ನವದೆಹಲಿ 11: ಮುಂಬರುವ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ನೊಂದಿಗೆ ಮೈತ್ರಿ ಇಲ್ಲ, ಆಮ್ ಆದ್ಮಿ ಪಕ್ಷ ಸ್ವಂತ ಬಲದಿಂದ ಸ್ಪರ್ಧೆ ಮಾಡಲಿದೆ ಎಂದು ಎಎಪಿ ಪಕ್ಷದ ನಾಯಕ ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ.
ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ದೆಹಲಿ ಚುನಾವಣೆಗೆ ಮುಂಚಿತವಾಗಿ ಸೀಟು ಹಂಚಿಕೆ ಮಾಡಲು ಎಎಪಿಯು ಇಂಡಿಯಾ ಬಣದೊಂದಿಗೆ ಮಾತುಕತೆ ನಡೆಸುತ್ತಿದೆ ಎನ್ನುವ ವರದಿಗಳನ್ನು ತಳ್ಳಿಹಾಕಿದ್ದಾರೆ.
ಎಎಪಿ ಸೋಮವಾರ ದೆಹಲಿ ಚುನಾವಣೆಗೆ ತನ್ನ 20 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ.