ರಕ್ತದಾನಕ್ಕೆ ಸೇವಾ ಮನೋಭಾವನೆ ಅವಶ್ಯ
A spirit of service is essential for blood donation....
ಹೂವಿನಹಡಗಲಿ 14 : ಅಪಘಾತದಿಂದ ಸಂಕಷ್ಟದಲ್ಲಿರುವವರ ಜೀವ ಉಳಿಸುವ ಉದ್ದೇಶದಿಂದ ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡುವ ಕಾರ್ಯ ಶ್ಲಾಘನಿಯವಾಗಿದ್ದು, ಅದಕ್ಕಾಗಿ ಸೇವಾ ಮನೋಭಾವನೆ ಬೆಳೆಸಿಕೊಳ್ಳುವುದು ಮುಖ್ಯವಾಗಿದೆ ಎಂದು ಪ್ರಾಚಾರ್ಯರಾದ ಎಸ್.ಎಸ್.ಪಾಟೀಲ ಹೇಳಿದರು.
ಪಟ್ಟಣದ ಜಿಬಿಆರ್ ಪದವಿ ಕಾಲೇಜು ಹಾಗೂ ಸ್ವಾಮಿ ವಿವೇಕಾನಂದ ರಕ್ತ ಭಂಡಾರದ ಸಹಯೋಗದಲ್ಲಿ ಗುರುವಾರ ಆಯೋಜಿಸಿದ್ದ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.ರಕ್ತದಾನ ಶಿಬಿರದಲ್ಲಿ 30 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿ ರಕ್ತದಾನ ಮಾಡಿದರು
ಸ್ವಾಮಿ ವಿವೇಕಾನಂದ ರಕ್ತ ಭಂಡಾರದ ವ್ಯವಸ್ಥಾಪಕ ಗೋಪಾಲರೆಡ್ಡಿ, ಐಕ್ಯೂಎಸಿ ಸಂಯೋಜಕಿ ಡಾ.ಮಹಿಮಾ ಜ್ಯೋತಿ, ಎನ್‌ಎಸ್‌ಎಸ್ ಘಟಕಾದಿಕಾರಿಗಳಾದ ಡಾ.ಶರಣಪ್ಪ, ಮಾಬುಸಾಬ್, ಪ್ರಿಯಾಂಕ್, ದೈಹಿಕ ನಿರ್ದೇಶಕ ಬಡೆಸಾಬ್ನಾಯಕ, ಸಹಾಯಕ ಪ್ರಾಧ್ಯಾಪಕರಾದ ಹರ್ಷ, ಸಂಜಯ್, ಚೈತ್ರ, ಕುಸುವ, ವೀಣಾ, ಅನ್ನದಾನಪ್ಪ ಹಾಗೂ ವಿದ್ಯಾರ್ಥಿಗಳು ಇದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 