ಸಿಡಿಲು ಬಡಿದು ದಾಸರ ನಾಗೆನಹಳ್ಳಿ ಯುವಕ ಸಾವು
A young man from Dasara Nagenahalli died after being struck by lightning
ಬಳ್ಳಾರಿ 16: ಜಿಲ್ಲೆಯ ದಾಸರ ನಾಗೇನಹಳ್ಳಿ ಗ್ರಾಮದಲ್ಲಿ ಶನಿವಾರ ಮಧ್ಯಾಹ್ನ ಸುರಿದ ಮಳೆಗೆ ಸಿಡಿಲು ಬಡಿದು ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಗ್ರಾಮದ ಕೊರಿ ಗಾದಿಲಿಂಗಪ್ಪ (32) ಎಂದು ಗುರುತಿಸಲಾಗಿದೆ.ಮಧ್ಯಾಹ್ನ ಸುಮಾರು 3 ಗಂಟೆ ವೇಳೆಗೆ ಗ್ರಾಮದಲ್ಲಿ ಏಕಾಏಕಿ ಮಳೆ ಆರಂಭವಾಗಿತ್ತು. ಈ ವೇಳೆ ತಮ್ಮ ಹೊಲದಲ್ಲಿರುವ ಸಪೋಟ ಹಣ್ಣು ಹರಿಯಲು ಗಾದಿಲಿಂಗಪ್ಪ ತೆರಳಿದ್ದರು. ಮಳೆಯ ನಡುವೆಯೇ ಸಿಡಿಲು ಬಡಿದ ಪರಿಣಾಮ ಅವರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.ಮೃತ ಗಾದಿಲಿಂಗಪ್ಪ ದಾಸರ ನಾಗೇನಹಳ್ಳಿ ಗ್ರಾಮದ ಕುರುಬ ಸಮುದಾಯಕ್ಕೆ ಸೇರಿದವರಾಗಿದ್ದು, ನಿತ್ಯ ಕೂಲಿ ಕೆಲಸ ಮಾಡಿಕೊಂಡು ಕುಟುಂಬವನ್ನು ನಿರ್ವಹಿಸುತ್ತಿದ್ದರು.
ಅವರ ನಿಧನದಿಂದ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ.ಗಾದಿಲಿಂಗಪ್ಪ ಅವರಿಗೆ ಪತ್ನಿ ಮಂಜಮ್ಮ, ಇಬ್ಬರು ಗಂಡು ಮಕ್ಕಳು ಹಾಗೂ ಒಂದು ಹೆಣ್ಣು ಮಗು ಇದ್ದಾರೆ. ಮೃತರ ತಂದೆ ಮಲ್ಲೇಶ್ ಎಂದು ತಿಳಿದು ಬಂದಿದೆ.ಘಟನೆ ತಿಳಿಯುತ್ತಿದ್ದಂತೆ ಗ್ರಾಮಸ್ಥರು ಸ್ಥಳಕ್ಕೆ ಧಾವಿಸಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಮಳೆಗಾಲ ಆರಂಭವಾಗುತ್ತಿದ್ದಂತೆ ಸಿಡಿಲಿನ ಅವಘಡಗಳು ಹೆಚ್ಚುತ್ತಿರುವ ಹಿನ್ನೆಲೆ ರೈತರು ಹಾಗೂ ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಬೇಕು ಎಂದು ಸ್ಥಳೀಯರು ಮನವಿ ಮಾಡಿದ್ದಾರೆ.ಈ ಘಟನೆ ಮೋಕಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣ ದಾಖಲಾಗಿರುವ ಕುರಿತು ಮಾಹಿತಿ ಲಭ್ಯವಾಗಿದೆ.
ಸಾವಿರಾರು ಕೋಟಿ ವಂಚನೆ, ವರ್ಗಾವಣೆ ಆರೋಪ: ಶಿವಾನಂದ ನೀಲಣ್ಣವರ ಬಂಧನ
ಬೆಳಗಾವಿಯಲ್ಲಿ ಶಿವಾನಂದ ನೀಲಣ್ಣನವರಗೆ ಅಧಿಕಾರಿಗಳ ಶಾಕ್ : ಶಿವಂ ಅಸೋಸಿಯೇಟ್ ಕಚೇರಿಗಳ ಮೇಲೆ ದಾಳಿ
24 ಗಂಟೆಯಲ್ಲಿ ಕಾರು ಕಳ್ಳತನ ಪ್ರಕರಣ ಭೇಧಿಸಿದ ಪೊಲೀಸರು : ಖದೀಮರ ಪತ್ತೆಗಾಗಿ ಶೋಧ
ಗಡಿ ಮರಾಠಿ ಶಾಲೆಗಳಲ್ಲಿ ಕನ್ನಡ ಕಹಳೆ: 7 ಕನ್ನಡ ಪ್ರಾಥಮಿಕ, 2 ಪ್ರೌಡ ಶಾಲೆಗಳಿಗೆ ರಾಜ್ಯ ಸರಕಾರ ಗ್ರಿನ್ ಸಿಗ್ನಲ್
ಅಂತರಾಜ್ಯ ಖದೀಮನ ಬಂಧನ : 45.56 ಲಕ್ಷ ಮೌಲ್ಯದ ಚಿನ್ನಾಭರಣ, ದ್ವಿಚಕ್ರ ವಾಹನ ವಶಕ್ಕೆ
ಹಿಡಕಲ್ ಹಿನ್ನೀರಿನಲ್ಲಿ ಮುಳುಗಿದ್ದ ಹುನ್ನೂರು ವಿಠಲ ಮಂದಿರ ಜಲದಿಗ್ಭಂಧನದಿಂದ ಮುಕ್ತಿ 