ಗ್ರಾಮೀಣ ವಿದ್ಯಾರ್ಥಿಗಳಿಗೆ ಹೆಚ್ಚುವರಿ ಬಸ್ ಬಿಡುವಂತೆ ಎಬಿವಿಪಿ ಮನವಿ
ABVP requests additional buses for rural students
ಲೋಕದರ್ಶನ ವರದಿ
ಬಳ್ಳಾರಿ, ಸೆ.23: ಮಹಾನಗರದ ವಿವಿಧ ಗ್ರಾಮಗಳಿಂದ ಬಳ್ಳಾರಿ ನಗರಕ್ಕೆ ಪ್ರತಿದಿನ ವಿದ್ಯಾಭ್ಯಾಸಕ್ಕಾಗಿ ಆಗಮಿಸುವ ವಿದ್ಯಾರ್ಥಿಗಳು ಎದುರಿಸುತ್ತಿರುವ ಬಸ್ ಸಮಸ್ಯೆ ಪರಿಹರಿಸುವಂತೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಬಳ್ಳಾರಿ ಮಹಾನಗರ ಘಟಕದಿಂದ ಬಳ್ಳಾರಿ ಬಸ್ ಡಿಪೋ ಮ್ಯಾನೇಜರ್ ಅವರಿಗೆ ಮನವಿ ಸಲ್ಲಿಸಲಾಯಿತು.
ಗ್ರಾಮೀಣ ಪ್ರದೇಶಗಳಿಂದ ಕಾಲೇಜುಗಳಿಗೆ ಆಗಮಿಸುವ ವಿದ್ಯಾರ್ಥಿಗಳಿಗೆ ಸೂಕ್ತ ಸಮಯದಲ್ಲಿ ಬಸ್ಗಳು ಲಭ್ಯವಾಗುತ್ತಿಲ್ಲ. ಬಸ್ಗಳಲ್ಲಿ ಹೆಚ್ಚಿನ ಜನಸಂದಣಿ ಇರುವುದಲ್ಲದೆ, ಸಂಜೆ ಕಾಲೇಜು ಮುಗಿದ ಬಳಿಕ ಗ್ರಾಮಗಳಿಗೆ ತೆರಳಲು ಸಾಕಷ್ಟು ಬಸ್ಗಳ ಸೌಲಭ್ಯವಿಲ್ಲ. ಇದರಿಂದ ವಿದ್ಯಾರ್ಥಿಗಳು ಪ್ರತಿದಿನ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.
ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಸಂಚರಿಸುವ ಮಾರ್ಗಗಳಲ್ಲಿ ಹೆಚ್ಚುವರಿ ಬಸ್ಗಳನ್ನು ಓಡಿಸಬೇಕು. ಬೆಳಗ್ಗೆ ಹಾಗೂ ಸಂಜೆ ಕಾಲೇಜು ಸಮಯಕ್ಕೆ ಅನುಗುಣವಾಗಿ ಹೆಚ್ಚುವರಿ ಟ್ರಿಪ್ಗಳನ್ನು ಕಲ್ಪಿಸಬೇಕು ಎಂದು ಡಿಪೋ ಮ್ಯಾನೇಜರ್ ಅವರಿಗೆ ಮನವಿ ಮಾಡಲಾಯಿತು.
ವಿದ್ಯಾರ್ಥಿಗಳ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಶೀಘ್ರ ಸೂಕ್ತ ಪರಿಹಾರ ಕಲ್ಪಿಸಬೇಕು ಎಂದು ಎಬಿವಿಪಿ ಒತ್ತಾಯಿಸಿತು. ಈ ಸಂದರ್ಭದಲ್ಲಿ ನಗರ ಸಂಘಟನಾ ಕಾರ್ಯದರ್ಶಿ ಸಂದೀಪ ಅರಳಗುಂಡಿ, ಮನೋಜ್, ಗಣೇಶ, ಶರತ್ ಸೇರಿದಂತೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಎನ್ಒಸಿ ನೀಡಲು ಲಂಚ : ಖಾನಾಪುರ ತಾಲೂಕು ಆರೋಗ್ಯಾಧಿಕಾರಿ ಲೋಕಾಯುಕ್ತ ಬಲೆಗೆ
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ 