ಯಶಸ್ಸಿಗೆ ಸ್ಪಷ್ಟ ಗುರಿ ಮುಖ್ಯ - ಪ್ರವೀಣ ಕುಂಬಾರ
A clear goal is important for success - Praveen Kumbara
ಹಾವೇರಿ, 29: ಜೀವನದಲ್ಲಿ ಸ್ಪಷ್ಟವಾದ ಗುರಿ ಇದ್ದಾಗ ಮಾತ್ರ ಯಶಸ್ಸು ಸಾಧ್ಯ ಆಗುತ್ತದೆ ಎಂದು ಪತ್ರಕರ್ತ ಪ್ರವೀಣ ಕುಂಬಾರ ಹೇಳಿದರು. ಅವರು ಕೆ.ಎಲ್.ಇ. ಸಂಸ್ಥೆಯ ಗುದ್ಲೆಪ್ಪ ಹಳ್ಳಿಕೇರಿ ಪದವಿ ಪೂರ್ವ ಮಹಾವಿದ್ಯಾಲಯದ 2025-26 ನೇ ಸಾಲಿನ ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳ ಸಮಾರೋಪ ಸಮಾರಂಭದಲ್ಲಿ ಮಾತನಾಡುತ್ತಿದ್ದರು. ಸಾಮಾಜಿಕ ಜಾಲತಾಣಗಳ ಪ್ರಭಾವಕ್ಕೆ ಇಂದಿನ ವಿದ್ಯಾರ್ಥಿಗಳು ಹೆಚ್ಚು ಹೆಚ್ಚು ಆಕರ್ಷಿತರಾಗುತ್ತಿದ್ದಾರೆ. ಇದರಿಂದ ಶೈಕ್ಷಣಿಕವಾಗಿ ಹಾಗೂ ಸಾಮಾಜಿಕವಾಗಿ ವಿದ್ಯಾರ್ಥಿಗಳಿಗೆ ಸಮಸ್ಯೆ ಆಗುತ್ತಿದೆ. ಹೀಗಾಗಿ ಈ ಪ್ರಭಾವದಿಂದ ಹೊರಗಡೆ ಬಂದರೆ ಒಳ್ಳೆಯದು. ಜಾಗತಿಕವಾಗಿ ನಿರುದ್ಯೋಗ ಸಮಸ್ಯೆ ತಾಂಡವಾಡುತ್ತಿದೆ. ಇದರ ಹೊರತಾಗಿಯೂ ವಿದ್ಯಾರ್ಥಿಗಳು ಬದುಕು ಕಟ್ಟಿಕೊಳ್ಳುವ ಅನಿವಾರ್ಯತೆ ಇದೆ. ಹೀಗಾಗಿ ಅಂಕಗಳಿಗೆ ಮಾತ್ರ ಸೀಮಿತವಾಗದೆ ಉದ್ಯೋಗಕ್ಕೆ ಅವಶ್ಯಕತೆ ಇರುವ ಕೌಶಲ್ಯಗಳನ್ನು ಬೆಳೆಸಿಕೊಂಡರೆ ಮಾತ್ರ ಓದ್ಯೋಗಿಕ ಜಗತ್ತಿನಲ್ಲಿ ಮನ್ನಣೆ ಇದೆ ಎಂದು ತಿಳಿಸಿದರು.
ಉದ್ಘಾಟಿಸಿ ಮಾತನಾಡಿದ ಪದವಿ ಪ್ರಾಚಾರ್ಯ ಪ್ರೊ. ಎಂ. ಎಂ. ಹೊಳ್ಳಿಯವರ ಶೈಕ್ಷಣಿಕ ಚಟುವಟಿಕೆಯಲ್ಲಿ ವಿದ್ಯಾರ್ಥಿಗಳು ಹೆಚ್ಚು ಹೆಚ್ಚು ಭಾಗವಹಿಸಿ ಸೃಜನಶೀಲ ವ್ಯಕ್ತಿತ್ವ ಕೌಶಲ ಅಳವಡಿಸಿಕೊಂಡು ಜ್ಞಾನದ ವಿಸ್ತರಣೆ ಮಾಡಿಕೊಳ್ಳಬೇಕೆಂದರು. ಅಧ್ಯಕ್ಷತೆ ವಹಿಸಿದ್ದ ಪದವಿ ಪೂರ್ವ ಪ್ರಾಚಾರ್ಯ ಡಾ. ಜೆ. ಆರ್ ಶಿಂಧೆ ಮಾತನಾಡಿ ವಿದ್ಯಾರ್ಥಿಗಳು ಕಲಿತ ಸಂಸ್ಥೆಗೆ, ತಂದೆ-ತಾಯಿಗಳಿಗೆ, ಗುರುಗಳಿಗೆ ಋಣಿಯಾಗಿ ಸಮಾಜದಲ್ಲಿ ಉತ್ತಮ ವ್ಯಕ್ತಿಗಳಾಗಿ ಹೊರಹೊಮ್ಮಿ ಆದರ್ಶ ಸಮಾಜ ಕಟ್ಟುವ ರೀತಿಯಲ್ಲಿ ರೂಪುಗೊಳ್ಳಬೇಕಿದೆ ಎಂದು ಹೇಳಿದರು. ಪ್ರೊ. ಸಿದ್ದೇಶ್ವರ ಹುಣಸಿಕಟ್ಟಿಮಠ ಪ್ರಾಸ್ತಾವಿಕವಾಗಿ ಮಾತನಾಡಿದರು.
ಪ್ರೊ. ಬಸವರಾಜೇಶ್ವರಿ ಜಿ. ಕೆ. ಸ್ವಾಗತಿಸಿದರು. ಪ್ರೊ. ಅನಿತಾ ಉಗರಗೋಳ ಪರಿಚಯಿಸಿದರು. ಪ್ರೊ. ಪ್ರಶಾಂತ ಕೊರಿಶೆಟ್ಟರ, ಪ್ರೊ. ನಾಗರಾಜ ಮುಚ್ಚಟ್ಟಿ, ಪ್ರೊ. ಗದಿಗಯ್ಯ ಹಿರೇಮಠ, ಮಾತನಾಡಿದರು. ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಾದ ಅಮೃತಾ ಜಂಗರ, ಸಿಂಚನಾ ಪಲ್ಮರಿ, ಸೌಮ್ಯ ಹಿರೇಮಠ, ಪಾರ್ವತಿ ಬೆಂತೂರ, ಬಿರೇಶ ಹತ್ತಿಯವರ ಅನಿಸಿಕೆ ಹಂಚಿಕೊಂಡರು. ಪ್ರೊ. ಆರ್. ಎಸ್. ರಾಯ್ಕರ. ಪ್ರೊ. ಎಮ್. ಎಸ್. ಬೆಂಡಿಗೇರಿ. ಡಾ. ಎಮ್. ವ್ಹಿ. ಸಾತೇನಹಳ್ಳಿ ಹಾಗೂ ಬೋಧಕ ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು. ರಮ್ಯಾ ಬಾರ್ಕೆರ್ ಪ್ರಾರ್ಥಿಸಿದರು. ಪ್ರೊ. ಅಕ್ಷತಾ ಹಿರೇಮಠ ನಿರೂಪಿಸಿದರು. ಪ್ರೊ. ಸಾಯಿ ಪೂಜಾ ಬಿ. ಹೆಚ್. ವಂದಿಸಿದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 