ನಿರಂತರ ಅಧ್ಯಯನದಿಂದ ಉಜ್ವಲ ಭವಿಷ್ಯ ಸಾಧ್ಯ: ಸುರೇಶ ಕೆ. ಪಿ
A bright future is possible with continuous study: Suresh K. P
ಧಾರವಾಡ, 18 ; ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ನಿರಂತರ ಹಾಗೂ ಇಷ್ಟ ಪಟ್ಟು ಅಧ್ಯಯನ ಮಾಡಿ ಉಜ್ವಲ ಭವಿಷ್ಯವನ್ನು ರೂಪಿಸಿಕೊಂಡು ದೇಶಕ್ಕೆ ಸತ್‌ಪ್ರಜೆಗಳಾಗಿ ದೇಶದ ಅಭಿವೃಧ್ಧಿಗೆ ಕೊಡುಗೆ ನೀಡಬೇಕೆಂದು ಸಾರ್ವಜನಿಕ ಶಿಕ್ಷಣ ಇಲಾಖೆ ಪದವಿ ಪೂರ್ವ ಉಪನೀರ್ದೆಶಕ ಸುರೇಶ ಕೆ. ಪಿ ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ನಗರದ ಮಾಳಮಡ್ಡಿಯ ಕೆ.ಇ. ಬೋರ್ಡಿನ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿ ಒಕ್ಕೂಟ ಹಾಗೂ ಕ್ರೀಡಾ ಚಟುವಟಿಕೆಗಳ ಉದ್ಘಾಟನೆ ಮತ್ತು ಪ್ರಥಮ ಪಿ.ಯು.ಸಿ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭದಲ್ಲಿ ಮಾತನಾಡಿ, ಧಾರವಾಡ ವಿದ್ಯಾಕಾಶಿಯಾಗಲು ಕೆ.ಇ. ಬೋರ್ಡ ಸಂಸ್ಥೆಯ ಕೊಡುಗೆ ಅಪಾರವಾಗಿದೆ. ವಿದ್ಯಾರ್ಥಿಗಳಿಗೆ ಎದೆಗೆ ಬಿದ್ದ ಅಕ್ಷರ ಹಾಗೂ ಭೂಮಿಗೆ ಬಿದ್ದ ಬೀಜ ಯಾವಾಗಲು ಒಳ್ಳೆಯ ಫಲವನ್ನು ಕೊಡುತ್ತದೆ ಎಂದು ಹೇಳುವುದರ ಮೂಲಕ ವಿದ್ಯಾರ್ಥಿಗಳಿಗೆ ಅಧ್ಯಯನದಲ್ಲಿ ಹೆಚ್ಚು ಆಸಕ್ತಿಯನ್ನು ಬೆಳೆಸಿಕೊಳ್ಳಲು ಹುರಿದುಂಬಿಸಿದರು. ವಿಶೇಷವಾಗಿ ವಿದ್ಯಾರ್ಥಿನಿಯರು ಉನ್ನತ ಅಧ್ಯಯನ ಮಾಡುವದರಿಂದ ಸಮಾಜ ಸದೃಢವಾಗುತ್ತದೆ ಎಂದು ತಿಳಿಸಿದರು.
ಅಧ್ಯಕ್ಷತೆ ವಹಿಸಿದ ಕೆ.ಇ. ಬೋರ್ಡಿನ ಕಾರ್ಯದರ್ಶಿ ಡಿ.ಎಸ್. ರಾಜಪುರೋಹಿತ ಮಾತನಾಡಿ, ವಿದ್ಯಾರ್ಥಿಗಳ ದೃಢ ನಿರ್ಧಾರ ಮತ್ತು ದೃಢ ಸಂಕಲ್ಪವನ್ನು ಮಾಡಿ ಆತ್ಮವಿಶ್ವಾಸವನ್ನು ಬೆಳೆಸಿಕೊಂಡು ಗುರಿಯನ್ನು ಸಾಧಿಸುವ ಪ್ರಯತ್ನವನ್ನು ಮಾಡಬೇಕು. ಅದರಂತೆ ವಿದ್ಯಾರ್ಥಿಗಳು ಸಂಸ್ಕಾರ ಹಾಗೂ ಒಳ್ಳೆಯ ನಡತೆಯನ್ನು ಬೆಳೆಸಿಕೊಂಡು ಶಿಕ್ಷಣ ಸಂಸ್ಥೆಯನ್ನು ಉನ್ನತ ಮಟ್ಟಕ್ಕೆ ಬೆಳೆಸಬೇಕೆಂದು ಮಾರ್ಮಿಕವಾಗಿ ವಿವರಿಸಿದರು.
ಪ್ರಾಚಾರ್ಯೆ ಡಾ. ಸುನಿತಾ ಕಡಪಟ್ಟಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಹಿರಿಯ ಉಪನ್ಯಾಸಕ ಎಸ್.ಎಲ್. ಶೇಖರಗೋಳ ಅತಿಥಿ ಮತ್ತು ಅಧ್ಯಕ್ಷರನ್ನು ಪರಿಚಯಿಸಿದರು. ವಿದ್ಯಾರ್ಥಿ ಕಲ್ಯಾಣ ನಿಧಿಯಿಂದ ಅರ್ಹ ಹಾಗೂ ಬಡ ವಿದ್ಯಾರ್ಥಿಗಳಿಗೆ ಪಠ್ಯ ಪುಸ್ತಕಗಳು ಮತ್ತು ನೋಟ ಬುಕ್‌ಗಳನ್ನು ವಿತರಿಸಲಾಯಿತು. ಒಕ್ಕೂಟದ ಪದಾಧಿಕಾರಿಗಳಿಗೆ ಉಪನ್ಯಾಸಕ ಹನುಮಂತಪ್ಪ ಕಳಸಪ್ಪನವರ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ಕುಮಾರಿ. ರಾಮೇಶ್ವರಿ ಹಾಗೂ ಅಮೂಲ್ಯಾ ನಿರೂಪಿಸಿದರು. ಸಂಜನಾ ಬಡಿಗೇರ ವಂದಿಸಿದರು.
ಈ ಸಂದರ್ಭದಲ್ಲಿ ಲಿಂಗರಾಜ ಬೆಲ್ಲದ, ವಸಂತ ಮುರ್ಡೇಶ್ವರ ಹಾಗೂ ಮಹಾವಿದ್ಯಾಲಯದ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳಿದ್ದರು.
ಮಾಳಮಡ್ಡಿಯ ಕೆ.ಇ. ಬೋರ್ಡಿನ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಏರಿ್ಡಸಿದ ಸಾಂಸ್ಕ್ರತಿಕ ಮತ್ತು ಕ್ರೀಡಾ ಚಟುವಟಿಗಳ ಕಾರ್ಯಕ್ರಮವನ್ನು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನೀರ್ದೆಶಕ ಸುರೇಶ ಕೆ. ಪಿ ಉದ್ಘಾಟಿಸಿದರು ಸಂಸ್ಥೆಯ ಕಾರ್ಯದರ್ಶಿ ಡಿ.ಎಸ್. ರಾಜಪುರೋಹಿತ, ಪ್ರಾಚಾರ್ಯೆ ಡಾ. ಸುನಿತಾ ಕಡಪಟ್ಟಿ, ಎಸ್.ಎಲ್. ಶೇಖರಗೋಳ, ತೇಜಸ್ವಿನಿ ನಾರಾಯಣಕರ, ಹೇಮಲತಾ ಕರಿಗಾರ ಮುಂತಾದವರಿದ್ದರು.
ಮಾಳಮಡ್ಡಿಯ ಕೆ.ಇ. ಬೋರ್ಡಿನ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಏರಿ್ಡಸಿದ ಸಾಂಸ್ಕ್ರತಿಕ ಮತ್ತು ಕ್ರೀಡಾ ಚಟುವಟಿಗಳ ಕಾರ್ಯಕ್ರಮವನ್ನು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನೀರ್ದೆಶಕ ಸುರೇಶ ಕೆ. ಪಿ ಉದ್ಘಾಟಿಸಿ ಮಾತನಾಡುತ್ತಿರುವದು.
ಮಾಳಮಡ್ಡಿಯ ಕೆ.ಇ. ಬೋರ್ಡಿನ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಏರಿ್ಡಸಿದ ಸಾಂಸ್ಕ್ರತಿಕ ಮತ್ತು ಕ್ರೀಡಾ ಚಟುವಟಿಗಳ ಕಾರ್ಯಕ್ರಮದಲ್ಲಿ ಒಕ್ಕೂಟದ ಪದಾಧಿಕಾರಿಗಳಿಗೆ ಪ್ರತಿಜ್ಞಾ ವಿಧಿಯನ್ನು ಬೋಧಿಸಲಾಯಿತು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 