಳಾದ ಡಾ. ಕನಕರಾಜ ಟಿ. ಎಂ.ರವರು ಭಾರತೀಯ ರಕ್ಷಣಾ ಸೇವಾ ಪರೀಕ್ಷೆಗಳ ಬಗ್ಗೆ ಮಾಹಿತಿ ನೀಡಿದರು. ಈ ಕಾರ್ಯಾಗಾರದಲ್ಲಿ ರಾಜ್ಯದ ವಿವಿಧ ಮಹಾವಿದ್ಯಾಲಯಗಳಿಂದ 400 ಕ್ಕಿಂತ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗೋಕಾಕ ಶಿಕ್ಷಣ ಸಂಸ್ಥೆಯ ಚೇರಮನ್ನರಾದ ವ್ಹಿ. ಎ. ಕಡಕೋಳ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಸಂಸ್ಥೆಯ ನಿರ್ದೇಶಕರಾದ ಹಾಗೂ ಹಳೆಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷರಾದ ಎಂ. ಡಿ. ಚುನಮರಿ ಭಾಗವಹಿಸಿದ್ದರು. ಕಾರ‌್ಯಕ್ರಮದಲ್ಲಿ ನಿರ್ದೇಶಕರಾದ ಮಹಾಂತೇಶ ತಾಂವಶಿ, ಕಾರ್ಯದರ್ಶಿಗಳಾದ ಆರ್. ಎಂ. ವಾಲಿ, ಪ್ರಾಂಶುಪಾಲರಾದ ಡಾ. ಬಿ. ಎಂ. ತುರಡಗಿ, ಉಪ-ಪ್ರಾಂಶುಪಾಲರಾದ ಡಾ. ಆರ್. ಎಸ್. ಬಳಿಗಾರ ಉಪಸ್ಥಿತರಿದ್ದರು. ಪ್ರಾಂಶುಪಾಲರಾದ ಡಾ. ಬಿ. ಎಂ. ತುರಡಗಿ ಸ್ವಾಗತ ಮಾಡಿದರು. ಸಂಯೋಜಕರಾದ ಡಾ. ಎಂ. ಎಫ್. ನಾಗಣ್ಣವರ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಡಾ. ಬಿ. ಎಂ. ಮಾಸ್ತಿಹೊಳಿ ವಂದನಾರೆ್ಣ ಮಾಡಿದರು. ಕಾರ‌್ಯಕ್ರಮದ ನಿರೂಪಣೆಯನ್ನು ಡಾ. ಕೃಷ್ಣಮೂರ್ತಿ ಎಂ. ಎಸ್. ಮತ್ತು ಸಂತೋಷ ಚೌವಾಣ ನಿರ್ವಹಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 