ದುಬೈ 23: ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ನಡೆಯುತ್ತಿರುವ ಚಾಂಪಿಯನ್ ಟ್ರೋಫಿ ಕ್ರಿಕೆಟ್ ಪಂದ್ಯದಲ್ಲಿ ಪಾಕಿಸ್ತಾನ ತಂಡ ಭಾರತಕ್ಕೆ 242 ರನ್‌ಗಳ ಗೆಲುವಿನ ಗುರಿ ನೀಡಿದೆ.
ಭಾರತದ ವಿರುದ್ಧ ಟಾಸ್ ಗೆದ್ದ ಪಾಕಿಸ್ತಾನ ತಂಡದ ನಾಯಕ ಮೊಹಮ್ಮದ್ ರಿಜ್ವಾನ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದರು.
49.4 ಓವರ್ ನಲ್ಲಿ ಪಾಕಿಸ್ತಾನ 241 ರನ್ ಗಳಿಗೆ ಆಲೌಟ್ ಆಯಿತು.
ಭಾರತದ ಪರ ಕುಲದೀಪ್ ಯಾದವ್ 3, ಹಾರ್ದಿಕ್ ಪಾಂಡ್ಯಾ 2, ಹರ್ಷಿತ್ ರಾಣಾ, ಅಕ್ಸರ್ ಪಟೇಲ್ ಮತ್ತು ರವೀಂದ್ರ ಜಡೇಜಾ ತಲಾ 1 ವಿಕೆಟ್ ಪಡೆದರು.