ಹುಲಕೋಟಿ ಕಾಲೇಜಿನಲ್ಲಿ ಸ್ನೇಹ, ಸಂಸ್ಕೃತಿ, ಸಾಧನೆಯ ಹಬ್ಬ
A festival of friendship, culture and achievement at Hulakoti College
ಲೋಕದರ್ಶನ ವರದಿ
ಹುಲಕೋಟಿ 24: ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಸಾಂಸ್ಕೃತಿಕ, ಸಾಹಿತ್ಯಿಕ, ಸಾಮಾಜಿಕ ಮತ್ತು ಕ್ರೀಡಾ ಚಟುವಟಿಕೆಗಳಲ್ಲಿಯೂ ಭಾಗವಹಿಸುವ ಮೂಲಕ ತಮ್ಮ ವ್ಯಕ್ತಿತ್ವವನ್ನು ವಿಕಸಿಸಿಕೊಳ್ಳಬೇಕೆಂದು ಗದಗ ನಗರದ ಎ.ಎಸ್.ಎಸ್. ವಾಣಿಜ್ಯ ಮಹಾವಿದ್ಯಾಲಯದ ಕನ್ನಡ ಉಪನ್ಯಾಸಕ ಬಾಹುಬಲಿ ಜೈನರ ಹೇಳಿದರು. ಅವರು ಹುಲಕೋಟಿಯ ಕೆ.ಎಚ್. ಪಾಟೀಲ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ 2025-26ರ ಶೈಕ್ಷಣಿಕ ಸಾಲಿನ ವಾರ್ಷಿಕ ಸ್ನೇಹ ಸಮ್ಮೇಳದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡುತ್ತ ಇಂಥ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ಅಡಗಿದ ಪ್ರತಿಭೆಗಳನ್ನು ಹೊರತರುವ ಉತ್ತಮ ವೇದಿಕೆಯಾಗಿವೆ ಎಂದು ಅಭಿಪ್ರಾಯಪಟ್ಟರು.
ಕುಮಾರಿ ಜಯಶ್ರೀ ಗೋಣಿಸ್ವಾಮಿ ಅವರ ಪ್ರಾರ್ಥನೆ ಮೂಲಕ ಆರಂಭವಾದ ಕಾರ್ಯಕ್ರಮದಲ್ಲಿ ಐಕ್ಯುಎಸಿ ಸಹಸಂಯೋಜಕ ಡಾ. ಮಂಜುನಾಥ ತ್ಯಾಲಗಡಿ ಗಣ್ಯಮಾನ್ಯರನ್ನು ಪರಿಚಯಿಸಿ ಸ್ವಾಗತಿಸಿದರು. ಸಾಂಸ್ಕೃತಿಕ ವಿಭಾಗದ ಸಂಯೋಜಕ ರಮೇಶ ಹುಲಕುಂದ 2025-26ರ ಶೈಕ್ಷಣಿಕ ಸಾಲಿನ ವರದಿ ವಾಚನ ಮಾಡುತ್ತ ಪ್ರಸಕ್ತ ಸಾಲಿನಲ್ಲಿ ಕಾಲೇಜಿನ ವಿವಿಧ ವಿಭಾಗಗಳು ಮತ್ತು ಘಟಕಗಳು ಕೈಗೊಂಡ ಕಾರ್ಯಕ್ರಮಗಳು ಮತ್ತು ವಿದ್ಯಾರ್ಥಿಗಳ ಸಾಧನೆಗಳನ್ನು ಸವಿಸ್ತಾರವಾಗಿ ಪರಿಚಯಿಸಿದರು. ಬಿ.ಎ., ಬಿ.ಕಾಂ., ಬಿ.ಎಸ್ಸಿ. 6ನೇ ಸೆಮಿಸ್ಟರ್ ವಿದ್ಯಾರ್ಥಿಗಳು ತಮ್ಮ ಭೌತಿಕ ಮತ್ತು ಬೌದ್ಧಿಕ ಬೆಳವಣಿಗೆಯಲ್ಲಿ ಕಾಲೇಜಿನ ಪ್ರಾಧ್ಯಾಪಕರು ಮತ್ತು ಶೈಕ್ಷಣಿಕ ಪರಿಸರ ವಹಿಸಿದ ಪಾತ್ರವನ್ನು ತಮ್ಮ ಅನಿಸಿಕೆಗಳಲ್ಲಿ ಹಂಚಿಕೊಳ್ಳುತ್ತ ಕಾಲೇಜಿಗೆ ಗೌರವ ನಮನ ಸಲ್ಲಿಸಿದರು.
