ಭೂ ಮಾಪಕರ ಬೇಡಿಕೆ ಈಡೇರಿಸಲು : ಎಎಪಿ ಪ್ರತಿಭಟನೆ
AAP protests to fulfill land surveyors' demands
ಲೋಕದರ್ಶನ ವರದಿ
ಹೂವಿನಹಡಗಲಿ 10: ನಾನಾ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪರವಾನಗಿ ಭೂ ಮಾಪಕರು 60 ದಿನಗಳಿಂದ ಮುಷ್ಕರ ಹೂಡಿರುವುದರಿಂದ ಭೂ ಮಾಪನ ಇಲಾಖೆಯ ಎಲ್ಲ ಕೆಲಸಗಳು ಈ ಸ್ಥಗಿತಗೊಂಡಿದೆ ಎಂದು ಆಕ್ಷೇಪಿಸಿ ಅಮ್ ಅದ್ಮಿ ಪಾರ್ಟಿ ನೇತೃತ್ವದಲ್ಲಿ ನಾನಾ ರೈತ ಸಂಘಟನೆಗಳು ಗುರುವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ, ತಹಶೀಲ್ದಾರ್ ಕೆ.ಎಂ. ಗುರುಬಸವರಾಜ ಅವರಿಗೆ ಮನವಿ ಸಲ್ಲಿಸಲಾಯಿತು.ಎಎಪಿ ಅಧ್ಯಕ್ಷ ಎನ್.ಶ್ರೀಧರನಾಯ್ಕ ಮಾತನಾಡಿ, ’ಭೂ ಮಾಪಕರ ಮುಷ್ಕರದಿಂದ ಸರ್ವೆ, ಹದ್ದುಬಸ್ತ್, ಪೋಡಿ ಸೇರಿದಂತೆ ಇತರ ಕೆಲಸಗಳಿಗೆ ಸಲ್ಲಿಕೆಯಾಗಿರುವ ಎರಡು ಸಾವಿರಕ್ಕೂ ಹೆಚ್ಚು ಅರ್ಜಿಗಳು ವಿಲೇ ವಾರಿ ಆಗದೇ ಉಳಿದಿವೆ. ಜಮೀನು ಮಾರಾಟ, ಹಕ್ಕು ಬದಲಾವಣೆ ಎಲ್ಲ ಕೆಲಸಗಳಿಗೂ ತೊಡಕು ಉಂಟಾಗಿದೆ. ಸರ್ಕಾರ ಕೂಡಲೇ ಭೂ ಮಾಪಕರ ಬೇಡಿಕೆ ಈಡೇರಿಸಿ ಅವರನ್ನು ಕೆಲಸಕ್ಕೆ ನಿಯೋಜಿಸಬೇಕು, ಇಲ್ಲವೇ ಪರ್ಯಾಯ ವ್ಯವಸ್ಥೆ ಮಾಡಬೇಕು’ ಆಗ್ರಹಿಸಿದರು.
ರೈತ ಸಂಘದ ಅಧ್ಯಕ್ಷ ಎಚ್.ಸಿದ್ದಪ್ಪ, ಪ್ರಧಾನ ಕಾರ್ಯದರ್ಶಿ ಎಂ.ಶಿವರಾಜ ಹೊಳಗುಂದಿ ಮಾತನಾಡಿ, ’ಎರಡು ತಿಂಗಳಿಂದ ಭೂ ಮಾಪನ ಇಲಾಖೆ ರೈತರ ಪಾಲಿಗೆ ಸತ್ತು ಹೋಗಿದೆ. ರೈತರ ಸಮಸ್ಯೆ ಯಾರೂ ಆಲಿಸುತ್ತಿಲ್ಲ ಎಂದು ದೂರಿದರು. ಸರ್ಕಾರ ಕೂಡಲೇ ಭೂ ಮಾಪಕರ ಬೇಡಿಕೆ ಈಡೇರಿಸಿ ಭೂ ಸರ್ವೆ ಕಾರ್ಯಗಳನ್ನು ಮಾಡಿಸಬೇಕು’ ಎಂದು ಒತ್ತಾಯಿಸಿದರು.ಕೆಆರ್‌ಎಸ್ ಪಕ್ಷದ ಮುಖಂಡರಾದ ಚಂದ್ರಶೇಖರ ದೊಡ್ಡಮನಿ, ಸುಭಾನ್ ಹುಗಲೂರು, ಗನಿಸಾಬ್, ಕೆ.ಲಲಿತಮ್ಮ ಕೆ.ಮಂಜುನಾಥ, ಮಂಜುನಾಥ, ಪಕ್ಕೀರ್ಪ, ಬಸವರಾಜ, ಎಚ್.ಶಂಭುನಾಥ, ಮಂಜುನಾಯ್ಕ, ಗಿರಿನಾಯ್ಕ, ಶಿವಾನಂದಪ್ಪ, ಶಂಭುನಾಥ, ನಾಗಪ್ಪ ಇದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 