ಮುಂದಿನ ವಾರದಿಂದ ಪೂರ್ಣ ಪ್ರಮಾಣದಲ್ಲಿ ದ್ವಿತೀಯ ಪಿಯು ಪರೀಕ್ಷಾ ಮೌಲ್ಯಮಾಪನ
ಬೆಂಗಳೂರು, ಮೇ 23, ಮುಂದಿನ ವಾರದಿಂದ ದ್ವಿತೀಯ ಪಿಯು ಉತ್ತರ ಪತ್ರಿಕೆಗಳ ಮೌಲ್ಯಮಾಪನ ಪೂರ್ಣ ಪ್ರಮಾಣದಲ್ಲಿ ಆರಂಭವಾಗಲಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ. ಒಟ್ಟು 54 ಕೇಂದ್ರಗಳಲ್ಲಿ ಮೌಲ್ಯಮಾಪನ ನಡೆಯಲಿದೆ. ಜೂನ್ ಅಂತ್ಯದ ವೇಳೆಗೆ ಮೌಲ್ಯಮಾಪನ ಕೊನೆಗೊಳ್ಳುವ ನಿರೀಕ್ಷೆ ಇದೆ. ಈಗಾಗಲೇ ರಾಜ್ಯದ 8 ಕೇಂದ್ರಗಳಲ್ಲಿ ಅರ್ಥಶಾಸ್ತ್ರ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಆರಂಭವಾಗಿದೆ. ಭೌತವಿಜ್ಞಾನ, ರಸಾಯನವಿಜ್ಞಾನ, ಗಣಿತ ಮತ್ತು ಜೀವವಿಜ್ಞಾನ (ಪಿಸಿಎಂಬಿ) ಉತ್ತರ ಪತ್ರಿಕೆಗಳನ್ನು ಹೊರತುಪಡಿಸಿ ಉಳಿದೆಲ್ಲಾ ಉತ್ತರ ಪತ್ರಿಕೆಗಳ ಕುರಿತಂತೆ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಶಿಬಿರಾಧಿಕಾರಿಗಳಿಗೆ ಕೋಡಿಂಗ್ ವ್ಯವಸ್ಥೆ ಮಾಡಲಾಗಿದೆ.ಜೂನ್ 18ರಂದು ಇಂಗ್ಲಿಷ್ ಪತ್ರಿಕೆಯ ಪರೀಕ್ಷೆ ನಡೆಯಲಿರುವುದರಿಂದ, ಅದರ ಮೌಲ್ಯಮಾಪನದ ನಂತರ ಒಟ್ಟಿಗೆ ಫಲಿತಾಂಶ ಒದಗಿಸಬಹುದು ಎಂದು ಇಲಾಖೆ ತಿಳಿಸಿದೆ.
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ
ಡ್ರಗ್ ಅವೇರ್ನೆಸ್ ವೀಕ್: ಆಚರಣೆ, ಕಾರ್ಯಾಚರಣೆ 12.38 ಲಕ್ಷ ಮಾಕದ ವಶ, 16 ಪ್ರಕರಣ ದಾಖಲು, 4 ಬಂಧನ
ರಾಜ್ಯ ನೇಕಾರರ ಸಂಘದಿಂದ ನಾಳೆ ಬೆಳಗಾವಿ ಚಲೋ ಕಾರ್ಯಕ್ರಮ : ಸಿಎಂ ಮುಂದೆ ಬೇಡಿಕೆಗಳ ಪಟ್ಟಿ 