13 ವರ್ಷದ ಬಾಲಕ ಸೇರಿ 8 ಜನರಿಗೆ ಸೋಂಕು ಪತ್ತೆ, ಸೋಂಕಿತರ ಸಂಖ್ಯೆ 511ಕ್ಕೇರಿಕೆ

ಬೆಂಗಳೂರು, ಏ 27,ಬೆಂಗಳೂರು ನಗರದಲ್ಲಿ 13 ವರ್ಷದ ಬಾಲಕನಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಈತ ಜ್ವರದ ಲಕ್ಷಣಗಳಿಂದ ಆಸ್ಪತ್ರೆಗೆ ದಾಖಲಾಗಿದ್ದನು ಎಂದು ತಿಳಿದುಬಂದಿದೆ.
ಜೊತೆಗೆ, ಮಂಡ್ಯದಲ್ಲಿ 1, ದಕ್ಷಿಣ ಕನ್ನಡದಲ್ಲಿ 2, ಬಾಗಲಕೋಟೆಯ ಜಮಖಂಡಿಯಲ್ಲಿ 2 ಹಾಗೂ ವಿಜಯಪುರದಲ್ಲಿ 2 ಪ್ರಕರಣಗಳು ಪತ್ತೆಯಾಗಿವೆ. ಮುಂಬೈಗೆ ಪ್ರಯಾಣ ಬೆಳೆಸಿದ್ದ ಇತಿಹಾಸ ಹೊಂದಿದ್ದ ಮಂಡ್ಯದ ನಾಗಮಂಗಲದ 50 ವರ್ಷದ ವ್ಯಕ್ತಿ, 432 ವರ್ಷದ ರೋಗಿಯೊಂದಿಗೆ ಸಂಪರ್ಕ ಹೊಂದಿದ್ದ ದಕ್ಷಿಣ ಕನ್ನಡ ಜಿಲ್ಲೆಯ 80 ವರ್ಷದ ಮಹಿಳೆ ಮತ್ತು 45 ವರ್ಷದ ವ್ಯಕ್ತಿಯಲ್ಲಿ ಸೋಂಕು ದೃಢಪಟ್ಟಿದೆ.ಬಾಗಲಕೋಟೆಯ ಜಮಖಂಡಿಯಲ್ಲಿ 32 ಮತ್ತು 21 ವರ್ಷದ ಮಹಿಳೆಯರಲ್ಲಿ ಸೋಂಕು ಪತ್ತೆಯಾಗಿದೆ. ವಿಜಯಪುರದ 45 ಹಾಗೂ 27 ವರ್ಷದ ವ್ಯಕ್ತಿಗಳಲ್ಲಿ ಸೋಂಕು ದೃಢಪಟ್ಟಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಈ ನಡುವೆ, ಉಸಿರಾಟದ ತೊಂದರೆ ಹಾಗೂ ನ್ಯುಮೋನಿಯಾದಿಂದ ಆಸ್ಪತ್ರೆಗೆ ದಾಖಲಾಗಿದ್ದ 50 ವರ್ಷದ ಬೆಂಗಳೂರು ನಿವಾಸಿ ಇಂದು ವಿಕ್ಟೋರಿಯಾ ಆಸ್ಪತ್ರೆಯ ಕಟ್ಟಡದಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಇಲಾಖೆ ಮಾಹಿತಿ ನೀಡಿದೆ. ಇದರಿಂದ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 511ಕ್ಕೇರಿಕೆಯಾಗಿದೆ. 19 ಜನರು ಮೃತಪಟ್ಟಿದ್ದು, 188 ಜನರು ಮೃತಪಟ್ಟಿದ್ದಾರೆ.