ಗ್ರಾಮಕ್ಕೆ ಹೊಸ ವಿದ್ಯುತ್ ವ್ಯವಸ್ಥೆ ಕಲ್ಪಿಸಲಾಗಿದೆ
A new electricity system has been provided for the village
ಸಂಬರಗಿ 17 : ಶಿನಾಳ ಗ್ರಾಮದಲ್ಲಿ ಹಳೆಯ ವಿದ್ಯುತ್ ಕಂಬ ಹಾಗೂ ತಂತಿಗಳನ್ನು ಬದಲಾಯಿಸಿ, ಗ್ರಾಮಕ್ಕೆ ಹೊಸ ವಿದ್ಯುತ್ ವ್ಯವಸ್ಥೆ ಕಲ್ಪಿಸಲಾಗಿದೆ. 1965ರಲ್ಲಿ ಗ್ರಾಮಕ್ಕೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದ್ದು, ಅಂದಿನ ಹಳೆಯ ಕಂಬಗಳು ಮತ್ತು ತಂತಿಗಳನ್ನು ರೂ6.5 ಲಕ್ಷ ವೆಚ್ಚದಲ್ಲಿ ಬದಲಾಯಿಸಲಾಗಿದೆ ಎಂದು ಅಥಣಿ ಹೆಸ್ಕಾಂ ಇಲಾಖೆಯ ವಿಭಾಗಾಧಿಕಾರಿ ಮೋಹನ್ ರೋಹಿದಾಸ್ ಮಾಹಿತಿ ನೀಡಿದರು. ಶಿನಾಳ ಗ್ರಾಮದಲ್ಲಿ ಒಟ್ಟು 32 ಹಳೆಯ ವಿದ್ಯುತ್ ಕಂಬಗಳನ್ನು ತೆರವುಗೊಳಿಸಿ, ಇಡೀ ಗ್ರಾಮದ ವಿದ್ಯುತ್ ತಂತಿಗಳನ್ನು ಬದಲಾಯಿಸಲಾಗಿದೆ. ಗ್ರಾಮಸ್ಥರ ಸಹಕಾರದಿಂದ ಕಾಮಗಾರಿ ಉತ್ತಮವಾಗಿ ಪೂರ್ಣಗೊಂಡಿದ್ದು, ಪ್ರತಿಯೊಂದು ಕಂಬದ ಬಲ್ಬ್ಗಳನ್ನು ಸಹ ಬದಲಾಯಿಸಿ ಅಳವಡಿಸಲಾಗಿದೆ.
ಮಾಜಿ ಸಚಿವ ಶ್ರೀಮಂತ ಪಾಟೀಲ ಅವರ ಸಹಕಾರವೂ ಕಾಮಗಾರಿಗೆ ಅಮೂಲ್ಯವಾಗಿದೆ. ರಾಜ್ಯ ಸಹಕಾರ ಸಚಿವ ಲಕ್ಷ್ಮಣ ಸವದಿ ಅವರು ಗ್ರಾಮಗಳ ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ಭವಿಷ್ಯದಲ್ಲಿ ಗ್ರಾಮದಲ್ಲಿ ಯಾವುದೇ ವಿದ್ಯುತ್ ಸಮಸ್ಯೆ ಎದುರಾಗದಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು. ರೂ6.5 ಲಕ್ಷ ಅನುದಾನ ಮಂಜೂರಾದ ಬಳಿಕ ಎಲ್ಲ ವಿದ್ಯುತ್ ಕಂಬ ಹಾಗೂ ತಂತಿಗಳನ್ನು ಬದಲಾಯಿಸಲಾಗಿದೆ. ಇದರಿಂದ ಗ್ರಾಮವು ಸುಂದರವಾಗಿ ಕಾಣುತ್ತಿದ್ದು, ವಿದ್ಯುತ್ ಸಮಸ್ಯೆಗೆ ಶಾಶ್ವತ ಪರಿಹಾರ ದೊರೆತಂತಾಗಿದೆ. ಗುತ್ತಿಗೆದಾರ ದ್ವಾರಕೇಶ ಜಾಲಿಹಾಳ, ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಅಶೋಕ ಪಾಟೀಲ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 