ಮಹಿಳೆಯರು ಸುಶಿಕ್ಷಿತರಾಗಿ, ಸಶಕ್ತರಾದಾಗ ಮಾತ್ರ ನಿಜವಾದ ಸುಂದರ ಹಾಗೂ ಸಮೃದ್ಧ ಜಗತ್ತಿನ ನಿರ್ಮಾಣ ಸಾಧ್ಯ - ತನುಶ್ರೀ.ಟಿ.ಜೆ.ರಾಮಚಂದ್ರ
A truly beautiful and prosperous world can only be built when women are well-educated and empowered
ಕನಕಗಿರಿ 28: ಸ್ತ್ರೀ ಶಕ್ತಿಯನ್ನು ಗೌರವಿಸಲು, ಅವಳ ಸಾಧನೆಗಳನ್ನು ಸ್ಮರಿಸಲು ಮತ್ತು ಸಮಾಜದಲ್ಲಿ ಲಿಂಗ ಸಮಾನತೆಯನ್ನು ಸಾರಲು ಪ್ರತಿ ವರ್ಷ ಮಾರ್ಚ್ 8 ರಂದು ’ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ’ಯನ್ನು ಆಚರಿಸಲಾಗುತ್ತದೆ. ಇಂದಿನ ಕಾಲದಲ್ಲಿ ಮಹಿಳೆಯರು ಕೇವಲ ಕುಟುಂಬ ಸಂರಕ್ಷಣೆಗೆ ಮಾತ್ರ ಸೀಮಿತವಾಗಿಲ್ಲ. ಬಾಹ್ಯಾಕಾಶ ಸಂಶೋಧನೆಯಿಂದ ಹಿಡಿದು, ದೇಶದ ರಕ್ಷಣೆ, ರಾಜಕೀಯ, ಕ್ರೀಡೆ ಮತ್ತು ತಂತ್ರಜ್ಞಾನದವರೆಗೆ ಎಲ್ಲಾ ಕ್ಷೇತ್ರಗಳಲ್ಲೂ ತಮ್ಮ ಛಾಪು ಮೂಡಿಸಿದ್ದಾರೆ. ಕಿತ್ತೂರು ರಾಣಿ ಚೆನ್ನಮ್ಮ, ಸಾಲುಮರದ ತಿಮ್ಮಕ್ಕ, ಸುಧಾ ಮೂರ್ತಿ ಅಂತಹ ಸಾಧಕಿಯರು ನಮಗೆಲ್ಲರಿಗೂ ಸ್ಫೂರ್ತಿಯಾಗಿದ್ದಾರೆ ಎಂದು ಕನಕಗಿರಿ ಪಟ್ಟಣ ಪಂಚಾಯಿತಿಯ ಅಧ್ಯಕ್ಷರಾಗಿರುವ ತನುಶ್ರೀ.ಟಿ.ಜೆ.ರಾಮಚಂದ್ರ ಅವರು ಹೇಳಿದರು.
ಪಟ್ಟಣದ ಶ್ರೀ ಪಂಪಣ್ಣ ಶರಣಪ್ಪ ಗುಗ್ಗಳಶೆಟ್ರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಹಿಳಾ ಸುರಕ್ಷತೆ ಮತ್ತು ಸಬಲೀಕರಣ ಘಟಕದ ವತಿಯಿಂದ ಆಯೋಜಿಸಲಾಗಿದ್ದ ’ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ’ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಅವರು, ಮಹಿಳಾ ದಿನಾಚರಣೆಯು ಕೇವಲ ಒಂದು ದಿನದ ಆಚರಣೆಯಾಗದೆ, ಪ್ರತಿ ದಿನವೂ ಮಹಿಳೆಯರನ್ನು ಗೌರವಿಸುವ ಸಂಸ್ಕೃತಿ ನಮ್ಮದಾಗಬೇಕು. ಮಹಿಳೆಗೆ ಸಮಾನ ಅವಕಾಶ ಮತ್ತು ಸುರಕ್ಷಿತ ವಾತಾವರಣ ಕಲ್ಪಿಸುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ. ಮಹಿಳೆಯರು ಸುಶಿಕ್ಷಿತರಾಗಿ, ಸಶಕ್ತರಾದಾಗ ಮಾತ್ರ ಜಗತ್ತು ಸುಂದರ ಮತ್ತು ಸಮೃದ್ಧವಾಗಲು ಸಾಧ್ಯ ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಡಾ. ಬಜರಂಗಬಲಿ ಅವರು ಮಾತನಾಡಿ, ಇಂದಿನ ಆಧುನಿಕ ಯುಗದಲ್ಲಿ ಮಹಿಳೆಯರು ’ಅಬಲೆ’ಯಲ್ಲ ’ಸಬಲೆ’ ಎಂದು ಸಾಬೀತುಪಡಿಸಿದ್ದಾರೆ. ಮಹಿಳಾ ದಿನಾಚರಣೆಯ ನಿಜವಾದ ಉದ್ದೇಶ ’ಮಹಿಳಾ ಸಬಲೀಕರಣ’. ಸಬಲೀಕರಣ ಎಂದರೆ ಕೇವಲ ಸೌಲಭ್ಯಗಳನ್ನು ನೀಡುವುದಲ್ಲ, ಬದಲಾಗಿ ಅವಳು ಸ್ವತಂತ್ರವಾಗಿ ನಿರ್ಧಾರ ತೆಗೆದುಕೊಳ್ಳುವ ಶಕ್ತಿಯನ್ನು ನೀಡುವುದು. ಹೆಣ್ಣು ಮಗುವಿಗೆ ಶಿಕ್ಷಣ ನೀಡಿದರೆ ಇಡೀ ಕುಟುಂಬವೇ ಶಿಕ್ಷಣ ಪಡೆದಂತೆ. ಅವಳಿಗೆ ಆರ್ಥಿಕ ಸ್ವಾತಂತ್ರ್ಯ ಮತ್ತು ಸಾಮಾಜಿಕ ಭದ್ರತೆ ನೀಡಿದಾಗ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 