ಮಹಿಳೆ ವ್ಯಕ್ತಿಯಲ್ಲ, ಶಕ್ತಿ : ನ್ಯಾ.ಪ್ರತಿಭಾ ಕುಲಕರ್ಣಿ

ಮಹಿಳೆ ವ್ಯಕ್ತಿಯಲ್ಲ, ಶಕ್ತಿ : ನ್ಯಾ.ಪ್ರತಿಭಾ ಕುಲಕರ್ಣಿ A woman is not a person, she is a force: Justice Pratibha Kulkarni

ಲೋಕದರ್ಶನ ವರದಿ 

ಕಾರವಾರ ಮಾ.10:- ಮಹಿಳೆ ಒಬ್ಬ ವ್ಯಕ್ತಿಯಲ್ಲ ಒಂದು ಶಕ್ತಿ. ಮಹಿಳೆಯರು ರಾಜಕೀಯ, ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಮತ್ತು ವಿಜ್ಞಾನ ಕ್ಷೇತ್ರ ಸೇರಿದಂತೆ ಎಲ್ಲಾ  ಕ್ಷೇತ್ರದಲ್ಲೂ ಮುಂಚೂಣಿಲ್ಲಿದ್ದಾರೆ ಎಂದು ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಧೀಶರು ಎಫ್‌.ಎಸ್‌.ಟಿ.ಸಿ-1 ಪ್ರತಿಭಾ ಬಿ.ಕುಲಕರ್ಣಿ ಹೇಳಿದರು. ಅವರು ಮಂಗಳವಾರ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬೆಂಗಳೂರು, ಕರ್ನಾಟಕ ರಾಜ್ಯ ಮಹಿಳಾ ಆಯೋಗ ಬೆಂಗಳೂರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಾರವಾರ ಇವರ ಸಂಯುಕ್ತಾಶ್ರಯದಲ್ಲಿ ಅಯೋಜಿಸಲಾದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು, ಮಹಿಳೆಯರ ಸಾಧನೆಗಳನ್ನು ಸ್ಮರಿಸುವುದಕ್ಕಾಗಿ, ಅವರಿಗೆ ತಮ್ಮ ಹಕ್ಕುಗಳ ಅರಿವು ಹಾಗೂ ಅಭಿವೃದ್ಧಿ ಹೊಂದಲು ಸಮಾನ ಅವಕಾಶ ಕಲ್ಪಿಸುವ ಬಗ್ಗೆ ಜಾಗೃತಿ ಮೂಡಿಸುವುದು ಮಹಿಳಾ ದಿನಾಚರಣೆಯ ಉದ್ದೇಶವಾಗಿದೆ. ಮಹಿಳೆಯರು ಸಾಧನೆಯ ಹಾದಿಯಲ್ಲಿರುವಾಗ, ಲಿಂಗ ಬೇಧಭಾವ, ಬಾಲ್ಯ ವಿವಾಹ, ಉದ್ಯೋಗದಲ್ಲಿ ಅಸಮಾನತೆ ವ್ಮತ್ತಿತರ ಅನೇಕ ತೊಂದರೆಗಳಿದ್ದು,  ಮಹಿಳೆಯರಿಗೆ ಉತ್ತಮ ಶಿಕ್ಷಣ ನೀಡಿ, ಸಮಾಜದಲ್ಲಿ ಜಾಗೃತಿ ಮೂಡಿಸುವುದರಿಂದ ಮಹಿಳೆಯ ಪ್ರಗತಿಗೆ ಕಾರಣಿಕರ್ತರಾಗಬೇಕು. ಮಹಿಳೆಯರು ಕರ್ತವ್ಯದ ಜೊತೆಯಲ್ಲಿ ಕೌಟುಂಬಿಕ ಸಮಸ್ಯೆಗಳ ಮಧ್ಯೆಯೂ ಛಲಬಿಡದೇ ಮುನ್ನೆಡೆಯಬೇಕು ಎಂದರು. 

ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಮಾತನಾಡಿ, ಸರಕಾರದ ಎಲ್ಲಾ ಇಲಾಖೆಯಲ್ಲೂ ಮಹಿಳಾ ಅಧಿಕಾರಿಗಳು ಇರುವುದನ್ನು ಕಾಣಬಹುದಾಗಿದೆ. ಶಿರೂರು ಗುಡ್ಡ ಕುಸಿತ, ಪ್ರವಾಹ ಸಂದರ್ಭದಲ್ಲಿ ನನ್ನ ಜೊತೆ ಮಹಿಳಾ ಅಧಿಕಾರಿಗಳು ನಿಂತುಕೊಂಡುಉತ್ತಮ ಕಾರ್ಯನಿರ್ವಹಿಸಿದ್ದಾರೆ. ಮಹಿಳೆಯರ ಕೈಯಲ್ಲಿ ಎಲ್ಲವೂ ಸಾಧ್ಯ ಎಂಬುದನ್ನು ಸಾಬೀತುಪಡಿಸಿದ್ದಾರೆ.  ಮಹಿಳೆಯರಿಗೆ ಮಹಿಳೆಯರೇ ಜೊತೆಗಿದ್ದು ಪ್ರೋತ್ಸಾಹ ನೀಡಿ, ಅವಕಾಶ ಕಲ್ಪಿಸಿದ್ದಾಗ ಮಾತ್ರ ಗುರಿ ಮುಟ್ಟಲು ಸಾಧ್ಯ. ಒತ್ತಡದ ಬದುಕನ್ನು ಸಾಗಿಸುವ ಮಹಿಳೆಯರು ತಮ್ಮಲ್ಲಿರುವ ವಿಚಾರಧಾರೆಗಳನ್ನು ಇತರರೊಂದಿಗೆ ಹಂಚಿಕೊಳ್ಳಬೇಕು. ಗಂಡು ಹೆಣ್ಣು ಎಂದು ಬೇಧಭಾವ ಮಾಡದೇ ಎಲ್ಲರನ್ನೂ ಸಮಾನವಾಗಿ ಕಾಣಬೇಕು ಹಾಗೂ ಮಕ್ಕಳಲ್ಲಿ ಎಲ್ಲರೂ ಒಂದೇ ಎಂಬ ಮನೋಭಾವವನ್ನು ಬೆಳಸಬೇಕು. ಸರ್ಕಾರದಿಂದ ಮಹಿಳೆಯರಿಗೆ ಅನೇಕ ಸೌಲಭ್ಯಗಳನ್ನು ನೀಡಲಾಗುತ್ತಿದ್ದು, ಅವುಗಳ ಸದುಪಯೋಗ ಪಡೆದುಕೊಂಡು ಎಲ್ಲರೂ ಒಗ್ಗೂಡಿ ಕಾರ್ಯನಿರ್ವಹಿಸಿ ಉತ್ತಮ ಸಮಾಜದ ನಿರ್ಮಾಣದ ಜೊತೆಯಲ್ಲಿ ಮಹಿಳೆಯರಿಗೆ ಉತ್ತಮ ಸುರಕ್ಷತೆಯ ಸಮಾಜವನ್ನು ನಿರ್ಮಾಣ ಮಾಡೋಣ ಎಂದರು.  ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ದೀಲೀಶ್ ಶಶಿ ಮಾತನಾಡಿ, ಮಹಿಳೆಯರು ಶಿಕ್ಷಣ, ಉದ್ಯೋಗ, ವ್ಯಾಪಾರ, ಸಣ್ಣ ಕೈಗಾರಿಕೆಯಲ್ಲಿ, ಸ್ವಯಂ ಪ್ರೇರಣೆಯಿಂದ ತೊಡಗಿಸಿಕೊಂಡು ಇತರೆ ಮಹಿಳೆಯರಿಗೆ ಉದ್ಯೋಗ ನೀಡುವಂತರಾಗಬೇಕು. ಜಿಲ್ಲೆ ಮತ್ತು ರಾಜ್ಯಕ್ಕೆ ಹೆಸರನ್ನು ತರುವಂತಾಗಬೇಕು. ಮಹಿಳೆಯರು ಕುಟುಂಬ ಮತ್ತು ಸಮಾಜದ ಜವಾಬ್ದಾರಿಯನ್ನು ಹೊತ್ತುಕೊಂಡು ಒತ್ತಡದ ಜೀವನವನ್ನು ಸಾಗಿಸುತ್ತಿದ್ದು, ಆರೋಗ್ಯದ ಕಡೆ ಹೆಚ್ಚು ಗಮನಹರಿಸಬೇಕು ಎಂದರು. 

ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ದಿವ್ಯಶ್ರೀ ಸಿ.ಎಂ ಮಾತನಾಡಿ, ಉತಜ ಣಠ ಉಚಿಟಿ (ಗಳಿಸಲು ಕೊಡಿ) ಅಂತರಾಷ್ಟ್ರೀಯ ಮಹಿಳಾ ದಿನಾಚಣೆಯ ಧ್ಯೆಯವಾಕ್ಯವಾಗಿದ್ದು, ಮಹಿಳೆಯರಿಗೆ ಅವಕಾಶ, ಸಹಕಾರ, ಪ್ರೋತ್ಸಾಹ ಧೈರ್ಯವನ್ನು ನೀಡಿದರೆ, ಸಮಾಜ ಮಹಿಳೆಯಿಂದ ಹೆಚ್ಚು ಗಳಿಸಬಹುದು ಎಂಬುದು ಈ ವರ್ಷದ ಧೇಯವಾಕ್ಯವಾಗಿದೆ. ಉನ್ನತ ಸ್ಥಾನದಲ್ಲಿರುವ ನಾವೆಲ್ಲರೂ ಸಮಾಜಕ್ಕೆ ಉತ್ತಮ ಕೊಡುಗೆ ನೀಡಬೇಕು. ಹೆಣ್ಣಿಗೆ ಅಸಾಧ್ಯವಾದ್ದು ಯಾವುದು ಇಲ್ಲ, ಮಾನಸಿಕ ಮತ್ತು ದೈಹಿಕ ಅಡತಡೆಯ ಮಧ್ಯೆಯು ಕೂಡ ಉತ್ತಮ ಸಾಧನೆ ಮಾಡುತ್ತಿದ್ದಾರೆ.  ಹೆಣ್ಣು ಮಕ್ಕಳಿಗೆ ಹೆಚ್ಚಿನ ಶಿಕ್ಷಣ ನೀಡಿ, ಅವರಿಲ್ಲಿ ಅರಿವು ಮೂಡಿಸಬೇಕು. ಹಾಗೂ ಪುರುಷರಿಗೆ ಸಮಾನತೆಯ ಬಗ್ಗೆ ಅರಿವು ಮೂಡಿಸಬೇಕು ಎಂದರು. ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಮಹಿಳಾ ಅಧಿಕಾರಿಗಳಿಗೆ ಹಾಗೂ ಉತ್ತಮ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರಿಗೆ ಸನ್ಮಾನಿಸಲಾಯಿತು.  

ಕಾರ್ಯಕ್ರಮದಲ್ಲಿ ಡಿವೈಎಸ್ಪಿ ಗೀರೀಶ್, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನಿ ಆಶಾ, ವಾ.ಕ.ರ.ಸಾ ಸಂಸ್ಥೆಯ ಡಿಪೋ ಮೆನೇಜರ್ ಸೌಮ್ಯ ನಾಯಕ,  ಕಾರವಾರ ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕಿ ಡಾ. ಪೂರ್ಣಿಮಾ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾ ಇಲಾಖೆಯ ಜಿಲ್ಲಾ ಜಾರಿ ಆಧಿಕಾರಿ ಡಾ. ಆಶ್ವಿನಿ ಬೋರ್ಕರ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕಿ ಲತಾ ನಾಯಕ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಆರ್ಚನ ನಾಯ್ಕ, ಸೆನ್ ಪೊಲೀಸ್ ಠಾಣೆಯ ಪೊಲೀಸ್ ಉಪಾಧೀಕ್ಷಕಿ ಆಶ್ವಿನಿ ಕುಮಾರ ಬಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನಾಗರತ್ನ ನಾಯಕ, ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕಿ ಮಂಗಳ ಗೌರಿ, ಹೆಸ್ಕಾಂ ಇಂಜಿನಿಯರ್ ರೋಶನಿ, ಸ್ಥಳೀಯ ದೂರು ಸಮಿತಿಯ ಅಧ್ಯಕ್ಷೆ ಹೇಮಲತಾ ತಾಂಡೇಲ್,  ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಶಿಕ್ಷಣಾಧಿಕಾರಿ ಶುಭ ನಾಯಕ, ಜಿಲ್ಲಾ ಸತ್ರ ನ್ಯಾಯಾಲಯದ ಸರ್ಕಾರಿ ಅಭಿಯೋಜಕರು ತನುಜಾ ಬಿ. ಹೊಸಪಟ್ಟಣ, ಜಿಲ್ಲಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ವಿರುಪಾಕ್ಷ ಗೌಡ ಪಾಟೀಲ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರ ಕುಮಾರ ಎನ್, ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರು ಮತ್ತಿತರರು ಇದ್ದರು.