ವಿದ್ಯಾರ್ಥಿ ಜೀವನದಲ್ಲಿ ಸಾಧನೆಯ ಹಂಬಲ ಅಗತ್ಯ
A desire to achieve is essential in student life
ಲೋಕದರ್ಶನ ವರದಿ
ಗಜೇಂದ್ರಗಡ, ಜು. 3: ವಿದ್ಯಾರ್ಥಿ ಜೀವನದಲ್ಲಿ ಸ್ಪಷ್ಟ ಗುರಿ, ನಿರಂತರ ಪರಿಶ್ರಮ ಹಾಗೂ ಸಾಧನೆಯ ಹಂಬಲ ಬೆಳೆಸಿಕೊಂಡರೆ ಉನ್ನತ ಸ್ಥಾನಗಳನ್ನು ತಲುಪಲು ಸಾಧ್ಯ ಎಂದು ವಿವಿಧ ಗಣ್ಯರು ಅಭಿಪ್ರಾಯಪಟ್ಟರು. ನಗರದ ಶ್ರೀ ಅನ್ನದಾನೇಶ್ವರ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಶುಕ್ರವಾರ ಆಯೋಜಿಸಿದ್ದ ’ವಿರಾಟ್-2026’ ಕಾರ್ಯಕ್ರಮದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಹಾಗೂ ವಿವಿಧ ಸಾಂಸ್ಕೃತಿಕ ಚಟುವಟಿಕೆಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.
ಅನ್ನದಾನೇಶ್ವರ ಪಿಯು ಕಾಲೇಜಿನ ಅಧ್ಯಕ್ಷ ವೀರಯ್ಯ ವಿ. ವಸ್ತ್ರದ ಮಾತನಾಡಿ, ಗುರಿ ನಿಗದಿಪಡಿಸಿದ ಬಳಿಕ ಅದನ್ನು ಸಾಧಿಸುವವರೆಗೆ ನಿರಂತರ ಪ್ರಯತ್ನ ಮಾಡಬೇಕು. ಶಿಕ್ಷಕರ ಮಾರ್ಗದರ್ಶನವನ್ನು ಅನುಸರಿಸಿ ಶ್ರಮಿಸಿದರೆ ಯಶಸ್ಸು ಖಚಿತ ಎಂದರು. ಸರ್ಕಾರಿ ಪದವಿ ಕಾಲೇಜಿನ ಪ್ರಾಚಾರ್ಯ ಬಸವಂತಪ್ಪ ಹೊಸಳ್ಳಿ ಮಾತನಾಡಿ, ವಿದ್ಯಾರ್ಥಿಗಳು ಉತ್ತಮ ಸಂಕಲ್ಪ, ಆತ್ಮವಿಶ್ವಾಸ ಹಾಗೂ ಪರಿಶ್ರಮದ ಮೂಲಕ ಜೀವನದಲ್ಲಿ ಯಶಸ್ಸು ಸಾಧಿಸಬಹುದು. ಶಿಸ್ತು, ಜವಾಬ್ದಾರಿ ಮತ್ತು ಪ್ರಾಮಾಣಿಕತೆ ವ್ಯಕ್ತಿತ್ವದ ಪ್ರಮುಖ ಗುಣಗಳಾಗಿವೆ ಎಂದು ತಿಳಿಸಿದರು.
ಕಾರ್ಯಕ್ರಮ ಉದ್ಘಾಟಿಸಿದ ಅನ್ನದಾನೇಶ್ವರ ಪದವಿ ಕಾಲೇಜಿನ ಪ್ರಾಚಾರ್ಯ ಎಸ್.ಜಿ. ಕೇಶಣ್ಣವರ ಮಾತನಾಡಿ, ಸಣ್ಣ ಕನಸುಗಳಿಗಿಂತ ದೊಡ್ಡ ಗುರಿಗಳನ್ನು ಇಟ್ಟುಕೊಂಡು ನಿರಂತರವಾಗಿ ಶ್ರಮಿಸಿದರೆ ಸಾಧನೆ ಸಾಧ್ಯವಾಗುತ್ತದೆ ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಶೈಕ್ಷಣಿಕ ಸಲಹೆಗಾರ ಬಿ.ಎಸ್. ಗೌಡರ ಮಾತನಾಡಿ, ಉತ್ತಮ ಅಂಕಗಳ ಜೊತೆಗೆ ಸಂಸ್ಕಾರ ಮತ್ತು ಸಂಸ್ಕೃತಿಯೂ ವಿದ್ಯಾರ್ಥಿಗಳ ವ್ಯಕ್ತಿತ್ವ ನಿರ್ಮಾಣಕ್ಕೆ ಅಗತ್ಯವಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಚಾರ್ಯ ವಸಂತರಾವ್ ಗಾರಗಿ ಪ್ರಾಸ್ತಾವಿಕವಾಗಿ ಮಾತನಾಡಿದರು. ದ್ವಿತೀಯ ಪಿಯುಸಿ ಕಂಪ್ಯೂಟರ್ ಸೈನ್ಸ್ ವಿಷಯದಲ್ಲಿ ಶೇ.100 ಫಲಿತಾಂಶ ದಾಖಲಿಸಿದ ಉಪನ್ಯಾಸಕ ಚಂದ್ರು ಎಂ. ರಾಠೋಡ್ ಅವರನ್ನು ಸನ್ಮಾನಿಸಲಾಯಿತು. ಕಾಲೇಜಿನ ಆಡಳಿತ ಮಂಡಳಿ ಸದಸ್ಯರು, ಶಿಕ್ಷಣ ತಜ್ಞರು, ವಿವಿಧ ಕಾಲೇಜುಗಳ ಪ್ರಾಚಾರ್ಯರು, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ 