“ಎಬಿಸಿ-ಅಕಾಡೆಮಿಕ್ ಬ್ಯಾಂಕ್ ಆಪ್ ಕ್ರೇಡಿಟ್ಸ್” ವಿಚಾರ ಸಂಕಿರಣ
ABC-Academic Bank of Credits” Symposium
ಲೋಕದರ್ಶನ ವರದಿ
“ಎಬಿಸಿ-ಅಕಾಡೆಮಿಕ್ ಬ್ಯಾಂಕ್ ಆಪ್ ಕ್ರೇಡಿಟ್ಸ್” ವಿಚಾರ ಸಂಕಿರಣ
ವಿಜಯಪುರ 11: ಸಮಾಜದ ಸಶಕ್ತೀಕರಣಕ್ಕಾಗಿ ಸರ್ಕಾರ ವಿವಿಧ ಕಲ್ಯಾಣ ಯೋಜನೆಗಳನ್ನು ಜಾರಿಗೆ ತರುತ್ತಿವೆ. ಅವುಗಳಲ್ಲಿ ಪಿ.ಎಂ. ಉಶಾ ಯೋಜನೆ ಪ್ರಮುಖ ಸ್ಥಾನ ಹೊಂದಿದೆ ಎಂದು ಮಹಿಳಾ ವಿಶ್ವ ವಿದ್ಯಾಲಯದ ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ ಹೇಳಿದರು.
ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವ ವಿದ್ಯಾಲಯದ ಐಕ್ಯೂಎಸಿ ಹಾಗೂ ಪರೀಕ್ಷಾ ವಿಭಾಗದ ಸಹಯೋಗದೊಂದಿಗೆ ಬಿಎಲ್‌ಡಿಇ ಸಂಸ್ಥೆಯ ಬಂಗಾರಮ್ಮ ಸಜ್ಜನ ಮಹಿಳಾ ಮಹಾವಿದ್ಯಾಲಯದಲ್ಲಿ ಪಿಎಂ ಉಷಾ ಕೇಂದ್ರ ಸರ್ಕಾರದ ಉನ್ನತ ಶಿಕ್ಷಣ ಸಚಿವಾಲಯ, ರಾಜ್ಯ ಸರ್ಕಾರದ ಅಡಿಯಲ್ಲಿ ಬುಧವಾರ ಹಮ್ಮಿಕೊಂಡಿದ್ದ “ಎಬಿಸಿ-ಅಕಾಡೆಮಿಕ್ ಬ್ಯಾಂಕ್ ಆಪ್ ಕ್ರೇಡಿಟ್ಸ್” ಅರಿವು ಕುರಿತ ಒಂದು ದಿನದ ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು.
ಯೋಜನೆಗಳ ಪ್ರಯೋಜನಗಳನ್ನು ತಲುಪಬೇಕಾದ ವರ್ಗಗಳಿಗೆ, ಪರಿಣಾಮಕಾರಿಯಾಗಿ ತಲುಪಲು ಇಂತಹ ಜಾಗೃತಿ ಮತ್ತು ಕೌಶಲ್ಯವರ್ಧಕ ಕಾರ್ಯಕ್ರಮಗಳನ್ನು ನಿರಂತರವಾಗಿ ಆಯೋಜಿಸುವುದು ಅವಶ್ಯಕವಾಗಿದೆ. ಮಹಿಳಾ ಸಬಲೀಕರಣವೇ ರಾಷ್ಟ್ರದ ಸಬಲೀಕರಣಕ್ಕೆ ಆಧಾರ ಎಂದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಮಹಿಳಾ ವಿಶ್ವವಿದ್ಯಾಲಯದ ಕುಲಸಚಿವ ಶಂಕರಗೌಡ ಸೋಮನಾಳ ಮಾತನಾಡಿ, ಬಹುಶಿಸ್ತ್ರೀಯ ವಿಧಾನಗಳ ಮೂಲಕ ಎನ್,ಇ,ಪಿ ಅಡಿಯಲ್ಲಿ ವಿದ್ಯಾರ್ಥಿನಿಯರು ಜ್ಞಾನದ ಬ್ಯಾಂಕ್‌ನ್ನು ವೃದ್ಧಿಸಿಕೊಳ್ಳುವ ಮನೋಭಾವ ಬೆಳೆಸಿಕೊಳ್ಳಬೇಕು. ಇಂತಹ ಮನಃಸ್ಥಿತಿಯೇ ವಿದ್ಯಾರ್ಥಿನಿಯರ ಭವಿಷ್ಯವನ್ನು ಉಜ್ವಲಗೊಳಿಸುತ್ತದೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಮಹಿಳಾ ವಿವಿಯ ಐಕ್ಯೂಎಸಿ ನಿರ್ದೇಶಕ ಪ್ರೊ.ಪಿ.ಜಿ.ತಡಸದ ಮಾತನಾಡಿ, ಉನ್ನತ ಶಿಕ್ಷಣವು ಅನೇಕ ಅವಕಾಶಗಳನ್ನು ತೆರೆದಿದ್ದು ಅದರ ಲಾಭಗಳನ್ನು ಪಡೆದುಕೊಳ್ಳಬೇಕಾದರೆ ಡಿಜಿಲಾಕರ್ ಹಾಗೂ ಅಕಾಡೆಮಿಕ್ ಬ್ಯಾಂಕ್ ಆಫ್ ಕ್ರೆಡಿಟ್ಸ್‌ನ ಸದುಪಯೋಗವನ್ನು ಪಡೆದುಕೊಳ್ಳಬೇಕು. ಎನ್‌ಇಪಿ ಪೂರ್ಣ ಪ್ರಮಾಣದಲ್ಲಿ ಯಶಸ್ವಿಯಾಗಬೇಕಾದರೆ ಎಬಿಸಿ ಹಾಗೂ ಡಿಜಿಲಾಕರ್ ವ್ಯವಸ್ಥೆಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುವುದು ಅವಶ್ಯಕ ಎಂದರು.
