ತಂಬಾಕು ಮುಕ್ತ ಜೀವನಶೈಲಿಯೇ ಉಜ್ವಲ ಭವಿಷ್ಯಕ್ಕೆ ಅಡಿಪಾಯ: ಎಸ್.ಡಿ. ಬೆನ್ನೂರು
A tobacco-free lifestyle is the foundation for a bright future: S.D. Bennur
ರೋಣ, ಆ.13: ವಿದ್ಯಾರ್ಥಿಗಳು ತಮ್ಮ ದೈಹಿಕ ಹಾಗೂ ಮಾನಸಿಕ ಆರೋಗ್ಯದ ದೃಷ್ಟಿಯಿಂದ ತಂಬಾಕು ಮುಕ್ತ ಜೀವನಶೈಲಿಯನ್ನು ಅಳವಡಿಸಿಕೊಳ್ಳಬೇಕು. ಇಂದು ಕೈಗೊಳ್ಳುವ ಉತ್ತಮ ನಿರ್ಧಾರವೇ ನಾಳೆಯ ಉಜ್ವಲ ಭವಿಷ್ಯಕ್ಕೆ ಅಡಿಪಾಯವಾಗಲಿದೆ ಎಂದು ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಡಿ. ಬೆನ್ನೂರು ಹೇಳಿದರು.
ರೋಣ ತಾಲ್ಲೂಕಿನ ಅಬ್ಬಿಗೇರಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಐಇಸಿ ವಿಭಾಗ, ಗದಗ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಅಬ್ಬಿಗೇರಿ ಇವರ ಆಶ್ರಯದಲ್ಲಿ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ತಂಬಾಕು ಸೇವನೆಯಿಂದ ಆರೋಗ್ಯದ ಮೇಲಾಗುವ ಹಾನಿಕಾರಕ ಪರಿಣಾಮಗಳ ಕುರಿತು ಅರಿವು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಪ್ರತಿವರ್ಷ ವಿಶ್ವದಾದ್ಯಂತ ಲಕ್ಷಾಂತರ ಜನರು ತಂಬಾಕು ಉತ್ಪನ್ನಗಳ ನೇರ ಹಾಗೂ ಪರೋಕ್ಷ ಬಳಕೆಯಿಂದ ಸಾವನ್ನಪ್ಪುತ್ತಿದ್ದಾರೆ. ತಂಬಾಕು ಉತ್ಪನ್ನಗಳ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಮೂಲಕ ಈ ಮಾರಕ ಚಟವನ್ನು ತಡೆಗಟ್ಟಲು ನಿರಂತರ ಜಾಗೃತಿ ಅಗತ್ಯ. ಈ ಮಹತ್ಕಾರ್ಯದಲ್ಲಿ ವಿದ್ಯಾರ್ಥಿಗಳೆಲ್ಲರೂ ಕೈಜೋಡಿಸಬೇಕು ಎಂದು ಕರೆ ನೀಡಿದರು.
ಹಿರಿಯ ಆರೋಗ್ಯ ನೀರೀಕ್ಷಣಾಧಿಕಾರಿ ಅಜಯಕುಮಾರ್ ಕಲಾಲ್ ಮಾತನಾಡಿ, ವಿದ್ಯಾರ್ಥಿಗಳು ಶಿಕ್ಷಣಕ್ಕೆ ಮೊದಲ ಆದ್ಯತೆ ನೀಡಬೇಕು. ಆರೋಗ್ಯಕ್ಕೆ ಹಾನಿಕಾರಕವಾದ ದುಶ್ಚಟಗಳಿಂದ ದೂರವಿದ್ದು ಉತ್ತಮ ಪ್ರಜೆಗಳಾಗಿ ರೂಪುಗೊಳ್ಳಬೇಕು ಎಂದರು. ತಂಬಾಕು ಉತ್ಪನ್ನಗಳ ನಿಷೇಧ ್ಣ್ಖ್ಲೂ್ಪುಹಿ2003್ಘ ಕುರಿತು ವಿವರಿಸಿದ ಅವರು, ತಂಬಾಕು ಸೇವನೆಯಿಂದ ಮುಕ್ತರಾಗಲು ಜಿಲ್ಲಾ ತಂಬಾಕು ವ್ಯಸನ ಮುಕ್ತ ಕೇಂದ್ರದಲ್ಲಿ ದೊರೆಯುವ ಸೇವಾ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಶಾಲಾ ಮುಖ್ಯಶಿಕ್ಷಕ ರಾಮು ಚವಾಣ್, ಆರೋಗ್ಯ ನೀರೀಕ್ಷಣಾಧಿಕಾರಿ ಎನ್.ಸಿ. ಜೋಶಿ, ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ 