ಜುಲೈ 8 ರಂದು ಜಿಲ್ಲಾ ಕಾರಾಗೃಹದಲ್ಲಿ ಪಯಣ ತಂಡದಿಂದ ತಲ್ಕಿ ನಾಟಕ ಪ್ರದರ್ಶನ
A talkie play at the District Jail on 8th July
ಗದಗ 7: ರಾಜ್ಯದ ತುಂಬ ಪಯಣ ಸಂಸ್ಥೆ ಆಯೋಜಿಸುವ ತಲ್ಕಿ ನಾಟಕವನ್ನು ಕರ್ನಾಟಕ ಕಾರಾಗೃಹ ಮತ್ತು ಸುಧಾರಣಾ ಸೇವೆಗಳು ಜಿಲ್ಲಾ ಕಾರಾಗೃಹ ಗದಗ, ನಿರ್ಮಲ ವಿವಿಧೋದ್ದೇಶಗಳ ಸೇವಾ ಸಂಸ್ಥೆ ಮುಂಡರಗಿ ಹಾಗೂ ಸೃಷ್ಠಿ ಸಂಕುಲ ಸಂಸ್ಥೆ ಗದಗ, ನವರಸ ಕಲಾಸಂಘ ಬೆಟಗೇರಿ ಇವುಗಳ ಸಹಯೋಗದಲ್ಲಿ ಜುಲೈ 8 ರಂದು ನಗರದ ಜಿಲ್ಲಾ ಕಾರಾಗೃಹದಲ್ಲಿ ಹಮ್ಮಿಕೊಳ್ಳಲಾಗಿದೆ.
ಈ ಕಾರ್ಯಕ್ರಮವನ್ನು ಗೊಟಗೂಡಿಯ ಕರ್ನಾಟಕ ಜಾನಪದ ವಿಶ್ವವಿದ್ಯಾಲಯ ಸಹಾಯಕ ಕುಲಸಚಿವ ಶಹಜಹಾನ ಮುದಕವಿ ಅವರು ಉದ್ಘಾಟಿಸಲಿದ್ದಾರೆ. ಜಿಲ್ಲಾ ಕಾರಾಗೃಹದ ಅಧೀಕ್ಷಕ ಈರಣ್ಣ ರಂಗಾಪುರ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಎ. ಎಸ್.ಮಕಾನದಾರ, ಮುಂಡರಗಿಯ ಚಂದ್ರು ನಾವಿ ಭಾಗವಹಿಸಲಿದ್ದಾರೆ. ಸಿಂಧನೂರಿನ ಪಲ್ಲವಿ, ಬೆಂಗಳೂರಿನ ಪಯಣ ಸಂಸ್ಥೆಯ ನಿರ್ದೇಶಕಿ ಚಾಂದಿನಿ, ನಿರ್ಮಲಾ ತರವಾಡೆ, ಆದಿತ್ಯ ಬಾಂಡಗೆ, ಬಸವರಾಜ ನೆಲಜೇರಿ , ಗಣೇಶ ಮೇರವಾಡೆ, ಸವಿತಾ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಜೈಲರ್ ಸುನಂದಾ ಈರಬಾಯಿಗೋಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 