ಸಂಪನ್ಮೂಲ ವ್ಯಕ್ತಿಗಳಾಗಿ ಕರ್ನಾಟಕ ಮಹಿಳಾ ವಿಶ್ವವಿದ್ಯಾಲಯದ ಗಣಕಯಂತ್ರ ವಿಜ್ಞಾನ ವಿಭಾಗದ ಮುಖ್ಯಸ್ಥ ಪ್ರೊ.ಜಿ.ಜಿ.ರಜಪೂತ ಹಾಗೂ ತುಮಕೂರು ವಿಶ್ವವಿದ್ಯಾಲಯದ ಗ್ರಂಥಾಲಯ ಮತ್ತು ಮಾಹಿತಿ ತಂತ್ರಜ್ಞಾನ ವಿಭಾಗದ ಸಹಪ್ರಾಧ್ಯಾಪಕ ಡಾ.ರೂಪೇಶ್ ಕುಮಾರ್ ಕೆ. ಉಪನ್ಯಾಸ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಚಾರ್ಯ ವೈ. ತಮ್ಮಣ್ಣ ವಹಿಸಿಕೊಂಡಿದ್ದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಐಕ್ಯೂಎಸಿ ನಿರ್ದೇಶಕಿ ಡಾ.ಭಕ್ತಿ. ಮಹೀಂದ್ರಕರ್, ಬಿ.ಕಾಂ ವಿಭಾಗದ ಮುಖ್ಯಸ್ಥೆ ಡಾ.ಜಯಶ್ರೀ ಕೊಟ್ನಾಳ, ಬೋಧಕ-ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿನಿಯರು ಮತ್ತಿತರಿದ್ದರು.
ಪ್ರೊ. ಬೋರಮ್ಮ ದೇಸಾಯಿ ಸ್ವಾಗತಿಸಿ ಪರಿಚಯಿಸಿದರು. ಪ್ರೊ. ಮಂಜುನಾಥ ಮ್ಯಾಗೇಡಿ ನಿರೂಪಿಸಿದರು. ಲಕ್ಷ್ಮೀ ಪ್ರಾರ್ಥಿಸಿದರು, ವಿವಿಯ ಐಕ್ಯೂಎಸಿ ಉಪನಿರ್ದೇಶಕಿ ಪ್ರೊ. ಶ್ವೇತಾ ವಂದಿಸಿದರು.
ಫೋಟೋ ಕ್ಯಾಪ್ಷನ್:
ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಐಕ್ಯೂಎಸಿ ಹಾಗೂ ಪರೀಕ್ಷಾ ವಿಭಾಗದ ಸಹಯೋಗದೊಂದಿಗೆ ಬಿಎಲ್‌ಡಿಇ ಸಂಸ್ಥೆಯ ಶ್ರೀಮತಿ ಬಂಗಾರಮ್ಮ ಸಜ್ಜನ ಮಹಿಳಾ ಮಹಾವಿದ್ಯಾಲಯದಲ್ಲಿ ಬುಧವಾರ ಹಮ್ಮಿಕೊಂಡಿದ್ದ “ಎಬಿಸಿ-ಅಕಾಡೆಮಿಕ್ ಬ್ಯಾಂಕ್ ಆಪ್ ಕ್ರೆಡಿಟ್ಸ್” ಅರಿವು ಕುರಿತ ಒಂದು ದಿನದ ವಿಚಾರ ಸಂಕಿರಣ ಕಾರ್ಯಕ್ರಮವನ್ನು ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ ಹಾಗೂ ಗಣ್ಯರು ಉದ್ಘಾಟಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 