ನಾಲ್ಕು ದಶಕಗಳ ಕನಸು ನನಸು: ಮದುವಣಗಿತ್ತಿಯಂತೆ ಶೃಂಗಾರಗೊಂಡ ಪಟ್ಟಣ ಮನೆ ಮಾಡಿದ ಹಬ್ಬದ ಸಂಭ್ರಮ
A dream of four decades comes true: A festive celebration of a townhouse decorated like a bride
ಮೇ 4ರಿಂದ ಗ್ರಾಮದೇವಿ ಜಾತ್ರೆ: ನಗರಕ್ಕೆ ಹೊಸ ಕಳೆ
ಸವದತ್ತಿ 01: ಸುಮಾರು 44 ವರ್ಷಗಳ ದೀರ್ಘ ಕಾಯುವಿಕೆಯ ನಂತರ ಪಟ್ಟಣದಲ್ಲಿ ಜರುಗಲಿರುವ ಇತಿಹಾಸ ಪ್ರಸಿದ್ಧ ಗ್ರಾಮದೇವಿ ಜಾತ್ರಾ ಮಹೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿದೆ. ಮೇ 4ರಿಂದ ಆರಂಭವಾಗಲಿರುವ ಈ ಸಂಭ್ರಮವು ಇಡೀ ನಗರಕ್ಕೆ ಹೊಸ ಕಳೆ ತಂದಿದ್ದು, ಪಟ್ಟಣವು ಮದುವಣಗಿತ್ತಿಯಂತೆ ಶೃಂಗಾರಗೊಳ್ಳುತ್ತಿದೆ. ಹಬ್ಬದ ಸಡಗರ ಸಂಭ್ರಮ ಮನೆ ಮಾಡಿದೆ. ಜಾತ್ರೆಯ ಹಿನ್ನೆಲೆಯಲ್ಲಿ ಪಟ್ಟಣದ ಗಲ್ಲಿ ಗಲ್ಲಿಗಳಲ್ಲೂ ಕೇಸರಿ ಧ್ವಜಗಳು, ಫರಫರಿಗಳು ಹಾಗೂ ಬಣ್ಣ ಬಣ್ಣದ ವಿದ್ಯುತ್ ದೀಪಾಲಂಕಾರಗಳು ರಾರಾಜಿಸುತ್ತಿವೆ. ಭಕ್ತರಿಗೆ ಶುಭ ಕೋರುವ ಉದ್ದೇಶದಿಂದ ಸ್ಥಳೀಯ ಹಾಗೂ ಪ್ರಭಾವಿ ರಾಜಕೀಯ ಮುಖಂಡರು ಅಳವಡಿಸಿರುವ ಬ್ಯಾನರ್ಗಳು ಪಟ್ಟಣದ ಪ್ರಮುಖ ಬಝಾರ್ ರೋಡ್, ಎಸ್.ಎಲ್.ಎ.ಓ. ಕ್ರಾಸ್, ಶಿವಾಜಿ ಸರ್ಕಲ್, ಎಪಿಎಂಸಿ ಸರ್ಕಲ್, ಆನಿಅಗಸಿ, ಭಾಗಗಳಲ್ಲಿ ರಾರಾಜಿಸುತ್ತಿದ್ದು, ಹಬ್ಬದ ಸಂಭ್ರಮವನ್ನು ಇಮ್ಮಡಿಗೊಳಿಸಿವೆ.
ಈ ಬಾರಿಯ ಜಾತ್ರೆಯ ವಿಶೇಷವೆಂದರೆ ಪಕ್ಷಾತೀತವಾಗಿ ಎಲ್ಲ ನಾಯಕರು ಒಗ್ಗೂಡಿ ಕೆಲಸ ಮಾಡುತ್ತಿರುವುದು. ಜಾತ್ರಾ ಸಮಿತಿಯ ಗೌರವಾಧ್ಯಕ್ಷ ಶಾಸಕ ವಿಶ್ವಾಸ ವೈದ್ಯ ಹಾಗೂ ಜಾತ್ರಾ ಸಮಿತಿಯ ಅಧ್ಯಕ್ಷ ವಿರುಪಾಕ್ಷ ಮಾಮನಿ ಅವರ ನೇತೃತ್ವದಲ್ಲಿ ಇಡೀ ಪಟ್ಟಣವನ್ನು ಭವ್ಯವಾಗಿ ಅಲಂಕರಿಸಲಾಗಿದೆ. ರಸ್ತೆಗಳ ದುರಸ್ತಿ, ಭವ್ಯ ಮಂಟಪಗಳ ನಿರ್ಮಾಣ ಹಾಗೂ ಮೂಲಸೌಕರ್ಯಗಳ ಕಾರ್ಯಗಳು ಈಗಾಗಲೇ ಪೂರ್ಣಗೊಂಡಿವೆ. ಮೇ 4 ರಂದು ದೇವಿಯ ಮೂರ್ತಿ ಪ್ರತಿಷ್ಠಾಪನೆಯೊಂದಿಗೆ ಪ್ರಮುಖ ಧಾರ್ಮಿಕ ವಿಧಿವಿಧಾನಗಳು ಚಾಲನೆ ಪಡೆಯಲಿವೆ. ದೀರ್ಘ ಕಾಲದ ನಂತರ ನಡೆಯುತ್ತಿರುವ ಈ ಸಂಭ್ರಮವು ಸವದತ್ತಿಯ ಸಾಂಸ್ಕೃತಿಕ ಶ್ರೀಮಂತಿಕೆ ಮತ್ತು ಜನರ ಒಗ್ಗಟ್ಟಿಗೆ ಸಾಕ್ಷಿಯಾಗಲಿದೆ ಎಂದರು.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 