ಗಾಂಧಿ ಜಯಂತಿ, ಲಾಲ್‌ಬಹದ್ದೂರ ಶಾಸ್ತ್ರೀ ಜಯಂತಿ ಅರ್ಥಪೂರ್ಣ ಆಚರಣೆಗೆ ಕರೆ
A call for meaningful celebration of Gandhi Jayanti, Lal Bahadur Shastri Jayanti
ಲೋಕದರ್ಶನ ವರದಿ
ಹಾವೇರಿ 21: ಅಕ್ಟೋಬರ್ 2 ರಂದು ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿಯನ್ನು ಜಿಲ್ಲೆಯಾದ್ಯಂತ ಎಲ್ಲ ಇಲಾಖೆಗಳ ಸಮನ್ವಯದೊಂದಿಗೆ ಅರ್ಥಪೂರ್ಣವಾಗಿ ಆಚರಿಸಬೇಕು ಎಂದು ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಡಾ. ಎಲ್. ನಾಗರಾಜ ಸೂಚಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಯಂತಿ ಅಂಗವಾಗಿ ಸ್ವಚ್ಛತಾ ಶ್ರಮದಾನ, ಗಿಡ ನೆಡುವಿಕೆ ಹಾಗೂ ಪರಿಸರ ಸಂರಕ್ಷಣಾ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಗಾಂಧೀಜಿಯವರ ಸ್ವಚ್ಛತೆ, ಶ್ರಮದ ಗೌರವ ಮತ್ತು ಸೇವಾ ಮನೋಭಾವದ ಸಂದೇಶವನ್ನು ಜನರಿಗೆ ತಲುಪಿಸಬೇಕು ಎಂದರು.
ಶ್ರಮದಾನಕ್ಕೆ ಆದ್ಯತೆ: ಗಾಂಧೀಜಿಯವರ ಸ್ವಚ್ಛತೆ, ಶ್ರಮದ ಗೌರವ, ಸ್ವಾವಲಂಬನೆ ಹಾಗೂ ಸಾಮಾಜಿಕ ಸೇವೆಯ ಆಶಯಗಳನ್ನು ಜನರಲ್ಲಿ ಬೆಳೆಸುವ ಉದ್ದೇಶದಿಂದ ಜಯಂತಿ ಅಂಗವಾಗಿ ವಿವಿಧೆಡೆ ಶ್ರಮದಾನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು.
ಶಾಲಾ-ಕಾಲೇಜುಗಳು, ಸರ್ಕಾರಿ ಕಚೇರಿಗಳು, ಗ್ರಾಮ ಪಂಚಾಯಿತಿಗಳು, ನಗರ ಸ್ಥಳೀಯ ಸಂಸ್ಥೆಗಳು ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ಸ್ವಚ್ಛತಾ ಕಾರ್ಯಗಳನ್ನು ಕೈಗೊಳ್ಳಬೇಕು ಎಂದರು.
ಜಿಲ್ಲೆಯ ಎಲ್ಲ ಇಲಾಖೆಗಳು ಸೆಪ್ಟೆಂಬರ್ 30 ರಂದು ಸಾರ್ವಜನಿಕ ಸ್ಥಳಗಳು, ರಸ್ತೆಗಳು ಹಾಗೂ ಕಚೇರಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸ್ವಚ್ಛತಾ ಕಾರ್ಯ ಕೈಗೊಳ್ಳಬೇಕು. ಕಚೇರಿ ಆವರಣವನ್ನು ಸ್ವಚ್ಛಗೊಳಿಸುವುದು,
ಪ್ಲಾಸ್ಟಿಕ್ ತ್ಯಾಜ್ಯವನ್ನು ಸಂಗ್ರಹಿಸಿ ವೈಜ್ಞಾನಿಕವಾಗಿ ವಿಲೇವಾರಿ ಮಾಡುವುದು ಸೇರಿದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು. ಸ್ವಚ್ಛತಾ ಕಾರ್ಯಕ್ಕೆ ಅಗತ್ಯವಿರುವ ಸಾಮಗ್ರಿಗಳನ್ನು ನಗರಸಭೆ ವತಿಯಿಂದ ಒದಗಿಸಲು ಕ್ರಮವಹಿಸಬೇಕು ಎಂದು ತಿಳಿಸಿದರು.
ಗಾಂಧೀಜಿಯವರ ಸ್ವಚ್ಛತೆ ಮತ್ತು ಸೇವೆಯ ಆಶಯಗಳನ್ನು ಜನಜೀವನದಲ್ಲಿ ಅಳವಡಿಸಿಕೊಳ್ಳುವಂತೆ ಗ್ರಾಮ ಹಾಗೂ ನಗರ ಪ್ರದೇಶಗಳಲ್ಲಿ ಸ್ವಚ್ಛತಾ ಜಾಗೃತಿ ಅಭಿಯಾನ ನಡೆಸಬೇಕು. ಸಾರ್ವಜನಿಕ ಸ್ಥಳಗಳನ್ನು ಸ್ವಚ್ಛವಾಗಿಡುವ ಜವಾಬ್ದಾರಿ ಪ್ರತಿಯೊಬ್ಬರಲ್ಲೂ ಮೂಡಿಸುವುದರ ಜೊತೆಗೆ ಸಮುದಾಯದ ಸಹಭಾಗಿತ್ವವನ್ನು ಹೆಚ್ಚಿಸಬೇಕು.
ಶ್ರಮದಾನವನ್ನು ಕೇವಲ ಒಂದು ದಿನದ ಕಾರ್ಯಕ್ರಮಕ್ಕೆ ಸೀಮಿತಗೊಳಿಸದೆ, ನಿರಂತರ ಸ್ವಚ್ಛತೆ ಹಾಗೂ ಸಾರ್ವಜನಿಕ ಸೇವೆಯ ಮನೋಭಾವ ಬೆಳೆಸುವ ಕಾರ್ಯಕ್ರಮವನ್ನಾಗಿ ರೂಪಿಸಬೇಕು ಎಂದರು.
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ 