ಕೆಪಿಎಸ್ಸಿ ಪರೀಕ್ಷೆ ಲೋಪ ಖಂಡಿಸಿ ಉನ್ನತ ಮಟ್ಟದ ತನಿಖೆಗೆ ಎಬಿವಿಪಿ ಆಗ್ರಹ
ABVP demands high-level probe into KPSC exam irregularities
ಲೋಕದರ್ಶನ ವರದಿ
ಬಳ್ಳಾರಿ, ಆ.5: ಕೆಪಿಎಸ್ಸಿಯ ನೇಮಕಾತಿ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಹಾಗೂ ವಿಜಯಪುರ ಜಿಲ್ಲೆಯ ತಿಕೋಟಾದಲ್ಲಿ ನಡೆದ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆಯ ಲೋಪಗಳನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಬುಧವಾರ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿತು.
ಕೆಪಿಎಸ್ಸಿಯ ಪಶು ವೈದ್ಯಾಧಿಕಾರಿ ನೇಮಕಾತಿ ಪರೀಕ್ಷೆಯಲ್ಲಿ ಭ್ರಷ್ಟಾಚಾರ, ಹಣ ಪಡೆದು ಆಯ್ಕೆ, ಓಎಂಆರ್ ಶೀಟ್ ತಿರುಚಿದ ಆರೋಪಗಳು ಕೇಳಿಬಂದಿರುವ ಹಿನ್ನೆಲೆಯಲ್ಲಿ ಪ್ರಕರಣವನ್ನು ಉನ್ನತ ಮಟ್ಟದ ತನಿಖಾ ಸಂಸ್ಥೆಗೆ ವಹಿಸಿ ಸಮಗ್ರ ತನಿಖೆ ನಡೆಸಬೇಕು ಎಂದು ಆಗ್ರಹಿಸಲಾಯಿತು. ಪ್ರಾಮಾಣಿಕವಾಗಿ ಪರೀಕ್ಷೆ ಬರೆದ ಅಭ್ಯರ್ಥಿಗಳಿಗೆ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಲಾಯಿತು.
ವಿಜಯಪುರ ಜಿಲ್ಲೆಯ ತಿಕೋಟಾದಲ್ಲಿ ನಡೆದ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆಗಳನ್ನು ಸಮಯಕ್ಕೆ ಸರಿಯಾಗಿ ವಿತರಿಸದ ಕಾರಣ ಅನೇಕ ಅಭ್ಯರ್ಥಿಗಳು ಮಾನಸಿಕ ಒತ್ತಡಕ್ಕೆ ಒಳಗಾಗಿ ಅನ್ಯಾಯಕ್ಕೊಳಗಾಗಿದ್ದಾರೆ ಎಂದು ಎಬಿವಿಪಿ ಆರೋಪಿಸಿದೆ. ಈ ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಂಡು ಬಾಧಿತ ಅಭ್ಯರ್ಥಿಗಳಿಗೆ ಮರು ಪರೀಕ್ಷೆ ನಡೆಸಬೇಕು ಎಂದು ಒತ್ತಾಯಿಸಲಾಗಿದೆ.
ರಾಜ್ಯದಲ್ಲಿ ಶಿಕ್ಷಣ ಇಲಾಖೆಯ ಸಾವಿರಾರು ಶಿಕ್ಷಕರ ಹುದ್ದೆಗಳು ಖಾಲಿ ಇರುವುದರಿಂದ ಶಿಕ್ಷಣದ ಗುಣಮಟ್ಟ ಕುಸಿಯುತ್ತಿದೆ. ಸುಮಾರು 450 ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಪ್ರವೇಶದ ಮೇಲೆ ಪರಿಣಾಮ ಬಿದ್ದಿದ್ದು, ಖಾಲಿ ಹುದ್ದೆಗಳನ್ನು ತಕ್ಷಣ ಭರ್ತಿ ಮಾಡಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
ಈ ಸಂದರ್ಭದಲ್ಲಿ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಟಿ. ಭರತ್, ನಗರ ಕಾರ್ಯದರ್ಶಿ ಬಸವ ಕಿರಣ್, ವಿಭಾಗ ಸಂಚಾಲಕ ಕೆ. ದೀಲೀಪ್ ಕುಮಾರ್ ಸೇರಿದಂತೆ ಎಬಿವಿಪಿಯ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಅಂಬೋಲಿ ಬಳಿ ಕಣಿವೆಗೆ ಬಿದ್ದು ಯುವಕ ದುರ್ಮರಣ : 5 ಗಂಟೆ ಕಾರ್ಯಾಚರಣೆ ಬಳಿಕ ಶವ ಪತ್ತೆ
ಸುತಗಟ್ಟಿ ಗ್ರಾಮದಲ್ಲಿ ಪ್ರತ್ಯಕ್ಷವಾಗಿದ್ದ ಚಿರತೆ ಸೆರೆ : ನಿಟ್ಟೂಸಿರು ಬಿಟ್ಟ ಗ್ರಾಮಸ್ಥರು
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ 