ರಾಯಬಾಗ ತಾಲೂಕಿನಲ್ಲಿ ಒಟ್ಟು 21 ಪರೀಕ್ಷಾ ಕೇಂದ್ರಗಳು, 7784 ವಿದ್ಯಾರ್ಥಿಗಳಿಂದ ಪರೀಕ್ಷೆಗೆ ನೋಂದಣಿ: ಬಿಇಒ ಬಸವರಾಜಪ್ಪ.ಆರ್

ರಾಯಬಾಗ ತಾಲೂಕಿನಲ್ಲಿ ಒಟ್ಟು 21 ಪರೀಕ್ಷಾ ಕೇಂದ್ರಗಳು, 7784 ವಿದ್ಯಾರ್ಥಿಗಳಿಂದ ಪರೀಕ್ಷೆಗೆ ನೋಂದಣಿ: ಬಿಇಒ ಬಸವರಾಜಪ್ಪ.ಆರ್ A total of 21 examination centers in Raybagh taluk, 7784 students registered for the examination: BE


ಪಾಲಬಾವಿ 16 :   ಎಸ್‌ಎಸ್‌ಎಲ್ಸಿ ವಾರ್ಷಿಕ ಪರೀಕ್ಷೆಯು ಇದೇ ಮಾರ್ಚ್‌ 18 ರಿಂದ ಬರುವ ಏಪ್ರಿಲ್ 02ರ ವರೆಗೆ ರಾಯಬಾಗ ತಾಲೂಕಿನಲ್ಲಿ ಜರುಗಲಿವೆ. ಈ ಮುಖ್ಯ ಪರೀಕ್ಷೆಯಲ್ಲಿ ಒಟ್ಟು 21 ಪರೀಕ್ಷಾ ಕೇಂದ್ರಗಳಿದ್ದು, 07 ಪರೀಕ್ಷಾ ಕೇಂದ್ರಗಳು ಕ್ಲಸ್ಟರ್ ಸಹಿತ, ಮತ್ತು 14 ಪರೀಕ್ಷಾ ಕೇಂದ್ರಗಳು ಕ್ಲಸ್ಟರ್ ರಹಿತ ಪರೀಕ್ಷಾ ಕೇಂದ್ರಗಳಾಗಿವೆ. ಅವುಗಳಲ್ಲಿ ಸರ್ಕಾರಿ ಪ್ರೌಢಶಾಲೆಗಳಲ್ಲಿ 08 ಪರೀಕ್ಷಾ ಕೇಂದ್ರಗಳು, ಅನುದಾನಿತ ಪ್ರೌಢಶಾಲೆಗಳಲ್ಲಿ 13 ಹಾಗೂ ಅನುದಾನರಹಿತ ಪ್ರೌಢಶಾಲೆ 01 ಸೇರಿದಂತೆ ಒಟ್ಟು 21 ಪರೀಕ್ಷಾ ಕೇಂದ್ರಗಳು ರಚನೆ ಮಾಡಲಾಗಿದೆ. ತಾಲೂಕ ಕೇಂದ್ರದಲ್ಲಿ 03, ಹೋಬಳಿಯಲ್ಲಿ 11,  ಗ್ರಾಮೀಣ ಪ್ರದೇಶದಲ್ಲಿ 11 ಪರೀಕ್ಷಾ ಕೇಂದ್ರಗಳನ್ನು ರಚಿಸಲಾಗಿದೆ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಲ್ಲಿ ಬಾಲಕರು 3528/- ಬಾಲಕಿಯರು 4256 ಸೇರಿದಂತೆ ಒಟ್ಟು 7784 ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆಯಲಿದ್ದಾರೆ.  

ಪರೀಕ್ಷಾ ದಿನದಂದು ಪ್ರಶ್ನೆ ಪತ್ರಿಕೆಗಳನ್ನು ಸಾಗಿಸಲು ಒಟ್ಟು 07 ಮಾರ್ಗಾಧಿಕಾರಿಗಳನ್ನು ನೇಮಿಸಿ ಒಟ್ಟು  07 ಮಾರ್ಗಗಳ ಮೂಲಕ ಪ್ರಶ್ನೆ ಪತ್ರಿಕೆಗಳು ಪ್ರತಿ ಪರೀಕ್ಷಾ ಕೇಂದ್ರಕ್ಕೆ ಅಗತ್ಯ ಪೊಲೀಸ್ ಬಂದೋಬಸ್ತ್‌ ದೊಂದಿಗೆ ನಿಗದಿತ ಸಮಯಕ್ಕೆ ತಲುಪಿಸುವ ವ್ಯವಸ್ಥೆಯನ್ನು ಮಾಡಿಕೊಳ್ಳಲಾಗಿದೆ. ಪ್ರತಿ ಪರೀಕ್ಷಾ ಕೇಂದ್ರಗಳಲ್ಲಿಯ ಕೊಠಡಿಗಳಲ್ಲಿ 24 ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆಯಲಿದ್ದಾರೆ. ಪ್ರತಿ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮೆರಾ ಕಾರ್ಯನಿರ್ವಹಿಸಲಿವೆ. ವಲಯದ ಎಲ್ಲ ಮಕ್ಕಳು ಭಯವನ್ನು ಬಿಟ್ಟು ಸಂತೋಷದಿಂದ ಯಾವುದೇ ಆತಂಕವಿಲ್ಲದೆ ಪರೀಕ್ಷೆಗೆ ಹಾಜರಾಗುವಂತೆ ಕ್ರಮ ಕೈಗೊಳ್ಳಲಾಗಿದೆ.

ಒಟ್ಟು 21 ಪರೀಕ್ಷಾ ಕೇಂದ್ರಗಳ ಸುತ್ತಲೂ ಪರೀಕ್ಷೆ ನಡೆಯುವ ದಿನದಂದು ಅಂದರೆ ಬುಧವಾರ ದಿ.18ರಿಂದ ಬರುವ ಏಪ್ರಿಲ್ 02ರ ವರೆಗೆ ಜರಗುವ ಎಸ್ ಎಸ್ ಎಲ್ ಸಿ ಪರೀಕ್ಷಾ ಕೇಂದ್ರದಿಂದ 200 ಮೀಟರ್ ವ್ಯಾಪ್ತಿಯ ಪ್ರದೇಶದ ವರೆಗೆ ನಿಷೇಧಿತ ಪ್ರದೇಶವೆಂದು ಘೋಷಣೆ ಮಾಡಲಾಗಿದೆ. ಹಾಗೂ ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ರೀತಿಯಲ್ಲಿ ಅವ್ಯವಹಾರ ನಡೆದಂತೆ ನಿಗಾವಹಿಸಲಾಗಿದೆ. ಪರೀಕ್ಷಾ ಕೇಂದ್ರದ ಹತ್ತಿರದಲ್ಲಿರುವ ಸೈಬರ್ ಸೆಂಟರ್ ಹಾಗೂ ಜೆರಾಕ್ಸ್‌ ಕೇಂದ್ರಗಳನ್ನು ಮುಚ್ಚಿಸಲು ಕ್ರಮ ಕೈಗೊಳ್ಳಲಾಗಿದೆ. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಬಸವರಾಜಪ್ಪ.ಆರ್ ಸುದ್ದಿಗಾರರಿಗೆ ತಿಳಿಸಿದರು. ಸಂದರ್ಭದಲ್ಲಿ ಶಿಕ್ಷಣ ಸಂಯೋಜಕರುಗಳಾದ ಲಕ್ಕಪ್ಪ ಬಿದರಿ, ಮನೋಹರ ಪೂಜಾರಿ, ವಿಠ್ಠಲ ತೇರದಾಳ ಇದ್ದರು.