ಧಾರವಾಡ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಇರುವ ಪ್ರತಿ ಹಾಸ್ಟೆಲ್ಗಳಿಗೆ ಆಯಾ ತಾಲೂಕಾ ಅಧಿಕಾರಿಗಳು ಪ್ರತಿವಾರ ಅನೀರಿಕ್ಷಿತ ಭೇಟಿ ನೀಡಿ ಕಡ್ಡಾಯವಾಗಿ ಪ್ರಗತಿ ಪರಿಶೀಲಿಸಬೇಕು. ಮತ್ತು ವಸತಿ ನಿಲಯಗಳಲ್ಲಿನ ಗ್ರಂಥಾಲಯ, ಅಂತರ್ಜಾಲ ಸೇವೆ ಹಾಗೂ ಪಠ್ಯಪುಸ್ತಕಗಳ ಸದ್ಭಳಕೆ ಮಾಡಿಕೊಂಡು ವಿದ್ಯಾರ್ಥಿಗಳ ಸುರಕ್ಷತೆಗೆ ಆಧ್ಯತೆ ನೀಡಬೇಕೆಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸರಕಾರದ ಕಾರ್ಯದರ್ಶಿ ಮೊಹಮ್ಮದ ಮೊಹಸಿನ್ ಅವರು ಅಧಿಕಾರಿಗಳು ತಿಳಿಸಿದರು.
ನಗರದ ಜಿಲ್ಲಾ ಪಂಚಾಯತ್ ಸಭಾಭವನದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಡಿ.ದೇವರಾಜ ಅರಸು ಅಭಿವೃದ್ಧಿ ನಿಗಮ, ಮೂರಾಜರ್ಿ ದೇಸಾಯಿ ವಸತಿಶಾಲೆಗಳ ಪ್ರಗತಿ ಪರಿಶೀಲನೆ ಸಭೆ ನಡೆಸಿ, ಅವರು ಮಾತನಾಡಿದರು.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ವಿವಿಧ ಸಮುದಾಯಗಳಿಗೆ ಸಮುದಾಯ ಭವನ ನಿಮರ್ಿಸಲು ಅನುದಾನ ಬಿಡುಗಡೆ ಮಾಡಲಾಗಿದೆ. ನಿಯಮಾನುಸಾರವಿಲ್ಲದ ಹಾಗೂ ಅಗತ್ಯ ದಾಖಲೆಗಳನ್ನು ಸಲ್ಲಿಸದಿರುವ ಸಂಘ, ಸಂಸ್ಥೆ, ಟ್ರಸ್ಟ್ಗಳಿಗೆ ಅಂತಿಮ ತಿಳುವಳಿಕೆ ಪತ್ರ ನೀಡಿ, ಪ್ರಸ್ತಾವನೆಗಳನ್ನು ರದ್ದುಪಡಿಸಲು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳಿಗೆ ಅವರು ಸೂಚಿಸಿದರು.
ಎಲ್ಲ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ತಾಲೂಕಾಧಿಕಾರಿಗಳಿಗೆ ವಾಹನ ಸೌಕರ್ಯ ನೀಡಲಾಗಿದೆ. ಪ್ರತಿವಾರ ಪ್ರತಿ ಹಾಸ್ಟಲ್ಗೆ ಅಧಿಕಾರಿ ಕಡ್ಡಾಯವಾಗಿ ಭೇಟಿ ನೀಡಬೇಕು. ವಸತಿ ನಿಲಯದಲ್ಲಿ ವಿದ್ಯಾಥರ್ಿಗಳ ಆಭ್ಯಾಸಕ್ಕೆ ಅನುಮೂಲವಾಗಲು ಗ್ರಂಥಾಲಯ, ಅಂತಜರ್ಾಲಸೇವೆ ಮತ್ತು ಪಠ್ಯಪುಸ್ತಕ ನೀಡಲಾಗಿದೆ. ಅವುಗಳ ಸದ್ಭಳಕೆ ಆಗುವಂತೆ ಎಚ್ಚರಿಕೆ ವಹಿಸಬೇಕು.
ಬಾಲಕಿಯರ ವಸತಿನಿಲಯಗಳಿಗೆ ಕಡ್ಡಾಯವಾಗಿ ಮಹಿಳಾ ವಾರ್ಡನ್ ಮತ್ತು ಮಹಿಳಾ ಅಡುಗೆಯವರನ್ನು ನೇಮಿಸಬೇಕು. ಮಕ್ಕಳ ಸುರಕ್ಷತೆಗೆ ಆಧ್ಯತೆ ನೀಡಬೇಕು. ಮೆಟ್ರಿಕ್ ಪೂರ್ವ ವಿದ್ಯಾಥರ್ಿ ವೇತನಕ್ಕೆ ವಿದ್ಯಾಥರ್ಿಗಳ ಅಜರ್ಿ ಸಲ್ಲಿಸುವಾಗ ಆಧಾರ್ ಲಿಂಕ್ ಆಗಿರುವ ಬ್ಯಾಂಕ್ ವಿವರ ಸಲ್ಲಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿದರ್ೇಶಕರಿಗೆ ಪತ್ರ ಬರೆಯಲು ಅಧಿಕಾರಿಗಳಿಗೆ ಸೂಚಿಸಿದರು.
ವಸತಿ ನಿಲಯ ಹಾಗೂ ವಸತಿ ಶಾಲೆಗಳಲ್ಲಿರುವವಿದ್ಯಾರ್ಥಿಗಳ ಪರೀಕ್ಷಾ ಫಲಿತಾಂಶ ಉನ್ನತ ದಜರ್ೆಯಲ್ಲಿ ಬರುವಂತೆ ಪ್ರತಿಯೊಬ್ಬ ಅಧಿಕಾರಿ, ವಾರ್ಡನ್ಗಳು ಮುತುವಜರ್ಿ ವಹಿಸಬೇಕು. ಪಾಲಕರ ಭರವಸೆಯನ್ನು ಹುಸಿಗೊಳಿಸಬಾರದು ಎಂದು ಅವರು ತಿಳಿಸಿದರು.
ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಇಲಾಖೆಯ ವಸತಿನಿಲಯಗಳಿಗೆ ಪ್ರವೇಶ ಪಡೆಯಲು ವಿದ್ಯಾಥರ್ಿಗಳ ಬೇಡಿಕೆ ಹೆಚ್ಚಾಗಿದೆ. ಆದ್ದರಿಂದ ಇಲಾಖೆಯಿಂದ ಶೇಕಡಾ 20 ರಷ್ಟು ಹೆಚ್ಚುವರಿ ಹಾಸ್ಟೆಲ್ ಪ್ರವೇಶಕ್ಕಾಗಿ ಸಕರ್ಾರಕ್ಕೆ ಪ್ರಸ್ತಾವನೆ ಸಲ್ಲಿಸಿ, 45 ಕೋಟಿ ರೂ.ಗಳ ಹೆಚ್ಚುವರಿ ಅನುದಾನ ಕೇಳಿದ್ದು, ಪ್ರಸ್ತಾವನೆಯು ಆಥರ್ಿಕ ಇಲಾಖೆ ಪರಿಶೀಲನೆಯಲ್ಲಿದೆ ಎಂದು ಅವರು ತಿಳಿಸಿದರು.
ಹಿಂದುಳಿದ ವರ್ಗಗಳ ಜಿಲ್ಲಾ ಅಧಿಕಾರಿ ಅಜ್ಜಪ್ಪ ಸೊಗಲದ ಮಾತನಾಡಿ, ಧಾರವಾಡ ಜಿಲ್ಲೆಯಲ್ಲಿ ಮೆಟ್ರಿಕ್ ಪೂರ್ವ 26 ಮತ್ತು ಮೆಟ್ರಿಕ್ ನಂತರದ 41 ವಿದ್ಯಾಥರ್ಿನಿಲಯಗಳಿವೆ. ಬಾಲಕ ಮತ್ತು ಬಾಲಕಿಯರಿಗೆ ಸೇರಿದಂತೆ ಒಟ್ಟು 67 ವಿದ್ಯಾಥರ್ಿನಿಲಯಗಳಿದ್ದು 5420 ಜನ ಪ್ರವೇಶ ಪಡೆದಿದ್ದಾರೆ.
ಖಾಸಗಿ ಅನುದಾನಿತ 4 ಮೆಟ್ರಿಕ್ ಪೂರ್ವವಿದ್ಯಾರ್ಥಿನಿಲಯಗಳಿವೆ. ವಿದ್ಯಾಥರ್ಿನಿಲಯಗಳಿಗೆ 67 ಕಟ್ಟಡಗಳ ಅಗತ್ಯವಿದ್ದು, ಅದರಲ್ಲಿ 31 ಸ್ವಂತ ಕಟ್ಟಡಗಳು ಮತ್ತು 36 ಬಾಡಿಗೆ ಕಟ್ಟಡಗಳಲ್ಲಿ ವಿದ್ಯಾಥರ್ಿನಿಲಯಗಳಿವೆ ಎಂದು ತಿಳಿಸಿದರು.
ವಿವಿಧ ಸಮುದಾಯಗಳ ಅಭಿವೃದ್ಧಿ ಕಾರ್ಯಕ್ರಮದಡಿ 2006-07 ರಿಂದ 2018-19 ರವರೆಗೆ ಜಿಲ್ಲೆಯ ವಿವಿಧ ತಾಲೂಕಿನಲ್ಲಿ 71 ಸಮುದಾಯ ಭವನಗಳು ಮತ್ತು 9 ವಿದ್ಯಾರ್ಥಿನಿಲಯಗಳ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಅವರು ತಿಳಿಸಿದರು.
ಮೂರಾಜರ್ಿ ದೇಸಾಯಿ ವಸತಿ ಶಾಲೆಗಳ ಪ್ರಾಚಾರ್ಯರು ಮಾತನಾಡಿ, ವಿದ್ಯಾಥರ್ಿಗಳ ಅಭ್ಯಾಸ, ಸಾಧನೆ ಕುರಿತು ವಿವರಿಸಿದರು.
ಸಭೆಯಲ್ಲಿ ಇಲಾಖೆ ಉಪಕಾರ್ಯದಶರ್ಿ ಕೃಷ್ಣವೇಣಿ ಸೇರಿದಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ತಾಲೂಕಾ ಅಧಿಕಾರಿಗಳು, ಮೂರಾಜರ್ಿ ದೇಸಾಯಿ ವಸತಿ ಶಾಲೆ, ಕಾಲೇಜುಗಳ ಪ್ರಾಚಾರ್ಯರು ಪಾಲ್ಗೊಂಡಿದ್ದರು.