ಮಕ್ಕಳ ಬಾಳಿಗೆ ಬೆಳಕಾದ ಅಪರೂಪದ ಸಂಪನ್ಮೂಲ ವ್ಯಕ್ತಿ: ಎಂ.ಎಚ್‌. ಸವದತ್ತಿ

ಮಕ್ಕಳ ಬಾಳಿಗೆ ಬೆಳಕಾದ ಅಪರೂಪದ ಸಂಪನ್ಮೂಲ ವ್ಯಕ್ತಿ: ಎಂ.ಎಚ್‌. ಸವದತ್ತಿ  A rare resource person who brought light to children's lives: M.H. Savadatti


ಗದಗ, ಸೆ.3: ಸರ್ಕಾರಿ ಸೇವೆಯಲ್ಲಿದ್ದುಕೊಂಡೇ ರಜಾ ದಿನಗಳಲ್ಲಿಯೂ ಸಮಯ ವ್ಯರ್ಥ ಮಾಡದೆ, ಮಕ್ಕಳ ಭವಿಷ್ಯಕ್ಕಾಗಿ ತಮ್ಮ ತನು-ಮನ-ಧನವನ್ನು ಅರ​‍್ಿಸಿ ಕಾರ್ಯನಿರ್ವಹಿಸುತ್ತಿರುವ ಎಂ.ಎಚ್‌. ಸವದತ್ತಿ ಅವರು ಅಪರೂಪದ ಸಂಪನ್ಮೂಲ ವ್ಯಕ್ತಿಯಾಗಿದ್ದಾರೆ ಎಂದು ಟಿಟಿಪಿಐ ಆರ್‌.ಎಸ್‌. ಬುರುಡಿ ಶ್ಲಾಘಿಸಿದರು.  

ಮೂಲತಃ ಮುಂಡರಗಿ ತಾಲ್ಲೂಕಿನ ಯಕ್ಲಾಸಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ವಿಜ್ಞಾನ ಶಿಕ್ಷಕರಾಗಿ ಸೇವೆ ಆರಂಭಿಸಿದ ಎಂ.ಎಚ್‌. ಸವದತ್ತಿ ಅವರು ಮಕ್ಕಳಿಗೆ ಕೇವಲ ಪಾಠ ಬೋಧಿಸುವುದಷ್ಟೇ ಅಲ್ಲದೆ, ಅವರಲ್ಲಿರುವ ಆಸಕ್ತಿಯನ್ನು ಗುರುತಿಸಿ ಸೂಕ್ತ ಮಾರ್ಗದರ್ಶನ ನೀಡುತ್ತಿದ್ದಾರೆ. ಗ್ರಾಮೀಣ ಭಾಗದ ಬಡ ವಿದ್ಯಾರ್ಥಿಗಳು ವಿಜ್ಞಾನ ಪ್ರದರ್ಶನಗಳಲ್ಲಿ ತಮ್ಮ ಸ್ವಂತ ಹಣದಿಂದ ಭಾಗವಹಿಸುವಂತೆ ಪ್ರೋತ್ಸಾಹಿಸುವ ಮೂಲಕ ಅವರ ಪ್ರತಿಭೆಗೆ ವೇದಿಕೆ ಕಲ್ಪಿಸಿದ್ದಾರೆ.  

ಶಿಕ್ಷಕರನ್ನು ಒಗ್ಗೂಡಿಸಿ ಶಾಲೆಗಳಿಗೆ ಮೂಲಸೌಕರ್ಯ ಒದಗಿಸುವ ಕಾರ್ಯದಲ್ಲೂ ಅವರು ತೊಡಗಿಸಿಕೊಂಡಿದ್ದಾರೆ. ವಿಶೇಷವಾಗಿ ಮಾದರಿ ವಿಜ್ಞಾನ ಪ್ರಯೋಗಾಲಯಗಳನ್ನು ನಿರ್ಮಿಸಿ, ಮಕ್ಕಳಲ್ಲಿ ವಿಜ್ಞಾನ ವಿಷಯದ ಬಗ್ಗೆ ಆಸಕ್ತಿ ಮೂಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಇವರ ಮಾರ್ಗದರ್ಶನ ಪಡೆದ ವಿದ್ಯಾರ್ಥಿಗಳು ಜಿಲ್ಲಾ, ರಾಜ್ಯ ಹಾಗೂ ರಾಷ್ಟ್ರಮಟ್ಟದ ಸ್ಪರ್ಧೆಗಳಲ್ಲಿ ಪ್ರಶಸ್ತಿ ಗಳಿಸಿ ಗದಗ ಜಿಲ್ಲೆಯ ಕೀರ್ತಿ ಹೆಚ್ಚಿಸಿರುವುದು ಹೆಮ್ಮೆಯ ಸಂಗತಿಯಾಗಿದೆ.