ಬಳ್ಳಾರಿ ಜಿಲ್ಲಾಡಳಿತದಿಂದ ಪ್ರಶಾಂತ್ ಕುಮಾರ್ ಮಿಶ್ರಾ ಅವರಿಗೆ ಆತ್ಮೀಯ ಬೀಳ್ಕೊಡುಗೆ
A heartfelt farewell to Prashant Kumar Mishra from the Bellary District Administration
ನಿರಂತರ ಪ್ರಯತ್ನದಿಂದ ಗೆಲ್ಲಬಹುದು: ನಿರ್ಗಮಿತ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ
ಬಳ್ಳಾರಿ 18: ಸರ್ಕಾರ ನನಗೆ ನೀಡಿದ್ದ ಅವಕಾಶದಲ್ಲಿ ಬಳ್ಳಾರಿಯಲ್ಲಿ ಒಂದಷ್ಟು ಅಭಿವೃದ್ಧಿ ಕೆಲಸ ಮಾಡಿದ್ದೇನೆ. ಜಿಲ್ಲಾಧಿಕಾರಿ ಹುದ್ದೆ ಸುಲಭದ ಕೆಲಸವಲ್ಲ, ಸಾಕಷ್ಟು ಸವಾಲುಗಳನ್ನು ನಿತ್ಯ ಎದುರಿಸಬೇಕಾಗುತ್ತದೆ. ಆ ಎಲ್ಲಾ ಸವಾಲುಗಳನ್ನು ನಿಭಾಯಿಸಿರುವೆ, ನಿರಂತರ ಪ್ರಯತ್ನದಿಂದ ಗೆಲ್ಲಬಹುದು ಎಂದು ನಿರ್ಗಮಿತ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಹೇಳಿದರು.ಜಿಲ್ಲಾಡಳಿತ ವತಿಯಿಂದ ನಗರದ ವಾಲ್ಮೀಕಿ ಭವನದಲ್ಲಿ ಬುಧವಾರ ಸಂಜೆ ಆಯೋಜಿಸಿದ್ದ ನಿರ್ಗಮಿತ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರಿಗೆ ಬಿಳ್ಕೋಡುಗೆ ಮತ್ತು ನೂತನ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರಿಗೆ ಸ್ವಾಗತ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಕಳೆದ ಎರಡು ವರ್ಷದ ಹಿಂದೆ ಬಳ್ಳಾರಿ ಜಿಲ್ಲೆಗೆ ಬಂದಾಗ ನೂರೆಂಟು ಸವಾಲುಗಳನ್ನು ಎದುರಿಸಲು ಸಿದ್ದನಾಗಿ ಬಂದಿದ್ದೆ. ಎಲ್ಲವನ್ನೂ ಸಾಧ್ಯವಾದ ಮಟ್ಟಿಗೆ ನಿಭಾಯಿಸಿರುವೆ. ಜಿಲ್ಲೆಯಲ್ಲಿ ಕೈಗೊಂಡ ಲೋಕಸಭೆ ಚುನಾವಣೆ ಹೊಸ ಅನುಭವವನ್ನು ನೀಡಿದೆ. ಜಿಲ್ಲಾಡಳಿತದ ಎಲ್ಲಾ ಅಧಿಕಾರಿ, ಸಿಬ್ಬಂದಿ ವರ್ಗದ ಸಹಾಯ, ಸಹಕಾರದಿಂದ ಜಿಲ್ಲೆಯ ಅಭಿವೃದ್ಧಿಗೆ ಕೆಲಸ ಮಾಡಿದ್ದೇನೆ. ಕೆಲವು ಸಂದರ್ಭಗಳಲ್ಲಿ ಕೆಲ ನಿರ್ಧಾರಗಳನ್ನು ಮಾಡುವಾಗ ಗೊಂದಲಕ್ಕೆ ಸಿಲುಕುತ್ತೇವೆ. ಅದೆಲ್ಲವೂ ನಿಭಾಯಿಸುವುದು ಅಷ್ಟು ಸುಲಭದ ಮಾತಲ್ಲ ಎಂದು ಅಭಿಪ್ರಾಯಪಟ್ಟರು.