ಸಾರ್ವಜನಿಕರ ಸಮಸ್ಯೆ, ಕಷ್ಟಗಳಿಗೆ ಸ್ಪಂದಿಸುವ ಕಾರ್ಯಕ್ರಮ: ಶಿವಾನಂದ ಪಾಟೀಲ

ರಾಜಕೀಯ ಪ್ರೇರಿತ ಕಾರ್ಯಕ್ರಮವಲ್ಲ 

ಶಿಗ್ಗಾವಿ 06: ರಾಜಕೀಯ ಪ್ರೇರಿತ ಕಾರ್ಯಕ್ರಮವಲ್ಲ ಸಾರ್ವಜನಿಕರ ಸಮಸ್ಯೆ, ಕಷ್ಟಗಳಿಗೆ ಸ್ಪಂದಿಸುವುದು ಸರ್ಕಾರದ ಮುಖ್ಯ ಉದ್ದೇಶವಾಗಿದ್ದು. ಜಿಲ್ಲಾಮಟ್ಟದಲ್ಲಿ ಜನಸ್ಪಂದನ ಕಾರ್ಯಕ್ರಮ ಇದುವರೆಗೂ ಆಯೋಜಿಸಲಾಗಿತ್ತು ಆದರೆ ಇಲ್ಲಿ ಸಮಸ್ಯೆಗಳ ಮಹಾಪೂರ ಇರುವುದನ್ನು ಮನಗಂಡು ತಾಲೂಕ ಮಟ್ಟದಲ್ಲಿ ಜನಸ್ಪಂದನ ಕಾರ್ಯಕ್ರಮ ಹಮ್ಮಿಕೊಂಡಿದ್ದು ಸಾರ್ವಜನಿಕರು ಸದುಪಯೋಗ ಪಡೆದುಕೊಳ್ಳಬೇಕು ಎಂದುಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಹೇಳಿದರು. ಶಿಗ್ಗಾವಿ ಪಟ್ಟಣದ ಸಂತೆ ಮೈದಾನದಲ್ಲಿ ಜಿಲ್ಲಾಡಳಿತ, ಜಿಲ್ಲಾಪಂಚಾಯತ ಹಾವೇರಿ, ತಾಲೂಕು ಆಡಳಿತ, ತಾಲೂಕ ಪಂಚಾಯತ ಶಿಗ್ಗಾವಿ ಇವರ ಸಂಯುಕ್ತ ಆಶ್ರಯದಲ್ಲಿ ಶಿಗ್ಗಾವಿ ಸವಣೂರ ತಾಲೂಕು ಮಟ್ಟದ ಜನಸ್ಪಂದನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಜೆಗಳ ಸಮಸ್ಯೆಗಳ ನಿವಾರಣೆಗೆ ಆಳುವ ಸರ್ಕಾರದ ಪ್ರಮುಖ ಜವಾಬ್ದಾರಿ ಆಗಿದ್ದು, ಜನರ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಕಲ್ಪಿಸುವ ಜವಾಬ್ದಾರಿಯನ್ನು ನಮ್ಮ ಸರಕಾರ ಜನಸ್ಪಂದನ ಕಾರ್ಯಕ್ರಮ ಆಯೋಜಿಸುವ ಮೂಲಕ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿದೆ ಎಂದರು.   

ನಂತರ ಸಾರ್ವಜನಿಕ ಸಮಸ್ಯೆಗಳನ್ನು ಆಲಿಸಿದ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ್ ಅವರ ಜನಸ್ಪಂದನ' ಕಾರ್ಯಕ್ರಮದಲ್ಲಿ 58 ಅರ್ಜಿಗಳ ಮೂಲಕ ಸಮಸ್ಯೆಗಳ ಮಹಾಪೂರವೆ ಹರಿದು ಬಂದಿದ್ದು, ಜನಸ್ಪಂದನದಲ್ಲಿ ತಾಲೂಕು ಅಬಕಾರಿ ಇ?????ಪೆಕ್ಟರ್ ಪ್ರಕಾಶ್ ಮಾಕಣ್ಣವರ್, ಗುಡ್ಡದ ಚನ್ನಾಪುರ ಗ್ರಾಪಂ ಅಭಿವೃದ್ಧಿ ಅಧಿಕಾರಿ ಇಮ್ತಿಯಾಜ್ ಅಹಮದ್ ಅವರನ್ನು ಅಮಾನತು ಮಾಡಲು ಆದೇಶ ನೀಡಿದರು.ಬಂಕಾಪುರ ಪುರಸಭೆ ಮುಖ್ಯಾಧಿಕಾರಿ ಶಿವಪ್ಪ ಅವರ ಮೇಲೆ ಬಂದ ಆರೋಪಗಳ ಸುರಿಮಳೆಗೆ ವರದಿ ಕೊಡುವಂತೆ ಯುವಜನಾ ನಿರ್ದೇಶಕಿ ಮಮತಾ ಅವರಿಗೆ ಸಚಿವರು ಸೂಚನೆ ನೀಡಿದರು. ಏನೇನು ಸಮಸ್ಯೆಗಳು ?ಕಳೆದ ವರ್ಷದಿಂದ ರೈತರ ಬೆಳೆಯುವ ಬೆಳೆ ಪರಿಹಾರ ಹಣ ಬರದಿರುವುದು.2021-22 ರಲ್ಲಿ ಅತಿವೃಷ್ಟಿಯಿಂದ ಹಾನಿ ಒಳಗಾದ ಮನೆಗಳಿಗೆ ಬಾರದೆ ಇರುವ ಪರಿಹಾರ.ರೈತರ ಜಮೀನುಗಳಿಗೆ ಹೋಗುವ ರಸ್ತೆ ದುರಸ್ತಿ.ಅರಣ್ಯ ಇಲಾಖೆಯ ಭೂಮಿಯನ್ನು ಒತ್ತುವರಿ ತೆರವಿಗೆ ಮನವಿ. ಕಂದಾಯ ಇಲಾಖೆಯ ಅಧಿಕಾರಿಗಳು ಸರಿಯಾದ ಕೆಲಸ ನಿರ್ವಹಿಸದೆ ಇರುವದು. ಕೆಲವು ಹಳ್ಳಿಗಳಿಗೆ ಸಾರಿಗೆ ಬಸುಗಳು ನಿಲ್ಲದೆ ಜನಸಾಮಾನ್ಯರಿಗೆ ತೊಂದರೆ ಆಗುತ್ತಿರುವದು ಸರಿದಂತೆ ಶಿಗ್ಗಾಂವಿ, ಬಂಕಾಪುರ ಪಟ್ಟಣದಲ್ಲಿ ನಿರ್ಮಾಣವಾಗುತ್ತಿರುವ ಜಿ ಪ್ಲಸ್ ಒನ್ ಆಶ್ರಯ ಮನೆಗಳ ವಿತರಣೆಯಲ್ಲಿ ವಿಳಂಬ ಧೋರಣೆ ಆಗುತ್ತಿದೆ. ಗುತ್ತಿಗೆ ಆಧಾರದ ಮೇಲೆ ಪೊಲೀಸ್ ಇಲಾಖೆಯಲ್ಲಿ ಮಾಲಿ ಕೆಲಸಗಾರರನ್ನು ಖಾಯಂ ನೌಕರರನ್ನಾಗಿ ನೇಮಿಸಿಕೊಳ್ಳಬೇಕೆಂದು ಶಿಗ್ಗಾಂವಿ ಸವಣೂರ ಪೊಲೀಸ್ ಇಲಾಖೆಯಲ್ಲಿ ಮಾಲಿ ಕೆಲಸ ಮಾಡುತ್ತಿರುವವರು ಮನವಿ ಸಲ್ಲಿಸಿದರು. 

ಕೆಲ ಅಧಿಕಾರಿಗಳ ಮೇಲೆ ಹೆಚ್ಚಿನ ದೂರುಗಳ ಕೇಳಿಬಂದ ಹಿನ್ನೆಲೆಯಲ್ಲಿ ಅವರ ಬಗ್ಗೆ ವರದಿ ಕೊಡಿ ಎಂದು ಮೇಲಧಿಕಾರಿಗಳಿಗೆ ಸೂಚನೆ ನೀಡಿದರು. ವರದಿ ನೈಜವಾಗಿಲ್ಲ ಎಂಬುದು ಕಂಡು ಬಂದರೆ ಹಿರಿಯ ಅಧಿಕಾರಿಗಳಿಂದ ಮತ್ತೆ ವರದಿ ಪಡೆಯಲಿದ್ದು, ನೈಜ ವರದಿ ನೀಡದ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು. ಇದನ್ನು ಗಮನದಲ್ಲಿಟ್ಟುಕೊಂಡು ವರದಿ ಕೊಡಿ ಎಂದು ಸೂಚನೆ ನೀಡಿದರು.ಅಂಗವಿಕಲರಿಗೆ ತ್ರಿಚಕ್ರ ವಾಹನ ವಿತರಣೆ, ಕೆಎ???ಆ???ಟಿಸಿ ಬಸ್ ಸೌಕರ್ಯ ಸೇರಿದಂತೆ ಹಲವು ದೂರುಗಳಿಗೆ ಸ್ಥಳದಲ್ಲೇ ಆದೇಶ ಮಾಡಿದರು. ಅರ್ಹ ಅಂಗವಿಕಲರಿಗೆ ತಕ್ಷಣ ತ್ರಿಚಕ್ರ ವಾಹನ ವಿತರಿಸಿ. ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಬಸ್ ಸಂಚಾರಕ್ಕೆ ವ್ಯವಸ್ಥೆ ಮಾಡಿ ಎಂದು ಕೆಎ???ಆ???ಟಿಸಿ ಅಧಿಕಾರಿಗಳಿಗೆ ಸೂಚಿಸಿದರು.ಅಧಿಕಾರಿಗಳಲ್ಲಿ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುವ ಮನೋಭಾವ ಇರಬೇಕು. ಸರ್ಕಾರದ ಯೋಜನೆಗಳ ಬಗ್ಗೆ ಮಾಹಿತಿ ಇಲ್ಲದವರಿಗೆ ಹಾಗೂ ಯೋಜನೆಯ ಪ್ರಯೋಜನ ಪಡೆಯುವ ಬಗ್ಗೆತಿಳಿವಳಿಕೆ ಇಲ್ಲದವರಿಗೆ ತಿಳಿಸಿ ಹೇಳುವ ವ್ಯವಧಾನ ಹಾಗೂ ಸ್ಪಂದಿಸುವ ಗುಣ ಬೆಳೆಸಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಕಿವಿಮಾತು ಹೇಳಿದರು.ಪ್ರತಿಯೊಬ್ಬ ಸಾರ್ವಜನಿಕರ ಅರ್ಜಿ ಸ್ವೀಕರಿಸುವ ಸಂದರ್ಭದಲ್ಲಿ ಸಂಬಂಧಪಟ್ಟ ಅಧಿಕಾರಿಯಿಂದ ಮಾಹಿತಿ ಪಡೆದ ಸಚಿವರು, ನ್ಯಾಯಸಮ್ಮತವಾಗಿದ್ದು ಕಂಡು ಬಂದರೆ ತಕ್ಷಣ ಕ್ರಮ ಕೈಗೊಳ್ಳಲು ಸೂಚನೆ ನೀಡಿದರು. ಕಾನೂನು ತೊಡಕು, ತಾಂತ್ರಿಕ ಸಮಸ್ಯೆ ನೆಪ ಹೇಳದೆ ಕೆಲಸ ಮಾಡಿ ಎಂದು ಕಿವಿಮಾತು ಹೇಳಿದರು. 

ಮದ್ದಿನಕೊಪ್ಪ ಗ್ರಾಪಂ ವ್ಯಾಪ್ತಿಯಲ್ಲಿ 124 ಎಕರೆ ಸರ್ಕಾರಿ ಭೂಮಿ ಒತ್ತುವರಿಯಾಗಿದ್ದರೂ ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಿಲ್ಲ ಎಂಬ ದೂರಿನ ಬಗ್ಗೆ ಮಾಹಿತಿ ಪಡೆದ ಸಚಿವರು, ಜಿಪಂ ಸಿಇಒ ಅಕ್ಷಯ್ ಶ್ರೀಧರ್ ಅವರ ನೇತೃತ್ವದಲ್ಲಿ ಕಂದಾಯ ಇಲಾಖೆ ಮತ್ತು ಭೂಮಾಪನಾ ಇಲಾಖೆ ಅಧಿಕಾರಿಗಳು ಜಂಟಿ ಸರ್ವೆ ಮಾಡಿ ಎಂದು ಆದೇಶ ನೀಡಿದರು. ಒತ್ತುವರಿ ಆರೋಪ ನಿಜ ಎಂಬುದು ಕಂಡು ಬಂದರೆ ಸರ್ಕಾರದ ಭೂಮಿಯನ್ನು ವಶಪಡಿಸಿಕೊಳ್ಳಿ ಎಂದು ಸೂಚಿಸಿದರು.ಜಲಜೀವನ್ ಮಿಷನ್ ಯೋಜನೆ ಅನುಷ್ಠಾನದಲ್ಲಿ ಗುತ್ತಿಗೆದಾರರ ಲೋಪ ಕಂಡು ಬಂದರೆ ಕಪ್ಪುಪಟ್ಟಿಗೆ ಸೇರಿಸಿ ಕಾನೂನು ಪ್ರಕಾರ ಕ್ರಮ ಕೈಗೊಳ್ಳಿ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಹೇಳಿದರು.350 ಕೋಟಿ ರೂ. ವೆಚ್ಚದ ಶಿಗ್ಗಾಠ ಏತ ನೀರಾವರಿ ಯೋಜನೆ ಅನುಷ್ಠಾನಕ್ಕೆ ಬಂದಿದ್ದರೂ ಉದ್ದೇಶ ಸಫಲವಾಗಿಲ್ಲ. ಬಹುತೇಕ ಕೆರೆಗಳಿಗೆ ನೀರು ಬಂದಿಲ್ಲ ಎಂದು ರೈತ ಸಂಘದ ಮುಖಂಡರು ಸಚಿವರ ಗಮನ ಸೆಳೆದರು.  

