ಪಕ್ಷಕ್ಕಾಗಿ ಕೊಡುಗೆ ನೀಡಿದ ಮಹನೀಯರನ್ನು ಸ್ಮರಿಸುವ ದಿನ : ಬೊಮ್ಮಾಯಿ
ಶಿಗ್ಗಾವಿ 06: ವಿಶ್ವದಲ್ಲಿ ಅತಿ ಹೆಚ್ಚು ಸದಸ್ಯತ್ವ ಹೊಂದಿರುವ ಪಕ್ಷ ಅದು ಭಾರತೀಯ ಜನತಾ ಪಕ್ಷ ಎಂದು ಹಾವೇರಿ - ಗದಗ ಲೋಕಸಭಾ ಕ್ಷೇತ್ರದ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ತಾಲೂಕಿನ ಬಿಸನಹಳ್ಳಿ ಗ್ರಾಮದಲ್ಲಿ ಭಾರತೀಯ ಜನತಾ ಪಕ್ಷದ ಸಂಸ್ಥಾಪನಾ ದಿನಾಚರಣೆ ನಿಮಿತ್ಯವಾಗಿ ಭಾರತ ಮಾತೆ ಭಾವಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸಿ ಮಾತನಾಡಿದ ಅವರು ಭಾರತೀಯ ಜನತಾ ಪಕ್ಷ ಪಕ್ಷದ ಸಂಘಟನೆಗಾಗಿ ಅನೇಕ ಹಿರಿಯ ನಾಯಕರು ಹಾಗೂ ನಿಷ್ಠಾವಂತ ಕಾರ್ಯಕರ್ತರು ತಮ್ಮ ಜೀವನವನ್ನು ತ್ಯಾಗ ಮಾಡಿ ಪಕ್ಷಕ್ಕಾಗಿ ಕೊಡುಗೆ ನೀಡಿದ ಮಹನೀಯರನ್ನು ಸ್ಮರಿಸುವ ದಿನವಾಗಿದೆ ಎಂದರು. ಈ ಸಂಧರ್ಭದಲ್ಲಿ ಯುವ ಮುಖಂಡ ಭರತ ಬೊಮ್ಮಾಯಿ, ಬಿ.ಜೆ.ಪಿ ತಾಲೂಕು ಅಧ್ಯಕ್ಷ ವಿಶ್ವನಾಥ ಹರವಿ, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಶಶಿಧರ ಹೊನ್ನಣ್ಣನವರ, ಉಮೇಶ ಅಂಗಡಿ, ಗಂಗಣ್ಣ ಸವಣೂರ, ಎಂ ಹೊನ್ನಕೇರಿ, ಪರಶುರಾಮ ಸೊನ್ನದ ಸೇರಿದಂತೆ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.