ಜಿಲ್ಲೆಗೆ ಶೀಘ್ರ ಸರ್ಕಾರಿ ವೈದ್ಯಕೀಯ ಕಾಲೇಜು ಪ್ರಾರಂಭಿಸಲಿ : ಎಂ.ಬಿ.ಪಾಟೀಲ್
A government medical college should be started in the district soon: M.B. Patil
ವಿಜಯಪುರ 27: 101 ನೇ ದಿನದ ಅನಿರ್ದಿಷ್ಟ ಧರಣಿ ಸತ್ಯಾಗ್ರಹವನ್ನು ಉದ್ದೇಶಿಸಿ ಮಾತನಾಡುತ್ತಿರುವ ವಿಜಯಪುರದ ಮೂಲ ನಿವಾಸಿಗಳಾದ ಅಶೋಕ ಗು. ಲೋಣಿ (ಕನ್ನಡಪರ ಹೋರಾಟಗಾರರು) ಕೆಜಿಎಫ್ ದಿಂದ ಬಂದಿದ್ದು ಇಂದು ಇಡೀ ದಿನ ಧರಣಿಯಲ್ಲಿ ಭಾಗವಹಿಸಿದ್ದಾರೆ.ಲೋಣಿ ಅವರು ಮಾತನಾಡುತ್ತಾ " ಸರ್ಕಾರ ವಿಜಯಪುರದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಮಾತ್ರ ಸ್ಥಾಪಿಸಬೇಕು. ಯಾರ ಹಿತಕ್ಕಾಗಿ ಈ ಪಿಪಿಪಿ ಅನ್ನೋ ಮಾದರಿ ವಿಜಯಪುರ ಜಿಲ್ಲೆಯ ಜನರ ಮೇಲೆ ಹೇರುತ್ತಿದ್ದಾರೆ. ಜಿಲ್ಲಾ ಉಸ್ತುವಾರಿ ಎಂ.ಬಿ.ಪಾಟೀಲ್ ಅವರು ಆದಷ್ಟು ಬೇಗ ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜು ಪ್ರಾರಂಭಿಸಲಿ" ಎಂದು ಹೇಳಿದರು.ಇದರ ಜೊತೆಗೆ ವಿಜಯಪುರ ಅಂಗವಿಕಲರ ಸಂಘದ ವತಿಯಿಂದ ಸರ್ಕಾರಿ ವೈದ್ಯಕೀಯ ಕಾಲೇಜು ಹೋರಾಟ ಸಮಿತಿ ವೇದಿಕೆಗೆ ಭೇಟಿ ನೀಡಿ ಬೆಂಬಲ ವ್ಯಕ್ತಪಡಿಸಿದರು. ಹೋರಾಟ ಸಮಿತಿಯ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 