ನೂತನ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಮಾತನಾಡಿ, ಬಳ್ಳಾರಿ ಜಿಲ್ಲೆಯು ಆಡಳಿತಕ್ಕೆ ಹೆಸರುವಾಸಿ, ಹಾಗೇಯೇ ಅನೇಕ ಸವಾಲುಗಳಿಂದ ಕೂಡಿದ ಜಿಲ್ಲೆಯಾಗಿದ್ದು, ಅಭಿವೃದ್ಧಿ ಕಾರ್ಯಗಳ ನೀರೀಕ್ಷೆಯಲ್ಲಿದೆ. ಪ್ರಶಾಂತ್ ಕುಮಾರ್ ಮಿಶ್ರಾ ಅವರ ಕಾಲಾವಧಿಯಲ್ಲಿ ಜಿಲ್ಲೆಯು ಕಂದಾಯ ಆಡಳಿತ ಕಾರ್ಯದಲ್ಲಿ ರಾಜ್ಯದಲ್ಲಿಯೇ ಪ್ರಥಮ ಸ್ಥಾನ ಪಡೆದಿತ್ತು ಎಂದು ಹರ್ಷ ವ್ಯಕ್ತಪಡಿಸಿದ ಅವರು, ಜಿಲ್ಲೆಯಲ್ಲಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಮಾಡಿರುವ ಅಭಿವೃದ್ದಿ ಹಾಗೂ ಪ್ರಗತಿಪರ ಕೆಲಸಗಳು ಮುಂದುವರಿಯಲಿವೆ. ಅಧಿಕಾರಿ ವರ್ಗವು ನನಗೂ ಸಹಕಾರ ನೀಡಬೇಕು ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ ವಿ.ಜೆ ಅವರು ಮಾತನಾಡಿ, ಜಿಲ್ಲಾಧಿಕಾರಿಯಾಗಿದ್ದ ಸಂದರ್ಭದಲ್ಲಿ ಪ್ರಶಾಂತ್ ಕುಮಾರ್ ಮಿಶ್ರಾ ಅವರೊಂದಿಗಿನ ಬಾಂಧವ್ಯ, ಅವರ ಜೊತೆಯಲ್ಲಿ ನಿರ್ವಹಿಸಿದ ಕರ್ತವ್ಯಕ್ಕೆ ಹೆಮ್ಮೆ ಇದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹ್ಯಾರೀಸ್ ಸುಮೈರ್ ಅವರು ಮಾತನಾಡಿ, ಪ್ರಶಾಂತ್ ಕುಮಾರ್ ಮಿಶ್ರಾ ಅವರಿಂದ ಹಲವು ಹೊಸ ವಿಚಾರಗಳು ಕಲಿಯಲು ಅವಕಾಶ ದೊರೆಯಿತು. ಅವರೊಬ್ಬ ಶಿಸ್ತಿನ ಸಿಪಾಯಿಯಂತಿದ್ದರು ಎಂದು ಅಭಿಮತ ವ್ಯಕ್ತಪಡಿಸಿದರು.ಕಾರ್ಯಕ್ರಮದಲ್ಲಿ ನಿರ್ಗಮಿತ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರನ್ನು ಜಿಲ್ಲಾಡಳಿತದಿಂದ ಆತ್ಮೀಯವಾಗಿ ಸನ್ಮಾನಿಸಿ, ಬೀಳ್ಕೊಡಲಾಯಿತು. ಬಳಿಕ ನೂತನ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರನ್ನು ಆತ್ಮೀಯವಾಗಿ ಸ್ವಾಗತಿಸಲಾಯಿತು.
ಈ ವೇಳೆ ಬಳ್ಳಾರಿ ವಲಯ ಉಪಅರಣ್ಯ ಸಂರಕ್ಷಣಾಧಿಕಾರಿ ಡಾ.ಕೆ.ಎನ್.ಬಸವರಾಜ, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಎನ್.ಝುಬೇರ್, ಸಹಾಯಕ ಆಯುಕ್ತ ಪಿ.ಪ್ರಮೋದ್ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ವರ್ಗ ಮತ್ತು ಐದು ತಾಲ್ಲೂಕುಗಳ ತಹಶೀಲ್ದಾರರು ಹಾಗೂ ಇತರರು ಭಾಗವಹಿಸಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 