ಪಾಲಿಟೆಕ್ನಿಕ್ ಸಮಸ್ಯೆಗಳಿಗೆ ಎಬಿವಿಪಿ ಪ್ರತಿಭಟನೆ
ABVP protests over polytechnic issues
ಮುಂಡಗೋಡ 05 : ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ವಿವಿಧ ಸಮಸ್ಯೆಗಳು ಹಾಗೂ ರಾಜ್ಯಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಗಳ ಅಕ್ರಮಗಳ ವಿರುದ್ಧ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಮುಂಡಗೋಡ ಘಟಕವು ಬುಧವಾರ ಪಟ್ಟಣದ ಶಿವಾಜಿ ವೃತ್ತದಲ್ಲಿ ಪ್ರತಿಭಟನೆ ನಡೆಸಿ ತಹಶೀಲ್ದಾರರಿಗೆ ಮನವಿ ಸಲ್ಲಿಸಿತು. ಮುಂಡಗೋಡ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಕಟ್ಟಡ ಶಿಥಿಲಗೊಂಡಿದ್ದು, ಕುಸಿಯುವ ಹಂತದಲ್ಲಿದೆ. ಇದರಿಂದ ನೂರಾರು ವಿದ್ಯಾರ್ಥಿಗಳ ಸುರಕ್ಷತೆಗೆ ಆತಂಕ ಎದುರಾಗಿದೆ. ಕಾಲೇಜಿಗೆ ಸೂಕ್ತ ಬಸ್ ಸೌಲಭ್ಯ ಕಲ್ಪಿಸುವುದು ಹಾಗೂ ಕಟ್ಟಡ ದುರಸ್ತಿ ಮಾಡುವಂತೆ ಒತ್ತಾಯಿಸಿತು.
ಕಾಲೇಜು ಮಾರ್ಗದಲ್ಲಿ ಸಮರ್ಕ ಬಸ್ ನಿಲುಗಡೆ ಇಲ್ಲದ ಕಾರಣ ವಿದ್ಯಾರ್ಥಿಗಳು ತೊಂದರೆ ಅನುಭವಿಸುತ್ತಿದ್ದು, ಈ ಮಾರ್ಗದಲ್ಲಿ ಸಂಚರಿಸುವ ಬಸ್ಗಳಿಗೆ ಕಡ್ಡಾಯ ನಿಲುಗಡೆ ನೀಡಬೇಕು ಎಂದು ಆಗ್ರಹಿಸಲಾಯಿತು. ಇದೇ ವೇಳೆ ಪೊಲೀಸ್ ಕಾನ್ಸ್ಟೇಬಲ್ ಮತ್ತು ಪರೀಕ್ಷೆಗಳಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಸ್ವತಂತ್ರ ತನಿಖೆ ನಡೆಸಿ ಅರ್ಹ ಅಭ್ಯರ್ಥಿಗಳಿಗೆ ನ್ಯಾಯ ಒದಗಿಸಬೇಕು ಹಾಗೂ ರಾಜ್ಯದ ಖಾಲಿ ಶಿಕ್ಷಕರ ಹುದ್ದೆಗಳನ್ನು ಶೀಘ್ರ ಭರ್ತಿ ಮಾಡಬೇಕು ಎಂದು ಸರ್ಕಾರವನ್ನು ಒತ್ತಾಯಿಸಿತು. ಪ್ರತಿಭಟನೆಯಲ್ಲಿ ಮುಂಡಗೋಡ ಘಟಕದ ಪದಾಧಿಕಾರಿಗಳು ಹಾಗೂ ನೂರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಅಂಬೋಲಿ ಬಳಿ ಕಣಿವೆಗೆ ಬಿದ್ದು ಯುವಕ ದುರ್ಮರಣ : 5 ಗಂಟೆ ಕಾರ್ಯಾಚರಣೆ ಬಳಿಕ ಶವ ಪತ್ತೆ
ಸುತಗಟ್ಟಿ ಗ್ರಾಮದಲ್ಲಿ ಪ್ರತ್ಯಕ್ಷವಾಗಿದ್ದ ಚಿರತೆ ಸೆರೆ : ನಿಟ್ಟೂಸಿರು ಬಿಟ್ಟ ಗ್ರಾಮಸ್ಥರು
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ 