ಮಹಿಳೆಯರ ಋತುಚಕ್ರ ಅಥವಾ ಮುಟ್ಟಾಗುವುದು ಒಂದು ನೈಸರ್ಗಿಕ ಪ್ರಕ್ರಿಯೆ
A woman's menstrual cycle or menstruation is a natural process
ವಿಜಯಪುರ 23: ಮಹಿಳೆಯರ ಋತುಚಕ್ರ ಅಥವಾ ಮುಟ್ಟಾಗುವುದು ಒಂದು ನೈಸರ್ಗಿಕ ಪ್ರಕ್ರಿಯೆ. ಪ್ರೌಢಾವಸ್ಥೆಗೆ ಬಂದಾಗ ಪ್ರತಿಯೊಬ್ಬ ಮಹಿಳೆಯೂ ಕೂಡಾ ಈ ಹಂತವನ್ನು ದಾಟಲೇಬೇಕು. ಈ ಸಂದರ್ಭದಲ್ಲಿ ಸ್ವಚ್ಛತೆಯನ್ನು ಕಾಪಾಡಿಕೊಳ್ಳುವುದು ಅತೀ ಮುಖ್ಯ ಎಂದು ಭಾರತೀಯ ಕುಟುಂಬ ಯೋಜನಾ ಸಂಘದ ವೈದ್ಯಾಧಿಕಾರಿ ಡಾ.ಅನುರಾಧಾ ಜೋಶಿ ಸಲಹೆ ನೀಡಿದರು.
ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಸಮಾಜಕಾರ್ಯ ಅಧ್ಯಯನ ವಿಭಾಗ ಹಾಗೂ ಮಮದಾಪುರ ಸರಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯ ಇವರ ಸಂಯುಕ್ತಾಶ್ರಯದಲ್ಲಿ, ಭಾರತ ಸರ್ಕಾರದ ಪ್ರಧಾನಮಂತ್ರಿ ರಾಷ್ಟ್ರೀಯ ಉಚ್ಚತರ ಶಿಕ್ಷಣ ಅಭಿಯಾನ (ಪಿಎಂಹಿಉಷಾ) ಮತ್ತು ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ಅನುದಾನದ ನೆರವಿನಿಂದ “ಮಹಿಳೆಯರ ಋತುಚಕ್ರ ಆರೋ್ಯಗ’ದ ಕುರಿತು ಮಮದಾಪುರದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ಮಹಿಳೆಯರು ಮುಟ್ಟಿನ ದಿನಗಳಲ್ಲಿ ಸ್ವಚ್ಚತೆ ಕಾಪಾಡಿಕೊಳ್ಳದಿದ್ದರೆ ಹಲವಾರು ಬ್ಯಾಕ್ಟೀರಿಯಾ ಉತ್ಪತ್ತಿಯಾಗಿ ಸೋಂಕು ಹರಡುವುದರ ಜೊತೆಗೆ ಮಾರಣಾಂತಿಕ ಕಾಯಿಲೆಗಳಿಗೆ ಒಳಗಾಗುವ ಸಾಧ್ಯೆತಗಳಿವೆ ಎಂದರು.
ಮಹಿಳೆಯರ ಋತುಚಕ್ರದ ಸಂದರ್ಭದಲ್ಲಿ ಮಹಿಳೆಯರ ದೇಹದಲ್ಲಿ ಹಾರ್ವೋನ್‌ಗಳಲ್ಲಿ ಕಂಡು ಬರುವ ಬದಲಾವಣೆಗಳು ಮಹಿಳೆಯರಲ್ಲಿ ಹಲವಾರು ರೀತಿಯ ಮಾನಸಿಕ ಹಾಗೂ ದೈಹಿಕ ಸಮೆಸ್ಯೆಗಳು ಕಾಣಿಸಿಕೊಳ್ಳುತ್ತವೆ, ಪ್ರಮುಖವಾಗಿ ಈ ಸಮಯದಲ್ಲಿ ವಿಪರೀತ ಹೊಟ್ಟೆನೋವು, ಕಾಲುಗಳಲ್ಲಿ ಸೆಳೆತ, ಕೆಲವರಲ್ಲಿ ಬೆನ್ನುನೋವು, ವಿಪರೀತ ಸ್ರವಿಕೆಯಂತಹ ದೈಹಿಕ ಸಮೆಸ್ಯೆಗಳು ಸಾಕಷ್ಟು ತೊಂದರೆಗಳೆಗೆ ಕಾರಣವಾಗುತ್ತವೆ. ಈ ತೊಂದರೆಗಳನ್ನು ಸಮಚಿತ್ತದಿಂದ ನಿಭಾಯಿಸಬೇಕು ಎಂದು ಅವರು ಕಿವಿಮಾತು ಹೇಳಿದರು.
ಕಾರ್ಯಾಗಾರದ ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಡಾ.ಶಿವಾನಂದ ಹಿರೇಮಠ ಅವರು, ವಿದ್ಯಾರ್ಥಿಗಳು ಮುಟ್ಟಿನ ಆರೋಗ್ಯದ ಬಗ್ಗೆ ಕಾರ್ಯಾಗಾರದಲ್ಲಿ ಅರಿತುಕೊಂಡಿರುವ ಸಂಗತಿಗಳನ್ನು ಸದುಪಯೋಗ ಪಡೆದುಕೊಂಡು ಆರೋಗ್ಯ ಕಾಪಾಡಿಕೊಳ್ಳಬೇಕು ಎಂದರು.
ಕಾರ್ಯಾಗಾರದಲ್ಲಿ ಪ್ರಾಸ್ತಾವಿಕ ನುಡಿಗಳನ್ನಾಡಿದ ಪ್ರೊ.ಜಿ.ಬಿ.ಸೋನಾರ ಅವರು, ಇಂದಿನ ದಿನಗಳಲ್ಲಿ ಹದಿಹರೆಯದ ವಿದ್ಯಾರ್ಥಿನಿಯರು ಆರೋಗ್ಯದ ಬಗ್ಗೆ ಅರಿವು ಮತ್ತು ಜ್ಞಾನ ಹೊಂದುವುದು ಅಗತ್ಯ ಎಂದರು.
ಕಾರ್ಯಾಗಾರದಲ್ಲಿ, ಡಾ.ಎಸ್ ಎಸ್ ಮೇತ್ರಿ, ಡಾ.ಪ್ರಕಾಶ ಹಡಪದ, ಕು.ರುಕ್ಸಾನ್ ಎಫ್ ಹಾಗೂ ಕಾಲೇಜಿನ ಎಲ್ಲ ಬೋಧಕ, ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿನಿಯರು ಭಾಗವಹಿಸಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 