ಗ್ರಂಥಾಲಯವಿಲ್ಲದ ಮನೆ ಆತ್ಮವಿಲ್ಲದ ಶರೀರವಿದ್ದಂತೆ: ಡಾ. ಎ.ಎಂ. ಜಕ್ಕಣ್ಣವರ
A house without a library is like a body without a soul: Dr. A.M. Jakkannavara
ಕಾಗವಾಡ 14: ಪಟ್ಟಣದ ಶಿವಾನಂದ ಮಹಾವಿದ್ಯಾಲಯದಲ್ಲಿ ಡಾ. ಎಸ್.ಆರ್. ರಂಗನಾಥನ ಅವರ 133ನೇ ಜನ್ಮ ಜಯಂತಿಯ ಅಂಗವಾಗಿ ಆ. 12 ರಂದು ಮಹಾವಿದ್ಯಾಲಯದ ಜ್ಞಾನಯೋಗಿ ಗ್ರಂಥಾಲಯದಲ್ಲಿ ರಾಷ್ಟ್ರೀಯ ಗ್ರಂಥಪಾಲಕರ ದಿನವನ್ನು ಆಚರಿಸಲಾಯಿತು.
ಮಹಾವಿದ್ಯಾಲಯದ ಕನ್ನಡ ವಿಭಾಗದ ಮುಖ್ಯಸ್ಥ ಡಾ. ಎ.ಎಂ. ಜಕ್ಕಣ್ಣವರ ಅತಿಥಿಯಾಗಿ ಮಾತನಾಡುತ್ತ, ಗ್ರಂಥಾಲಯದ ಪಂಚಸೂತ್ರಗಳನ್ನು ಪ್ರತಿಯೊಬ್ಬ ಓದುಗನು ಪಾಲಿಸಬೇಕೆಂದು ಕರೆ ನೀಡಿದರು. ಡಾ.ಎಸ್.ಆರ್.ರಂಗನಾಥನ ಅವರ ಕೊಡುಗೆಯ ಬಗ್ಗೆ ವಿವರಿಸಿದರು.
ಅಧ್ಯಕ್ಷತೆಯನ್ನು ಪ್ರಾಚಾರ್ಯ ಡಾ.ಎಸ್.ಪಿ. ತಳವಾರ ವಹಿಸಿ, ಮಾತನಾಡುತ್ತಾ, ಮೊಬೈಲ್ ಎಂಬ ಮಾಯಾಲೋಕದಿಂದ ಹೊರಬಂದು, ಪುಸ್ತಕವನ್ನು ಓದಿ, ಜಗತ್ತನ್ನು ಅರ್ಥ ಮಾಡಿಕೊಳ್ಳಲು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ನಮ್ಮ ಮಹಾವಿದ್ಯಾಲಯದಲ್ಲಿರುವ ಗ್ರಂಥಾಲಯವು ಎಲ್ಲ ಸೌಲಭ್ಯಗಳನ್ನು ಹೊಂದಿದ್ದು, ವಿದ್ಯಾರ್ಥಿಗಳು ಈ ಸೌಲಭ್ಯಗಳನ್ನು ಸಮರ್ಕವಾಗಿ ಬಳಸಬೇಕು ಎಂದು ಹೇಳಿದರು.
ಈ ವೇಳೆ ಮಹಾವಿದ್ಯಾಲಯದ ಆಡಳಿತಾಧಿಕಾರಿ ಮೇಜರ್ ವ್ಹಿ. ಎಸ್. ತುಗಶೆಟ್ಟಿ, ಐಕ್ಯೂಎಸಿ ಸಂಯೋಜಕ ಪ್ರೊ. ಬಿ.ಡಿ. ಧಾಮಣ್ಣವರ ಗ್ರಂಥಪಾಲಕರಾದ ಪಿ.ಎಂ. ದೊಡಮನಿ, ವಿನಾಯಕ ಪರುತಗಾಲೆ ಸೇರಿದಂತೆ ಬೋಧಕ-ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 