ವೈದ್ಯರು ರೋಗಿಗಳೊಂದಿಗೆ ಸೌಜನ್ಯದಿಂದ ವರ್ತಿಸಿದಾಗ ಆರೋಗ್ಯವಂತ ಸಮಾಜ ನಿರ್ಮಾಣ
A healthy society is built when doctors treat patients with courtesy
ಹಾವೇರಿ 31: ಆಸ್ಪತ್ರೆಗೆ ಬರುವ ರೋಗಿಗಳ ಜೊತೆಗೆ ಸೌಜನ್ಯದಿಂದ ವರ್ತಿಸುವ ಮೂಲಕ ವೈದ್ಯರು ಉತ್ತಮ ಸೇವೆ ನೀಡಬೇಕು. ತಮ್ಮ ಗ್ರಾಮದಲ್ಲಿ ಸ್ವಸ್ಥತೆಗೆ ನಿಗಾ ವಹಿಸಲು ಗ್ರಾಮಸ್ಥರು ವೈದ್ಯರೊಂದಿಗೆ ಸಮನ್ವಯ ಸಾಧಿಸಬೇಕು. ಅಂದಾಗ ಮಾತ್ರ ಆರೋಗ್ಯವಂತ ಸಮಾಜ ನಿರ್ಮಿಸಲು ಸಾಧ್ಯ ಎಂದು ಶಾಸಕ ರುದ್ರಪ್ಪ ಲಮಾಣಿ ಹೇಳಿದರು.
ನಗರದ ಪ್ರವಾಸಿ ಮಂದಿರದಲ್ಲಿ ತಾಲೂಕಿನ ವಿವಿಧ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ನಾಮನಿರ್ದೇಶಿತ ಪದಾಧಿಕಾರಿಗಳನ್ನು ಸ್ವಾಗತಿಸಿ ಮಾತನಾಡಿದ ಅವರು ವೈದ್ಯರು ದೇವರಿಗೆ ಸಮಾನ ಎಂಬ ಭಾವನೆ ಸಮಾಜದಲ್ಲಿದೆ.ಸಣ್ಣಪುಟ ಕಾಯಿಲೆಗಳಿಂದ ಹಿಡಿದು ಗಂಭೀರ ಕಾಯಿಲೆಗಳಿಗೆ ಹಾಗೂ ತುರ್ತು ಅಪಘಾತ ಸಂದರ್ಭದಲ್ಲಿ ವೈದ್ಯರು ನೀಡುವ ಉಪಚಾರದಿಂದ ರೋಗಿಯನ್ನು ಪ್ರಾಣಾಪಾಯದಿಂದ ಪಾರು ಮಾಡಬಹುದು. ತಾಲೂಕಿನಲ್ಲಿ ಉತ್ತಮ ಆರೋಗ್ಯ ನಿರ್ಮಾಣಕ್ಕೆ ಆಸ್ಪತ್ರೆಗಳಿಗೆ ಅವಶ್ಯವಿರುವ ವೈದ್ಯಕೀಯ ಸಾಮಗ್ರಿ ಖರೀದಿಸಲು 58.16 ಲಕ್ಷ ರೂ.ಗಳ ಅನುದಾನ ನೀಡಿರುವೆ. ನನ್ನ ಅಧಿಕಾರವಧಿಯಲ್ಲಿ ವೈದ್ಯಕೀಯ ಸೇವೆಗೆ ಆದ್ಯತೆ ನೀಡುವೆ ಎಂದರು.
ತಾಲೂಕಿನ ಆಸ್ಪತ್ರೆಗಳಿಗೆ ಸಂಬಂಧಿಸಿದ ಹಳೆಯ ಕಟ್ಟಡ ತೆರವು, ಆಸ್ಪತ್ರೆ ಸುತ್ತಲೂ ಸ್ವಚ್ಛತೆಗೆ ಆದ್ಯತೆ, ಆಂಬ್ಯುಲೆನ್ಸ್ ಖರೀದಿ, ಶವಾಗಾರ ಸೌಲಭ್ಯ, ಎಕ್ಸರೇ ಕೇಂದ್ರ ಸ್ಥಾಪನೆಗೆ ಆರೋಗ್ಯ ಸಚಿವರ ಮನವೊಲಿಸಿ ಅನುದಾನ ತರುವೆ. ಶಸ್ತ್ರಚಿಕಿತ್ಸೆ, ಅನಸ್ತೇಶಿಯಾ ಹಾಗೂ ಮಕ್ಕಳ ಆಸ್ಪತ್ರೆಗೆ ಸರ್ಕಾರ ಆದ್ಯತೆ ನೀಡಿದೆ. ಹಾವೇರಿ ಜಿಲ್ಲಾ ಆಸ್ಪತ್ರೆ ಮೇಲಿನ ಕಾರ್ಯಭಾರ ಒತ್ತಡ ಕಡಿಮೆಗೊಳಿಸಲು ಈಗಾಗಲೇ ನಮ್ಮ ಕ್ಲಿನಿಕ್‌ಗಳಿಗೆ ಚಾಲನೆ ನೀಡಲಾಗಿದೆ. ವೈದ್ಯರ ಸೇವೆ ಚುರುಕಾಗಿರಲಿ ಮತ್ತು ಚೆನ್ನಾಗಿರಲಿ. ಆರೋಗ್ಯ ಕ್ಷೇತ್ರದಲ್ಲಿನ ಅತ್ಯುತ್ತಮ ಸೇವೆಗೆ ನಾಮನಿರ್ದೇಶಿತ ಪದಾಧಿಕಾರಿಗಳು ಆರೋಗ್ಯ ಇಲಾಖೆ ಜೊತೆಗೆ ಸಹಕರಿಸಲಿ ಎಂದರು.
ಹಾವೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಎಫ್.ಎನ್ ಗಾಜಿಗೌಡ್ರ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಎಂ. ಮೈದೂರ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಸಿ.ಬಿ.ಕುರವತ್ತಿಗೌಡ್ರ,ತಾಲೂಕು ಆರೋಗ್ಯಾಧಿಕಾರಿ ಡಾ.ಪ್ರಭಾಕರ ಕುಂದೂರು,ಗುತ್ತಲ ಪಪಂ ಸದಸ್ಯ ಎಸ್.ಜಿ. ಹೊನ್ನಪ್ಪನವರ, ನಾಮನಿರ್ದೇಶಿತ ಸದಸ್ಯರಾದ ಶಿವಪ್ಪ ಅಂಕಲಿ, ನಾಗಪ್ಪ ಮಡಿವಾಳರ, ಹನುಮಂತಪ್ಪ ಗೊಲ್ಲರ, ಎಸ್.ಜಿ.ದಂಡಿಗೇನಹಳ್ಳಿ, ಹೊನ್ನಪ್ಪ ಆರ್, ವಸಂತ ಹಡಗಲಿ, ದುದ್ದುಸಾಬ ನದಾಫ್ ಸೇರಿದಂತೆ ಅನೇಕರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 