ವರದಕ್ಷಿಣೆ ಗಾಗಿ ಪತ್ನಿಗೆ ಬೆಂಕಿ ಹಚ್ಚಿದ ಪತಿ

ಮಂಡ್ಯ, ಫೆ 28 :   ವರದಕ್ಷಿಣೆಗಾಗಿ ಪೀಡಿಸಿ ಪತಿಯೋರ್ವ ತನ್ನ ಪತ್ನಿಯನ್ನು ಮನೆಯಲ್ಲೇ ಕೂಡಿಹಾಕಿ ಬೆಂಕಿ ಹಚ್ಚಿರುವ ಘಟನೆ ಜಿಲ್ಲೆಯ ಮಳವಳ್ಳಿ ತಾಲೂಕಿನ ಬೆಳಕವಾಡಿ ಗ್ರಾಮದಲ್ಲಿ ನಡೆದಿದೆ.

ಮಹಾದೇವಸ್ವಾಮಿ ತನ್ನ ಪತ್ನಿ ಗೀತಾಳನ್ನು ಮನೆಯಲ್ಲೇ ಕೂಡಿಹಾಕಿ‌ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿದ್ದಾನೆ ಎನ್ನಲಾಗಿದೆ.

ಸದ್ಯ ಗಂಭೀರವಾಗಿ ಗಾಯಗೊಂಡಿರುವ ಗೀತಾ ಅವರನ್ನು‌ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆಗೆ ಸಂಬಂಧಿಸಿದಂತೆ  ಬೆಳಕವಾಡಿ‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.