ಯಾವ ಯಾವ ಕೆರೆಗಳಿಗೆ ನೀರು ಹರಿದಿಲ್ಲ ಎಂಬ ಬಗ್ಗೆ ವರದಿ ಕೊಡಿ ಎಂದು ಜಲಸಂಪನ್ಮೂಲ ಇಲಾಖೆ ಸಹಾಯಕ ಕಾರ್ಯನಿರ್ವಾಹಕ ಅಬಿಯಂತರ ರವಿ ಅರಸೀಕರೆ ಅವರಿಗೆ ಸೂಚಿಸಿದರು.ಜಿಲ್ಲೆಯಲ್ಲಿರುವ ಎರಡು ಸಕ್ಕರೆ ಕಾರ್ಖಾನೆಗಳಲ್ಲಿ ಸಕ್ಕರೆ ಇಳುವರಿ ಪ್ರಮಾಣ ಕಡಿಮೆ ತೋರಿಸುತ್ತಿದ್ದು, ರೈತರು ಪೂರೈಕೆ ಮಾಡಿದ ಕಬ್ಬಿಗೆ ಕಡಿಮೆ ಎ???ಆ???ಪಿ ದರ ಕೊಡುತ್ತಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಅತಿ ಹೆಚ್ಚು ಬೆಲೆ ಸಿಗುತ್ತಿದೆ. ಹಾವೇರಿ ಜಿಲ್ಲೆಯ ಕಬ್ಬು ಬೆಳೆಗಾರರಿಗೆ ಅನ್ಯಾಯವಾಗುತ್ತಿದ್ದು, ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ರೈತ ಸಂಘದ ಮುಖಂಡರು ಮನವಿ ಮಾಡಿದರು. ಈ ಬಗ್ಗೆ ಪರೀಶೀಲನೆ ನಡೆಸಲು ವಿಶೇಷ ತಂಡ ರಚನೆ ಮಾಡಲಿದ್ದು, ತಂಡದ ವರದಿ ಆಧರಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.ಕುರುಸಾಪುರ ಜವಳಿ ಪಾರ್ಕ್‌ ಯೋಜನೆಗೆ 200 ಎಕರೆ ಭೂಮಿ ಸ್ವಾಧೀನಪಡಿಸಿಕೊಳ್ಳಲಾಗಿದೆ. ಆದರೆ ಯಾವ ಹಂತದಲ್ಲಿದೆ ಎಂಬ ಬಗ್ಗೆ ಮಾಹಿತಿಯೇ ಇಲ್ಲ. ಗುಡ್ಡಗಳನ್ನು ಒತ್ತುವರಿ ಮಾಡಿ ನಾಶ ಮಾಡಲಾಗುತ್ತಿದೆ.  

ಪುರಸಭೆ ಮಳಿಗೆಗಳನ್ನು ಹರಾಜು ಮಾಡದ ಕಾರಣ ಆದಾಯಕ್ಕೆ ಪೆಟ್ಟು ಬೀಳುತ್ತಿದೆ ಎಂಬ ದೂರುಗಳನ್ನು ಪರೀಶೀಲಿಸಲುನಿರ್ದೇಶನ ನೀಡಿದರು.ಜಿಲ್ಲಾಧಿಕಾರಿ. ವಿಜಯ್ ಮಹಾಂತೇಶ, ಸಿಇಒ . ಅಕ್ಷಯ್ ಶ್ರೀಧರ್, ಗಡಿಯ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ, ಶಾಸಕರಾದ ಬಸವರಾಜ ಶಿವಣ್ಣನವರ, ಶ್ರೀನಿವಾಸ್ ಮಾನೆ, ಶಿಗ್ಗಾಂವಿ ಪುರಸಭೆ ಅಧ್ಯಕ್ಷ ಸಿದ್ದಾರ್ಥ ಗೌಡ ಪಾಟೀಲ, ಬಂಕಾಪುರ ಪುರಸಭೆ ಅಧ್ಯಕ್ಷೆ ಮಮತಾ ಮಾಗಿ, ಸವಣೂರು ಪುರಸಭೆ ಅಧ್ಯಕ್ಷ ಅಲ್ಲಾಉದ್ದಿನ ಮನಿಯರ, ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಟಾಧಿಕಾರಿ ಲಕ್ಷ್ಮಣ ಶಿರಕೊಳ್, ಜಿಲ್ಲಾ ಯೋಜನಾಧಿಕಾರಿ ಮಮತಾ ಹೊಸಗೌಡ್ರ ಸೇರಿದಂತೆ ಜಿಲ್ಲಾಡಳಿತದ ಅಧಿಕಾರಿಗಳು. ಶಿಗ್ಗಾಂವಿ ಸವಣೂರ ತಾಲೂಕು ಆಡಳಿತದ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.