ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಸ್ವಲ್ಪ ಇಳಿಮುಖ, 4 ಹೊಸ ಪ್ರಕರಣಗಳು ಪತ್ತೆ

ಬೆಂಗಳೂರು, ಏ 19  ಕಳೆದ ಕೆಲ ದಿನಗಳಿಂದ ಆತಂಕಕಾರಿಯಾಗಿ ಏರಿಕೆ ಕಂಡಿದ್ದ ರಾಜ್ಯದ ಕೊರೋನಾ ಪ್ರಕರಣಗಳಲ್ಲಿ ಇಂದು ಸ್ವಲ್ಪ ಮಟ್ಟಿಗೆ ಇಳಿಕೆ ಕಂಡಿದೆ. ಶನಿವಾರ ಸಂಜೆಯಿಂದ ಭಾನುವಾರ ಮಧ್ಯಾಹ್ನದವರೆಗೆ ಕೇವಲ ನಾಲ್ಕು ಸೋಂಕಿತ ಪ್ರಕರಣಗಳು ದೃಢಪಟ್ಟಿರುವುದು ವರದಿಯಾಗಿವೆ. ಇದರಿಂದ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 388ಕ್ಕೇರಿಕೆಯಾಗಿದ್ದು, 14 ಜನರು ಮೃತಪಟ್ಟಿದ್ದಾರೆ. ಒಟ್ಟು 105 ಜನರು ಗುಣಮುಖರಾಗಿದ್ದಾರೆ. ಮೈಸೂರಿನ ದೆಹಲಿಗೆ ಪ್ರಯಾಣ ಮಾಡಿದ ಹಿನ್ನೆಲೆಯುಳ್ಳ 46 ಹಾಗೂ 20 ವರ್ಷದ ವ್ಯಕ್ತಿಗಳು, ಮೈಸೂರು ನಂಜನಗೂಡಿನ 39 ವರ್ಷದ ಪುರುಷ ಮತ್ತು 23 ವರ್ಷದ ಮಹಿಳೆಗೆ ಸೋಂಕು ತಗುಲಿದೆ ಎಂದು ಆರೋಗ್ಯ ಇಲಾಖೆಯ ಪ್ರಕಟಣೆ ತಿಳಿಸಿದೆ.