ಪ್ರಕೃತಿ ಸಂರಕ್ಷಣೆಗೆ ಸಂಕಲ್ಪ: ರೈನಾಪೂರ ‘ಒಂದು ಸಸಿ ತಾಯಿ ಹೆಸರಿನಲ್ಲಿ’ ಅಭಿಯಾನ
A resolve to conserve nature: Rainapur's 'One Plant in the Name of Mother' campaign
ಲೋಕದರ್ಶನ ವರದಿ
ಯರಗಟ್ಟಿ 07 : ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರ “ಒಂದು ಸಸಿ ತಾಯಿ ಹೆಸರಿನಲ್ಲಿ” (ಏಕ್ ಪೇಡ್ ಮಾಕೆ ನಾಮ್) ಅಭಿಯಾನದಡಿ ಸಮೀಪದ ರೈನಾಪೂರ ಗ್ರಾಮದಲ್ಲಿ ಬಿಜೆಪಿ ಯುವ ಮೋರ್ಚಾ ಸಹಭಾಗಿತ್ವದಲ್ಲಿ ಮೌನೇಶ್ವರ ಮಠದ ಆವರಣದಲ್ಲಿ ಸಸಿ ನೆಡುವ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಜರುಗಿತು.
ತಾಲೂಕಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಕೃಷ್ಣಮೂರ್ತಿ ತೋರಗಲ್ಲ ಅವರು ಮಾತನಾಡಿ, ಪರಿಸರವು ಮಾನವ ಜೀವನದ ಅವಿಭಾಜ್ಯ ಅಂಗವಾಗಿದ್ದು, ಪ್ರಕೃತಿಯ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ ಎಂದು ಹೇಳಿದರು. ಮರ, ನೀರು, ಗಾಳಿ ಹಾಗೂ ಜೀವಜಗತ್ತಿನ ರಕ್ಷಣೆ ಮೂಲಕವೇ ಮುಂದಿನ ಪೀಳಿಗೆಗೆ ಉತ್ತಮ ಪರಿಸರವನ್ನು ನೀಡಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.
ಇಂದು ಜಗತ್ತು ಅರಣ್ಯ ನಾಶ, ಪ್ಲಾಸ್ಟಿಕ್ ಮಾಲಿನ್ಯ, ವಾಯು ಮಾಲಿನ್ಯ ಹಾಗೂ ಹವಾಮಾನ ವೈಪರೀತ್ಯದಂತಹ ಗಂಭೀರ ಸವಾಲುಗಳನ್ನು ಎದುರಿಸುತ್ತಿದೆ. ಇಂತಹ ಸಂದರ್ಭದಲ್ಲಿ ಪ್ರತಿಯೊಬ್ಬರೂ ಕನಿಷ್ಠ ಒಂದು ಸಸಿಯನ್ನು ನೆಟ್ಟು ಅದರ ಪೋಷಣೆ ಮಾಡುವ ಸಂಕಲ್ಪ ಕೈಗೊಳ್ಳಬೇಕು. ಜೊತೆಗೆ ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡುವುದು, ಪರಿಸರ ಸ್ವಚ್ಛತೆಯನ್ನು ಕಾಪಾಡುವುದು ಹಾಗೂ ಪ್ರಕೃತಿ ಸಂಪನ್ಮೂಲಗಳ ಸಂರಕ್ಷಣೆಗೆ ಮುಂದಾಗಬೇಕು ಎಂದು ಅವರು ಕರೆ ನೀಡಿದರು.
ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ನಡೆದ ಈ ಕಾರ್ಯಕ್ರಮದಲ್ಲಿ ಗ್ರಾಮದಲ್ಲಿ ಪರಿಸರ ಜಾಗೃತಿ ಮೂಡಿಸುವ ಉದ್ದೇಶದಿಂದ ಸಸಿ ನೆಡುವಿಕೆ ಹಾಗೂ ಪರಿಸರ ಸಂರಕ್ಷಣೆಯ ಮಹತ್ವದ ಕುರಿತು ವಿಶೇಷ ಅರಿವು ಮೂಡಿಸಲಾಯಿತು.
ಈ ಸಂದರ್ಭದಲ್ಲಿ ಶ್ರದ್ಧಾನಂದ ಆಶ್ರಮದ ಮಾತೋಶ್ರೀ ಮುದ್ದಮ್ಮತಾಯಿ, ಮಾತೋಶ್ರೀ ಪಾರ್ವತೆಮ್ಮತಾಯಿ, ಬಿಜೆಪಿ ಹಿರಿಯ ಮುಖಂಡ ವೆಂಕಟೇಶ ದೇವರಡ್ಡಿ, ತಾಲೂಕಾ ಬಿಜೆಪಿ ಮಹಾಶಕ್ತಿ ಕೇಂದ್ರ ಅಧ್ಯಕ್ಷ ಚೇತನ ಜಕಾತಿ, ಬಿಜೆಪಿ ಜಿಲ್ಲಾ ಯುವ ಮೋರ್ಚಾ ಜಿಲ್ಲಾಪಾಧ್ಯಕ್ಷ ಆನಂದ ಬಾಗೋಡಿ, ಸದಾನಂದ ಪಾಟೀಲ, ಗೋಪಾಲ ಕಡೇಮನಿ, ಚಂದ್ರು ಅಳಗೋಡಿ, ಗೋವಿಂದ ಕಡೇಮನಿ, ಮಹಾಂತೇಶ ಹೂಗಾರ, ಮುದಕಪ್ಪ ಜೂಗನವರ, ಫಕ್ಕೀರ್ಪ ಹೊಸಮನಿ, ಈರಣ್ಣಾ ತೋರಣಗಟ್ಟಿ, ಸುಭಾಷ ಜೂಗನವರ, ಸಂಜುಕುಮಾರ ಸಿದ್ನಾಳ, ವಿಠ್ಠಲ ರೋಗಿ ಸೇರಿದಂತ ಅನೇಕರು ಇದ್ದರು.
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ 