ಜಾನಪದ ಕಲಾ ಸೊಬಗಿನೊಂದಿಗೆ ತಾಯಿ ಭುವನೇಶ್ವರಿ ದೇವಿ ಭವ್ಯ ಮೆರವಣಿಗೆ

ಜಾನಪದ ಕಲಾ ಸೊಬಗಿನೊಂದಿಗೆ ತಾಯಿ ಭುವನೇಶ್ವರಿ ದೇವಿ ಭವ್ಯ ಮೆರವಣಿಗೆ  A grand procession of Mother Bhuvaneshwari Devi with the beauty of folk art

ಸಾಂಸ್ಕೃತಿಕ ವೈವಿಧ್ಯತೆಗೆ ಸಾಕ್ಷಿಯಾದ ಜಾನಪದ ಕಲಾ ಸೊಬಗು 

ವಿಜಯನಗರ ಫೆ.15: ಹಂಪಿ ಉತ್ಸವದ ಅಂತಿಮ ದಿನವಾದ ಭಾನುವಾರ ಸಂಜೆ ಉದ್ದಾನ ವೀರಭದ್ರೇಶ್ವರ ದೇವಸ್ಥಾದಿಂದ ವಿರೂಪಾಕ್ಷೇಶ್ವರ ದೇವಸ್ಥಾನದವರೆಗೆ ಜಾನಪದ ವಾಹಿನಿ ಮೆರವಣಿಗೆ ನಡೆಯಿತು.

ಶಾಸಕ  ಹೆಚ್‌.ಆರ್‌.ಗವಿಯಪ್ಪ ಹಾಗೂ ಜಿಲ್ಲಾಧಿಕಾರಿ ಕವಿತಾ ಎಸ್‌.ಮನ್ನಿಕೇರಿ ಸೇರಿದಂತೆ ಗಣ್ಯರು ಮೆರವಣಿಗೆಯಲ್ಲಿ ಪಾಗ್ಗೊಂಡು ವಿರೂಪಾಕ್ಷೇಶ್ವರ ದೇವಾಲಯದ ಬಳಿ ನಾಡದೇವಿ ಭುವನೇಶ್ವರಿ ದೇವಿಗೆ ಪೂಜೆ ಸಲ್ಲಿಸಿದರು. ಜಾನಪದ ವಾಹಿನಿ ಕಲಾ ತಂಡಗಳ ಮೆರವಣಿಗೆ ನಾಡಿನ ಗ್ರಾಮೀಣ ಭಾಗದ ಸಾಂಸ್ಕೃತಿಕ ವೈವಿಧ್ಯತೆಗೆ ಸಾಕ್ಷಿಯಾಯಿತು. ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ಜಾನಪದ ಕಲಾತಂಡಗಳು ಮೆರವಣಿಯಲ್ಲಿ ಪಾಲ್ಗೊಂಡಿದ್ದವು. ಜಾನಪದ ಕಲಾ ಸೊಬಗಿನೊಂದಿಗೆ ತಾಯಿ ಭುವನೇಶ್ವರಿ ದೇವಿಯನ್ನು  ಮೆರವಣಿಗೆ ಮಾಡಲಾಯಿತು.

ಹಲಗೆವಾದನ, ವೀರಗಾಸೆ, ಹಗಲುವೇಷ, ಸಿಂಧೋಳ್ ಕುಣಿತ, ನಂದಿಧ್ವಜ, ಕಹಳೆ ವಾದನ, ಹಕ್ಕಿಪಿಕ್ಕಿ ನೃತ್ಯ, ಕರಡಿ ಮೇಳ, ಪುರವಂತಿಕೆ, ಪೂಜಾ ಕುಣಿತ, ನಗಾರಿ, ಲಂಭಾಣಿ ವೃತ್ತ, ಕಂಸಾಳೆ, ಚಂಡೆವಾದ್ಯ, ಸೋಮನ ಕುಣಿತ, ಗೊರವರ ಕುಣಿತ, ಕಲಾತಂಡಗಳು ಮೆರವಣಿಯಲ್ಲಿ ಪಾಲ್ಗೊಂಡಿದ್ದವು. ಉಪವಿಭಾಗಾಧಿಕಾರಿ ವಿವೇಕ್, ತಹಶೀಲ್ದಾರ್ ಶೃತಿ, ಸೇರಿದಂತೆ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.