ಪಟ್ಟಣದ ಮಹಿಳೆ, ಮಕ್ಕಳ ರಕ್ಷಣೆಗಾಗಿ ಕಾವಲು ಸಮಿತಿ ರಚನೆ
A watch committee has been formed to protect the town's women and children
ದೇವರ ಹಿಪ್ಪರಗಿ, 17 : ಪಟ್ಟಣದ ಮಹಿಳೆಯರ ಮತ್ತು ಮಕ್ಕಳ ರಕ್ಷಣೆಗಾಗಿ ಕಾವಲು ಸಮಿತಿಯನ್ನು ರಚಿಸಲಾಗಿದ್ದು, ಎಲ್ಲರೂ ಕಂಕಣ ಬದ್ಧರಾಗಿ ಕಾರ್ಯ ನಿರ್ವಹಿಸೋಣ ಎಂದು ಸ್ನೇಹ ಸಂಸ್ಥೆ ಜಿಲ್ಲಾ ಸಂಯೋಜಕರಾದ ಸಾಗರ ಎಸ್.ಘಾಟಗೆ ಹೇಳಿದರು.
ಪಟ್ಟಣದ ಅಂಗನವಾಡಿ 9 ನೇ ಕೇಂದ್ರದಲ್ಲಿ ಸ್ನೇಹ ಸಂಸ್ಥೆ ಐ.ಎಲ್.ಪಿ ಯೋಜನೆ, ಶಿಶು ಅಭಿವೃದ್ಧಿ ಯೋಜನೆ ಸಿಂದಗಿ, ಪಟ್ಟಣ ಪಂಚಾಯತ ದೇವರ ಹಿಪ್ಪರಗಿ ಇವರುಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡ ಮಹಿಳಾ ಮತ್ತು ಮಕ್ಕಳ ಕಾವಲು ಸಮಿತಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು ಇಂದು ಸಮುದಾಯದಲ್ಲಿ ನವಗ್ರಹದಂತೆ ಇರುವ 9 ಇಲಾಖೆಗಳು ಮಕ್ಕಳ ಹಾಗೂ ಮಹಿಳೆಯರ ಹಕ್ಕುಗಳ ಕುರಿತು ಒಗ್ಗೂಡಿಸುವ ಕೆಲಸ ಆಗುತ್ತಿದೆ ಎಂದು ಹೇಳಿದರು.
ಸಹಾಯಕ ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿಗಳಾದ ಪುಷ್ಪಾವತಿ ಬಿರಾದಾರ ಮಾತನಾಡಿ, ಶಾಲಾ ಮಕ್ಕಳ ಕಡ್ಡಾಯ ಹಾಜರಾತಿ, ಅಪೌಷ್ಠಿಕ ಮಕ್ಕಳ ರಕ್ಷಣೆ, ವಲಸೆ ಹೋಗುವ ಮಕ್ಕಳ ರಕ್ಷಣೆ ಮತ್ತು ಪಾಲಕರ ಕರ್ತವ್ಯ ಮತ್ತು ಜವಾಬ್ದಾರಿಗಳ ಬಗ್ಗೆ ತಿಳಿಸಿದರು. ಆರೋಗ್ಯ ಇಲಾಖೆಯ ಸುಕನ್ಯಾ ಚಳ್ಳಗೇರಿ ಮಾತನಾಡಿ, ನಾವು ಬಾಲ್ಯ ವಿವಾಹ, ಭ್ರೂಣ ಹತ್ಯೆ, ಲಿಂಗಪತ್ಯೆ ಅರಿವು ಮೂಡಿಸಿ, ಹೆಣ್ಣು ಮಕ್ಕಳಲ್ಲಿ ನೈತಿಕ ಶಿಕ್ಷಣವನ್ನು ನೀಡುವ ಅಗತ್ಯವಿದೆ. ಇದರ ಬಗ್ಗೆ ಸಮುದಾಯದ ಪಾಲಕರಲ್ಲಿ ಜಾಗೃತಿ ಮೂಡಿಸಬೇಕಿದೆ ಎಂದರು.
ಪೊಲೀಸ್ ಇಲಾಖೆಯ ಎಸ್ ಎಸ್ ಹಿರೇಕುರುಬರ ಮಾತನಾಡಿದರು. ಸಭೆಯ ಅಧ್ಯಕ್ಷತೆಯನ್ನು ಪಟ್ಟಣ ಪಂಚಾಯತಿ ಅಧ್ಯಕ್ಷರಾದ ಜಯಶ್ರೀ ದೇವಣಗಾಂವ ವಹಿಸಿಕೊಂಡಿದ್ದರು. ಇದೇ ಸಂದರ್ಭದಲ್ಲಿ ಪಟ್ಟಣ ಪಂಚಾಯತ ಸದಸ್ಯರಾದ ರತ್ನಾಬಾಯಿ ದೇವೂರ, ಅಂಗನವಾಡಿ ಮೇಲ್ವಿಚಾರಕರಾದ ಎ.ಪಿ. ಕುಂಬಾರ, ಪಟ್ಟಣ ಪಂಚಾಯತ ಮುಖ್ಯಾಧಿಕಾರಿಗಳ ಪ್ರತಿನಿಧಿಯಾದ ನಿಂಗಪ್ಪ ಸುಂಗಠಾಣ, ಶಿಕ್ಷಕರಾದ ಪುಷ್ಪಾ ರೂಗಿ, ಮಹಿಳಾ ಸ್ವಸಹಾಯ ಸಂಘದ ಪ್ರತಿನಿಧಿ ಅಂಬಿಕಾ ಕುಲಕರ್ಣಿ, ಮಕ್ಕಳ ಪ್ರತಿನಿಧಿಗಳಾದ ಮಹ್ಮದ್ ಅಪಾನ ಕಂಕರಪಿರ, ತಸ್ಮೀಯಾ ಮಸಳಿ, ಅಂಗನವಾಡಿ ಶಿಕ್ಷಕಿಯರು, ಸಹಾಯಕಿಯರು, ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು. ಸಂಸ್ಥೆಯ ಸಂಪನ್ಮೂಲ ವ್ಯಕ್ತಿಗಳಾದ ರಾವುತ ಮರಬಿ ಸಭೆ ನಿರೂಪಿಸಿದರು. ಗೌಡಪ್ಪ ಬಿರಾದಾರ ವಂದಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 