ನ.1ರಂದು ಬೆಟಗೇರಿಯಲ್ಲಿ ಅದ್ಧೂರಿ ಕನ್ನಡ ರಾಜ್ಯೋತ್ಸವ ಆಚರಣೆ
A grand Kannada Rajyotsava celebration in Betageri on November 1st
ಬೆಟಗೇರಿ 31: ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ಸ್ಥಳೀಯ ಕರ್ನಾಟಕ ರಕ್ಷಣಾ ವೇದಿಕೆ ಇವರ ಸಹಯೋಗದಲ್ಲಿ ಕನ್ನಡ ರಾಜ್ಯೋತ್ಸವ ಸಮಾರಂಭ ನ.1 ರಂದು ಜರುಗಲಿದೆ.
ನ.1 ರಂದು ಬೆಳಿಗ್ಗೆ 9 ಗಂಟೆಗೆ ಸ್ಥಳೀಯ ವಿವಿಧ ವೃತ್ತದಲ್ಲಿರುವ ಮಹಾನ್ ಪುರುಷರ ಪುತ್ಥಳಿಗಳಿಗೆ ಪೂಜೆ, ಪುಷ್ಾರೆ್ಪಣ ಸಮರೆ್ಣ ಬಳಿಕ ಇಲ್ಲಿಯ ಅಶ್ವಾರೂಢ ಬಸವೇಶ್ವರ ವೃತ್ತದಿಂದ ಸಂಗೋಳ್ಳಿ ರಾಯಣ್ಣ ವೃತ್ತದವರೆಗೆ ಶಾಲಾ-ಕಾಲೇಜು ವಿದ್ಯಾರ್ಥಿ-ವಿದ್ಯಾರ್ಥಿನಿಯರಿಂದ ವಿವಿಧ ರೂಪಕಗಳ, ಜಾನಪದ ಕಲಾ ತಂಡಗಳು ಸೇರಿದಂತೆ ಸಕಲ ವಾದ್ಯಮೇಳಗಳೊಂದಿಗೆ ಭುವನೇಶ್ವರಿ ದೇವಿಯ ಮತ್ತು ಡಾ.ಬೆಟಗೇರಿ ಕೃಷ್ಣಶರ್ಮರ ಭಾವಚಿತ್ರದ ಭವ್ಯ ಮೇರವಣಿಗೆ ಕಾರ್ಯಕ್ರಮ ನಡೆಯಲಿದೆ.
ಸ್ಥಳೀಯ ಹಾಗೂ ಸುತ್ತಲಿನ ಹಳ್ಳಿಗಳ ಕನ್ನಡ ಪರ ಹೋರಾಟಗಾರರು, ಸಾಹಿತಿ-ಶರಣರು, ಗಣ್ಯರು, ವಿವಿಧ ಸಂಘ, ಸಂಸ್ಥೆಗಳ ಪದಾಧಿಕಾರಿಗಳು, ಸದಸ್ಯರು, ಸ್ಥಳೀಯ ಯುವಕರು, ಕನ್ನಡಾಭಿಮಾನಿಗಳು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸ್ಥಳೀಯ ಕರವೇ ಅಧ್ಯಕ್ಷ ಈರಣ್ಣ ಬಳಿಗಾರ ಪತ್ರಿಕಾ ಪ್ರಕಟನೆಗೆ ತಿಳಿಸಿದ್ದಾರೆ.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 