ಬಾಲಕಿ ಅಂಜಲಿ ವಿಜಯಸಿಂಗ್ ಹಜೇರಿ ಅವರಿಂದ ಅದ್ಭುತ ಭರತನಾಟ್ಯ ಪ್ರದರ್ಶನ
A magnificent Bharatanatyam performance by Anjali Vijayasingh Hazeri
ತಾಳಿಕೋಟಿ 04 : ಪಟ್ಟಣದಲ್ಲಿ ಸೋಮವಾರ ನಡೆದ ತಾಳಿಕೋಟಿ ಸಹಕಾರಿ ಬ್ಯಾಂಕ್ನ ವಾರ್ಷಿಕ ಮಹಾಸಭೆಯಲ್ಲಿ ಬಾಲಕಿ ಅಂಜಲಿ ವಿಜಯಸಿಂಗ್ ಹಜೇರಿ ಅವರು ನೀಡಿದ ಅದ್ಭುತ ಭರತನಾಟ್ಯ ಪ್ರದರ್ಶನ ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು. ಈ ಸಂದರ್ಭದಲ್ಲಿ ಬ್ಯಾಂಕ್ ಆಡಳಿತ ಮಂಡಳಿ ವತಿಯಿಂದ ಅಂಜಲಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಬಾಲ್ಯದಿಂದಲೇ ಭರತನಾಟ್ಯ ತರಬೇತಿ ಪಡೆಯುತ್ತಿರುವ ಅಂಜಲಿ ಹಜೇರಿ ಅವರು ಅತಿ ಕಿರಿಯ ವಯಸ್ಸಿನಲ್ಲಿಯೇ ದೊಡ್ಡ ವೇದಿಕೆಗಳಲ್ಲಿ ತಮ್ಮ ಕಲಾ ಪ್ರತಿಭೆಯನ್ನು ಪ್ರದರ್ಶಿಸುತ್ತಿದ್ದಾರೆ. ಅವರ ನೃತ್ಯದಲ್ಲಿನ ಹಾವ-ಭಾವ, ಲಯ ಮತ್ತು ಅಭಿನಯವು ಪ್ರೇಕ್ಷಕರನ್ನು ಮಂತ್ರಮುಗ್ಧರನ್ನಾಗಿಸಿತು.
ಅಂಜಲಿ ಅವರ ತಂದೆ ಹಾಗೂ ಪುರಸಭೆ ಮಾಜಿ ಸದಸ್ಯ ವಿಜಯಸಿಂಗ್ ಹಜೇರಿ ಮತ್ತು ತಾಯಿ ತಮ್ಮ ಮಗಳ ಕಲಾಸಕ್ತಿಗೆ ಸಂಪೂರ್ಣ ಪ್ರೋತ್ಸಾಹ ಹಾಗೂ ಸಹಕಾರ ನೀಡುತ್ತಿದ್ದಾರೆ. ಭವಿಷ್ಯದಲ್ಲಿ ಅಂಜಲಿ ಅವರು ಒಬ್ಬ ಅಪ್ರತಿಮ ಕಲಾವಿದೆಯಾಗಿ ಬೆಳೆಯಲಿ ಎಂಬ ಆಶಯವನ್ನು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಗಣ್ಯರು ವ್ಯಕ್ತಪಡಿಸಿದರು.
ಗುಂಡಕನಾಳದ ಪೂಜ್ಯ ಗುರುಲಿಂಗ ಶಿವಾಚಾರ್ಯ ಮಹಾಸ್ವಾಮಿಗಳು ಕಾರ್ಯಕ್ರಮದ ಸಾನ್ನಿಧ್ಯ ವಹಿಸಿದ್ದರು. ಬ್ಯಾಂಕ್ನ ಚೇರ್ಮನ್ ಕಾಶಿನಾಥ್ ಸಜ್ಜನ ಅವರು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.
ವೇದಿಕೆಯಲ್ಲಿ ಪುರಸಭೆ ಮಾಜಿ ಅಧ್ಯಕ್ಷ ದಶರಥಸಿಂಗ್ ಮನಗೂಳಿ, ವಿಡಿಸಿಸಿ ಬ್ಯಾಂಕ್ ನಿರ್ದೇಶಕ ಬಿ.ಎಸ್. ಪಾಟೀಲ (ಯಾಳಗಿ), ಅಡತ್ ಅಸೋಸಿಯೇಷನ್ ಅಧ್ಯಕ್ಷ ಅಶೋಕ ಶೆಟ್ಟಿ, ಉಪಾಧ್ಯಕ್ಷ ಚಿಂತಪ್ಪಗೌಡ ಯಾಳಗಿ, ಪ್ರಧಾನ ವ್ಯವಸ್ಥಾಪಕ ಬಿ.ಕೆ. ಮಣ್ಣೂರ, ಆಡಳಿತ ಮಂಡಳಿ ನಿರ್ದೇಶಕರು, ನಾಮನಿರ್ದೇಶಿತ ಸದಸ್ಯರು, ಬ್ಯಾಂಕ್ ಷೇರುದಾರರು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 