ತಾಲ್ಲೂಕಿಗೆ ನಡುಕ ತಂದ ಪ್ರಕರಣ: ಕೊಳಗಿ ಅರಣ್ಯದಲ್ಲಿ ರುಂಡವಿಲ್ಲದ ಮಹಿಳೆಯ ಶವ ಪತ್ತೆ
A case that shook the taluk: A woman's body, missing from her body, was found in the Kolagi forest
ಲೋಕದರ್ಶನ ವರದಿ
ಮುಂಡಗೋಡ 21: ತಾಲೂಕಿನ ಮಳಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಳಗಿ ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ರುಂಡವಿಲ್ಲದ ಮಹಿಳೆಯ ಮೃತದೇಹ ಪತ್ತೆಯಾದ ಘಟನೆ ತಾಲೂಕಿನಲ್ಲಿ ಭೀತಿ ಮೂಡಿಸಿದೆ.
ಶುಕ್ರವಾರ ಸಂಜೆ ಅರಣ್ಯ ಪ್ರದೇಶಕ್ಕೆ ಉರುವಲು ಕಟ್ಟಿಗೆ ತರಲು ತೆರಳಿದ್ದ ಕೆಲ ಗ್ರಾಮಸ್ಥರು ಮರದ ಎಲೆಗಳು ಹಾಗೂ ಟೊಂಗೆಗಳಿಂದ ಮುಚ್ಚಲ್ಪಟ್ಟಿದ್ದ ಶವವನ್ನು ಗಮನಿಸಿ ಬೆಚ್ಚಿಬಿದ್ದು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ಪರೀಶೀಲನೆ ನಡೆಸಿದಾಗ, ಶವವು ಸುಮಾರು 35ಹಿ40 ವರ್ಷ ವಯಸ್ಸಿನ ಮಹಿಳೆಯದ್ದಾಗಿದ್ದು, ಪ್ರಾಥಮಿಕ ಅಂದಾಜು ಪ್ರಕಾರ ಎರಡು ದಿನಗಳ ಹಿಂದೆ ಹತ್ಯೆ ನಡೆದಿರಬಹುದೆಂದು ತಿಳಿದುಬಂದಿದೆ.
ಆರೋಪಿಗಳು ಗುರುತು ಪತ್ತೆಯಾಗದಂತೆ ಮಾಡಲು ಶವವನ್ನು ಎಲೆಗಳಿಂದ ಮುಚ್ಚಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದೆ. ಮೃತದೇಹದ ತಲೆಯನ್ನು ಬೇರಿ್ಡಸಿರುವುದು ಪ್ರಕರಣದ ಗಂಭೀರತೆಯನ್ನು ಹೆಚ್ಚಿಸಿದೆ. ಶವವು ನಗ್ನ ಸ್ಥಿತಿಯಲ್ಲಿ ಪತ್ತೆಯಾಗಿರುವುದೂ ಹಲವು ಅನುಮಾನಗಳಿಗೆ ಕಾರಣವಾಗಿದೆ. ಸಿಪಿಐ ರಂಗನಾಥ ನೀಲಮ್ಮನವರ್ ಅವರ ನೇತೃತ್ವದ ಪೊಲೀಸ್ ತಂಡ ಸ್ಥಳ ಪರೀಶೀಲನೆ ನಡೆಸಿ ಅಗತ್ಯ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿದೆ. ಪಿಎಸ್‌ಐ ಮಂಜುನಾಥ ಗೌಡ ಅವರು ಕೂಡ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರೀಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಪ್ರಕರಣದ ತನಿಖೆ ತೀವ್ರಗೊಳಿಸಲಾಗಿದೆ.
ಮೃತೆಯ ಗುರುತು ಇನ್ನೂ ಪತ್ತೆಯಾಗಿಲ್ಲ. ಸುತ್ತಮುತ್ತಲಿನ ಪೊಲೀಸ್ ಠಾಣೆಗಳಿಗೆ ಮಾಹಿತಿ ರವಾನಿಸಲಾಗಿದ್ದು, ಕಾಣೆಯಾಗಿರುವ ಮಹಿಳೆಯರ ವಿವರಗಳನ್ನು ಪರೀಶೀಲಿಸಲಾಗುತ್ತಿದೆ. ರುಂಡಕ್ಕಾಗಿ ಶೋಧನಾ ಕಾರ್ಯಾಚರಣೆ ಮುಂದುವರಿದಿದೆ. ಕೊಲೆ ಸ್ಥಳೀಯರದ್ದೇನಾ ಅಥವಾ ಬೇರೆ ತಾಲೂಕಿನವರ ಕೈಚಳಕವೋ ಎಂಬುದು ತನಿಖೆಯಿಂದಲೇ ತಿಳಿಯಬೇಕಿದೆ.
ಅದ್ದೂರಿಯಿಂದ ಜರುಗಿದ ಕೋಣ ಬಿಡುವ ಸಂಪ್ರದಾಯ ಕಾರ್ಯಕ್ರಮ : ಸಂಕೇಶ್ವರ ಮಹಾಲಕ್ಷ್ಮೀ ಜಾತ್ರೆಯ ಚೊಚ್ವಲು ಕಾರ್ಯಕ್ಕೆ ಚಾಲನೆ
ನಂದು ಮುಡಶಿ ಬೆವರು ಸುರಿಸಿ ಸ್ವಂತ ಜಮೀನಿನಲ್ಲಿ ಬೆಳೆದ ಅಕ್ಕಿ, ಜೋಳ ತಂದು ಕೊಟ್ಟಿಲ್ಲ. ಎಲ್ಲಿಂದ ಬಂದಿವೆ, ಆತನ ಸಾತಭಾರ ನನಗೆ ಗೊತ್ತಿದೆ : ಬಸನಗೌಡಾ
ಮಾಹಾಲಕ್ಷ್ಮೀ ಜಾತ್ರೆ ಲೆಕ್ಕ ಸಭೆಯಲ್ಲಿ ರಾಜಕೀಯ ಹಗ್ಗ ಜಗ್ಗಾಟದಿಂದ ಗಲಾಟೆ, ಆನೆ, ಪ್ರಮಾಣದಿಂದ ಜನರ ಛೀಮಾರಿ
ಸ್ಕೈರೂಟ್ ಏರೋಸ್ಪೇಸ್ನ ವಿಕ್ರಮ್-1 ಉಡಾವಣೆ ಭಾರತದ ಖಾಸಗಿ ಬಾಹ್ಯಾಕಾಶ ಕ್ಷೇತ್ರಕ್ಕೆ ಮಹತ್ವದ ಮೈಲುಗಲ್ಲು: ಪ್ರಧಾನಿ ಮೋದಿ
ಜೊಡಿ ಹತ್ಯೆಗೆ ತಿರುವು: ಆಸ್ತಿಗಾಗಿ ಇಬ್ಬರು ಮೈದುನರ ಹತ್ಯೆ ಮಾಡಿಸಿದ ಅತ್ತಿಗೆ : ಪೊಲೀಸ ತನಿಖೆಯಲ್ಲಿ ಬಹಿರಂಗ
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು 