ದಾಂಡೇಲಿಯಲ್ಲಿ ಮೊಸಳೆ ದಾಳಿ ಕೂಲಿ ಕಾರ್ಮಿಕನೊಬ್ಬ ತೀವ್ರವಾಗಿ ಗಾಯ
A laborer was seriously injured in a crocodile attack in Dandeli
ಲೋಕದರ್ಶನ ವರದಿ
ದಾಂಡೇಲಿ ಮೆ 16 : ದಾಂಡೇಲಿಯ ಕೋಗಿಲಬನ (ಬಡಾಕಾನಶಿರಡಾ) ಗ್ರಾಮ ಪಂಚಾಯತಿ ವ್ಯಾಪ್ತಿಯ ಕಲಭಾವಿ ಗ್ರಾಮದ ಸಮೀಪದ ಕಾಳಿನದಿಯಲ್ಲಿ ಮತ್ತೇ ಮೊಸಳೆ ದಾಳಿ ಸಂಭವಿಸಿದ್ದು ಕೂಲಿ ಕಾರ್ಮಿಕನೊಬ್ಬ ತೀವ್ರವಾಗಿ ಗಾಯಗೊಂಡ ಘಟನೆ ನಡೆದಿದೆ. ಗಾಯಾಳು ಕಲಭಾವಿ ನಿವಾಸಿ ವಿಠ್ಟು ಬಾಗು ಕರತ್, (65) ಎಂದು ಗುರುತಿಸಲಾಗಿದ್ದು ಅವರು ನದಿಯ ದಂಡೆಗೆ ನೀರು ಕುಡಿಯಲು ತೆರಳಿದ್ದ ವೇಳೆ ಮೊಸಳೆಯೊಂದು ಏಕಾಎಕಿ ದಾಳಿ ನಡೆಸಿ ಕೈಗೆ ಕಚ್ಚಿದೆ ಎನ್ನಲಾಗಿದೆ. ಸ್ಥಳೀಯರು ತಕ್ಷಣವೇ ಅವರನ್ನು ರಕ್ಷಿಸಿ ದಾಂಡೇಲಿಯ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಮುಂದುವರೆದಿದೆ.
ಘಟನೆಯ ಮಾಹಿತಿ ತಿಳಿದ ತಕ್ಷಣ ಅರಣ್ಯ ಇಲಾಖೆಯ ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳು ಹಾಗೂ ರಾಜಕೀಯ ಮುಖಂಡರು ಆಸ್ಪತ್ರೆಗೆ ಬೇಟಿ ನೀಡಿ ಗಾಯಾಳುವಿನ ಆರೋಗ್ಯ ವಿಚಾರಿಸಿದ್ದಾರೆ. ಕಾಳಿ ನದಿಯಲ್ಲಿ ಇತ್ತಿಚಿನ ದಿನಗಳಲ್ಲಿ ಮೊಸಳೆಗಳ ಚಟುವಟಿಕೆ ಹೆಚ್ಚುತ್ತಿರುವ ಬಗ್ಗೆ ಸ್ಥಳೀಯರಲ್ಲಿ ಆತಂಕ ವ್ಯಕ್ತವಾಗುತ್ತಿದೆ. ಕಳೆದ 15 ದಿನಗಳ ಅವಧಿಯಲ್ಲಿ ಮೊಸಳೆಯ ದಾಳಿಗೆ ವ್ಯಕ್ತಿಯೊಬ್ಬ ಗಾಯಗೊಂಡಿರುವ ಎರಡನೇ ಘಟನೆ ಇದಾಗಿದೆ. ಇದರಿಂದ ಗ್ರಾಮೀಣ ಭಾಗದ ಜನರು ನದಿ ತೀರಕ್ಕೆ ಹೋಗಲು ಭಯ ಪಡುವ ಪರಿಸ್ಥಿತಿ ನಿರ್ಮಾಣ ವಾಗಿದೆ.
ಸಾವಿರಾರು ಕೋಟಿ ವಂಚನೆ, ವರ್ಗಾವಣೆ ಆರೋಪ: ಶಿವಾನಂದ ನೀಲಣ್ಣವರ ಬಂಧನ
ಬೆಳಗಾವಿಯಲ್ಲಿ ಶಿವಾನಂದ ನೀಲಣ್ಣನವರಗೆ ಅಧಿಕಾರಿಗಳ ಶಾಕ್ : ಶಿವಂ ಅಸೋಸಿಯೇಟ್ ಕಚೇರಿಗಳ ಮೇಲೆ ದಾಳಿ
24 ಗಂಟೆಯಲ್ಲಿ ಕಾರು ಕಳ್ಳತನ ಪ್ರಕರಣ ಭೇಧಿಸಿದ ಪೊಲೀಸರು : ಖದೀಮರ ಪತ್ತೆಗಾಗಿ ಶೋಧ
ಗಡಿ ಮರಾಠಿ ಶಾಲೆಗಳಲ್ಲಿ ಕನ್ನಡ ಕಹಳೆ: 7 ಕನ್ನಡ ಪ್ರಾಥಮಿಕ, 2 ಪ್ರೌಡ ಶಾಲೆಗಳಿಗೆ ರಾಜ್ಯ ಸರಕಾರ ಗ್ರಿನ್ ಸಿಗ್ನಲ್
ಅಂತರಾಜ್ಯ ಖದೀಮನ ಬಂಧನ : 45.56 ಲಕ್ಷ ಮೌಲ್ಯದ ಚಿನ್ನಾಭರಣ, ದ್ವಿಚಕ್ರ ವಾಹನ ವಶಕ್ಕೆ
ಹಿಡಕಲ್ ಹಿನ್ನೀರಿನಲ್ಲಿ ಮುಳುಗಿದ್ದ ಹುನ್ನೂರು ವಿಠಲ ಮಂದಿರ ಜಲದಿಗ್ಭಂಧನದಿಂದ ಮುಕ್ತಿ 