ತಿರುಪತಿ ತಿರುಮಲ ಲಡ್ಡು ಪ್ರಸಾದ ಕೌಂಟರ್‌ನಲ್ಲಿ ಅಗ್ನಿ ಅವಘಡ

A fire broke out at the Tirupati Tirumala Laddu Prasad counter

ತಿರುಪತಿ 13: ಆಂಧ್ರಪ್ರದೇಶದ ತಿರುಪತಿ ತಿರುಮಲ ದೇವಾಲಯದ ಲಡ್ಡು ಪ್ರಸಾದ ನೀಡುತ್ತಿದ್ದ ಕೌಂಟರ್‌ನಲ್ಲಿ ಸೋಮವಾರ ಅಗ್ನಿ ಅವಘಡ ಸಂಭವಿಸಿದೆ.

ಕಂಪ್ಯೂಟರ್‌ಗೆ ಹೊಂದಿಕೊಂಡಿದ್ದ ಯುಪಿಎಸ್‌ನಲ್ಲಿ ಶಾರ್ಟ್‌ ಸರ್ಕೀಟ್‌ ಉಂಟಾದ ಕಾರಣ 47ನೇ ಕೌಂಟರ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣವೇ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ಹರಡುವುದನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಬೆಂಕಿ ಕಾಣಿಸಿಕೊಂಡ ಕಾರಣ ಪ್ರಸಾದ ಪಡೆಯಲು ಸರತಿ ಸಾಲಿನಲ್ಲಿ ನಿಂತಿದ್ದ ಜನ ಓಡಿದ್ದು, ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು ಎಂದು ತಿಳಿದುಬಂದಿದೆ.