ಪ್ರಸಕ್ತ ಸಾಲಿನಲ್ಲಿ ಸಾಂಸ್ಕೃತಿಕ, ಕ್ರೀಡಾ, ಎನ್.ಎಸ್.ಎಸ್., ಮಹಿಳಾ, ರೆಡ್ಕ್ರಾಸ್ ಘಟಕಗಳ ಮೂಲಕ ಕೈಗೊಂಡ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಮತ್ತು ಆಯಾ ವಿಭಾಗಗಳು, ವಿಷಯಗಳಲ್ಲಿ ಪ್ರಥಮ ಸ್ಥಾನ ಪಡೆದ ಹಾಗೂ ವಿಶ್ವವಿದ್ಯಾಲಯ, ಪದವಿ ಕಾಲೇಜುಗಳು ಆಯೋಜಿಸಿದ್ದ ವಿಚಾರ ಸಂಕಿರಣ, ಸ್ಪರ್ಧೆಗಳು, ತರಬೇತಿ ಮುಂತಾದ ಶೈಕ್ಷಣಿಕ ಚಟುವಟಿಕೆಗಳಲ್ಲಿ ಭಾಗವಹಿಸಿ ವಿಜೇತರಾಗುವ ಮೂಲಕ ಕಾಲೇಜಿನ ಕೀರ್ತಿ ಹೆಚ್ಚಿಸಿದ ವಿದ್ಯಾರ್ಥಿಗಳಿಗೆ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರಗಳನ್ನು ವಿತರಿಸಲಾಯಿತು. ಪ್ರಾಧ್ಯಾಪಕರಾಗಿ ಪದೋನ್ನತಿ ಹೊಂದಿರುವ ಡಾ. ಅಪ್ಪಣ್ಣ ಹಂಜೆ ಮತ್ತು ಡಾ. ಲಕ್ಷ್ಮಣ ಮುಳಗುಂದ ಅವರನ್ನು ಸನ್ಮಾನಿಸುವ ಮೂಲಕ ಗೌರವಿಸಲಾಯಿತು. ಗದಗ ನಗರದ ಚಾಳುಕ್ಯ ಮಲ್ಲಕಂಬ ಅಕಾಡೆಮಿಯಲ್ಲಿ ತರಬೇತಿ ಪಡೆಯುತ್ತಿರುವ ಕಾಲೇಜಿನ ವಿದ್ಯಾರ್ಥಿಗಳಾದ ಅಜಯ ಎಂ.ಸಿ. ಮತ್ತು ನಂದಾ ಕುಂದಗೋಳ ಅವರು ತಮ್ಮ ತರಬೇತಿದಾರ ವಿಜಯ ಎಂ.ಸಿ. ಅವರ ತಂಡದೊಂದಿಗೆ ಮಲ್ಲಕಂಬ ಸಾಹಸ ಪ್ರದರ್ಶನದ ಮೂಲಕ ವಿದ್ಯಾರ್ಥಿಗಳ ಮನಸೂರೆಗೊಂಡು ಗೌರವಕ್ಕೆ ಪಾತ್ರರಾದರು.
ಕಾಲೇಜಿನ ಪ್ರಾಚಾರ್ಯೆ ಡಾ. ಸುಧಾ ಕೌಜಗೇರಿ ತಮ್ಮ ಅಧ್ಯಕ್ಷೀಯ ನುಡಿಗಳಲ್ಲಿ ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಮಾನ್ಯ ಸಚಿವರು ಸನ್ಮಾನ್ಯಶ್ರೀ ಎಚ್.ಕೆ. ಪಾಟೀಲರು ಮತ್ತು ಕ್ರೀಯಾಶೀಲ ಸದಸ್ಯರ ಸಹಾಯ, ಸಹಕಾರ, ಮಾರ್ಗದರ್ಶನದಿಂದ ಕಾಲೇಜವು ವರ್ಷದಿಂದ ವರ್ಷಕ್ಕೆ ಅಭಿವೃದ್ಧಿಯಾಗುತ್ತ ಮುನ್ನಡೆದಿದ್ದು, ವಿದ್ಯಾರ್ಥಿಗಳ ಭೌತಿಕ ಮತ್ತು ಬೌದ್ಧಿಕ ಬೆಳವಣಿಗೆಗೆ ಪೂರಕವಾದ ವಾತಾವರಣ, ಸೌಲಭ್ಯಗಳು ಕಾಲೇಜಿನಲ್ಲಿ ಲಭ್ಯವಿದ್ದು, ಅನುಭವಸ್ಥ, ಸಂಶೋಧನ ಮನೋವೃತ್ತಿ ಮತ್ತು ಸಮರಾ್ಣ ಮನೋಭಾವದ ಪ್ರಾಧ್ಯಾಪಕ ತಂಡವು ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಯಲ್ಲಿ ತೊಡಗಿಸಿಕೊಂಡಿದ್ದು ಸ್ತುತ್ಯಾರ್ಹವಾಗಿದ್ದು, ಕಾಲೇಜಿನಲ್ಲಿ ಅಧ್ಯಯನಗೈದ ಅನೇಕ ವಿದ್ಯಾರ್ಥಿಗಳು ಉನ್ನತ ಶಿಕ್ಷಣದ ಮೂಲಕ ಬದುಕನ್ನು ರೂಪಿಸಿಕೊಂಡು ಕಾಲೇಜಿನ ಕೀರ್ತಿ ಹೆಚ್ಚಿಸಿರುವುದು ಹೆಮ್ಮೆಯ ಸಂಗತಿಯಾಗಿದೆ.
ವಿದ್ಯಾರ್ಥಿಗಳು ಪ್ರಾಧ್ಯಾಪಕರ ಮಾರ್ಗದರ್ಶನ ಮತ್ತು ಸಮಯ ಪ್ರಜ್ಞೆ, ಸತತ ಪರಿಶ್ರಮದಿಂದ ಗುರಿಯನ್ನು ತಲುಪಲು ಸಾಧ್ಯವೆಂದು ಹೇಳಿದರು. ಮಾಹಿತಿ ತಂತ್ರಜ್ಞಾನ ಕೋಶದ ಸಂಯೋಜಕ ಡಾ. ಅರುಣಕುಮಾರ ಆರ್. ವಂದನಾರೆ್ಣಗೈದರು. ಆಯಾ ವಿಭಾಗಗಳು ಮತ್ತು ಘಕಟಗಳ ಸಂಯೋಜಕರು ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಸಿಕೊಟ್ಟರು. ರೇಂಜರ್ಸ್ ಘಟಕದ ಸಂಯೋಜಕಿ ಸಾವಿತ್ರಿ ಟಿ. ಮತ್ತು ಕನ್ನಡ ಉಪನ್ಯಾಸಕಿ ಕಲ್ಯಾಣಿ ಕೊಚ್ಚತ್ ನಿರೂಪಣೆ ಮಾಡಿದರು. ಕಾರ್ಯಕ್ರಮದಲ್ಲಿ ಪ್ರಾಧ್ಯಾಪಕರು ಮತ್ತು ಅಪಾರ ಸಂಖ್ಯೆಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಬೆಳಗಾವಿಗೆ ಬಂದ 20 ಜನ ಬಾಂಗ್ಲಾದವರಲ್ಲ : ಬಂಗಾಳ ಮೂಲದ ಚಿನ್ನದಂಗಡಿ ಕೂಲಿ ಕಾರ್ಮಿಕರು
ಭೀಕರ ಅಪಘಾತಕ್ಕೆ ಓರ್ವ ಸಾವು : ಮೂವರಿಗೆ ಗಂಭೀರ ಗಾಯ
ಶವ ವಾಹನದಲ್ಲಿ ಹಾಳಾದ ಸ್ಟ್ರೆಚರ್ : ಶವ ಸಾಗಿಸಲು ನಾಗರಿಕರ ಪರದಾಟ : ಸ್ಟ್ರೆಚರ್ ಖರೀದಿಗೆ ಪುರಸಭೆಯಲ್ಲಿ ದುಡ್ಡು ಇಲ್ಲವಾ?
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ 