ಮುಖ್ಯಾಧಿಕಾರಿ ವಸಂತ ಪವಾರಗೆ ಆತ್ಮೀಯ ಬೀಳ್ಕೊಡುಗೆ
A warm farewell to Chief Officer Vasantha Pawar
ತಾಳಿಕೋಟಿ 20 : ಪಟ್ಟಣದ ಪುರಸಭೆಯಲ್ಲಿ ಒಂದು ವರ್ಷಗಳ ಕಾಲ ಸೇವೆ ಸಲ್ಲಿಸಿ ವರ್ಗಾವಣೆಗೊಂಡಿರುವ ಮುಖ್ಯಾಧಿಕಾರಿ ವಸಂತ ಪವಾರ ಅವರನ್ನು ಪುರಸಭೆ ಸಿಬ್ಬಂದಿ ವರ್ಗದವರು ಸನ್ಮಾನಿಸಿ ಆತ್ಮೀಯವಾಗಿ ಬೀಳ್ಕೊಟ್ಟರು. ಪುರಸಭೆ ಕಾರ್ಯಾಲಯದಲ್ಲಿ ಗುರುವಾರ ಆಯೋಜಿಸಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ವಸಂತ ಪವಾರ, ತಮ್ಮ ಒಂದು ವರ್ಷದ ಸೇವಾವಧಿಯಲ್ಲಿ ಸಿಬ್ಬಂದಿ, ಜನಪ್ರತಿನಿಧಿಗಳು, ಪತ್ರಕರ್ತರು, ಮುಖಂಡರು, ವಿವಿಧ ಸಂಘ-ಸಂಸ್ಥೆಗಳ ಮುಖ್ಯಸ್ಥರು ಹಾಗೂ ಸಾರ್ವಜನಿಕರು ನೀಡಿದ ಸಹಕಾರಕ್ಕೆ ಕೃತಜ್ಞತೆ ಸಲ್ಲಿಸಿದರು.
ಈ ಪಟ್ಟಣ ನನಗೆ ಕೇವಲ ಸೇವೆ ಸಲ್ಲಿಸಿದ ಸ್ಥಳವಾಗಿರಲಿಲ್ಲ. ಇಲ್ಲಿ ಸಾಕಷ್ಟು ಅನುಭವ ದೊರೆತಿದ್ದು, ಅದನ್ನು ಎಂದಿಗೂ ಮರೆಯಲಾರೆ. ನನ್ನ ಸೇವಾವಧಿಯಲ್ಲಿ ನನ್ನಿಂದ ಯಾರಿಗಾದರೂ ತೊಂದರೆ ಅಥವಾ ನೋವು ಉಂಟಾಗಿದ್ದರೆ ಕ್ಷಮಿಸಬೇಕು ಎಂದು ಹೇಳಿ ಭಾವುಕರಾದರು. ಈ ಸಂದರ್ಭದಲ್ಲಿ ಪುರಸಭೆ ಸಿಬ್ಬಂದಿಗಳಾದ ಎಸ್.ಎಸ್. ಇಂಜಿಗನೇರಿ, ಸುರೇಶ ಅಮರಣ್ಣವರ, ಶ್ರೀಪಾದ ಜೋಶಿ, ಎಸ್.ಡಿ. ಪಾಟೀಲ, ಸಿದ್ದಲಿಂಗ ಚೊಂಡಿಪಾಟೀಲ, ಇಬ್ರಾಹೀಂ ಮಕಾನದಾರ, ಶಂಕರಗೌಡ ಪಾಟೀಲ, ನಾಗರಾಜ ಪತ್ತಾರ, ಜಾನ್ವೇಕರ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 