ನೀಟ್‌ ಪರೀಕ್ಷೆಗೆ ತರಬೇತಿ ಪಡೆಯುತ್ತಿದ್ದ ವಿದ್ಯಾರ್ಥಿ ಆತ್ಮಹತ್ಯೆ

A student who was training for the NEET exam committed suicide

ಕೋಟಾ 17: ರಾಜಸ್ಥಾನದ ಕೋಟಾದಲ್ಲಿ ನೀಟ್‌ ಪರೀಕ್ಷೆಗೆ ತರಬೇತಿ ಪಡೆಯುತ್ತಿದ್ದ ಒಡಿಶಾ ಮೂಲದ ಮಯೂರ್‌ಭಂಜ್ ಜಿಲ್ಲೆಯ ಅಭಿಜಿತ್ ಗಿರಿ (18)ಎಂಬ ವಿದ್ಯಾರ್ಥಿಯೊಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಮೃತ ಯುವಕನನ್ನು ಅಭಿಜೀತ್‌ ಗಿರಿ ಎಂದು ಗುರುತಿಸಲಾಗಿದ್ದು, ಕಳೆದ ವರ್ಷ ಏಪ್ರಿಲ್‌ನಿಂದ ಈತ ಕೋಟಾದಲ್ಲಿ ತರಬೇತಿ ಪಡೆಯುತ್ತಿದ್ದ.  

ಇದರೊಂದಿಗೆ ಈ ವರ್ಷ ಕೋಟಾದಲ್ಲಿ ಆತ್ಮಹತ್ಯೆ ಮಾಡಿಕೊಂಡ ನೀಟ್‌ ಆಕಾಂಕ್ಷಿಗಳ ಸಂಖ್ಯೆ 3ಕ್ಕೆ ಏರಿಕೆಯಾಗಿದೆ.

2024ರಲ್ಲಿ 17 ಅಭ್ಯರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದರು.  

ಕೊಠಡಿಯಲ್ಲಿ ಯಾವುದೇ ಮರಣ ಪತ್ರ ಪತ್ತೆಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಒಡಿಶಾದ ಆತ್ಮಹತ್ಯೆಗೆ ಶರಣಾದವರು. ಇವರು 2024ರ ಏಪ್ರಿಲ್ ನಿಂದ ಕೋಚಿಂಗ್ ಇನ್‌ಸ್ಟಿಟ್ಯೂಟ್‌ನಲ್ಲಿ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಗೆ (ನೀಟ್) ತಯಾರಿ ನಡೆಸುತ್ತಿದ್ದರು.

ರಾತ್ರಿ 8 ಗಂಟೆ ಸುಮಾರಿಗೆ ಮೆಸ್ ಕೆಲಸಗಾರ ಅಭಿಜಿ‌ತ್ ಅವರ ಕೋಣೆಗೆ ಊಟ ನೀಡಲು ಹೋದಾಗ ಎಷ್ಟು ಕೂಗಿದರೂ ಒಳಗಿನಿಂದ ಯಾವುದೇ ಪ್ರತಿಕ್ರಿಯೆ ಬಾರದ ಹಿನ್ನೆಲೆ, ಮೆಸ್ ಕೆಲಸಗಾರ ಮತ್ತು ಹಾಸ್ಟೆಲ್‌ನಲ್ಲಿನ ಇತರರು ಬಾಗಿಲು ಒಡೆದು ನೋಡಿದಾಗ ಆತ ಸೀಲಿಂಗ್ ಫ್ಯಾನಿಗೆ ನೇಣು ಬಿಗಿದುಕೊಂಡಿರುವುದು ಕಂಡುಬಂದಿದೆ ಎಂದು ಸಹಾಯಕ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಲಾಲ್ ಸಿಂಗ್ ತನ್ವಾರ್ ಹೇಳಿದ್ದಾರೆ.