ಲೋಕದರ್ಶನ ವರದಿ
ಪ್ರವಾಸಿಗರ ಮೇಲೆನ ದಾಳಿ ಎಬಿವಿಪಿ ತೀವ್ರ ಖಂಡನೆ
ಬಳ್ಳಾರಿ 27: ಜಮ್ಮು ಕಾಶ್ಮೀರದ ಪಹಲ್ಗಾಮನಲ್ಲಿ ಪ್ರವಾಸಿಗರ ಮೇಲೆ ನಡೆದಿರುವ ಉಗ್ರರ ಹೇಡಿತನದ ಗುಂಡಿನ ದಾಳಿ ಕೃತ್ಯವನ್ನು ಎಬಿವಿಪಿ ತೀವ್ರವಾಗಿ ಖಂಡಿಸುತ್ತದೆ. ವಿಭಾಗ ಸಂಘಟನಾ ಕಾರ್ಯದರ್ಶಿಗಳಾದ ಅವರು ನಾಗರಾಜ ಬಟಗೇರಾ ಮಾತನಾಡುತ್ತಾ ಜಮ್ಮು ಮತ್ತು ಕಾಶ್ಮೀರ ಭಾರತದ ಅವಿಭಾಜ್ಯ ಅಂಗವೆಂಬುದು ಸಾರ್ವಕಾಲಿಕ ಸತ್ಯ, ಅಲ್ಲಿನ ಪ್ರತ್ಯೇಕವಾದದ ಮನಸ್ಥಿತಿಯನ್ನು ಬದಲಾಯಿಸಲು ಹಾಗೂ ಜನ-ಜೀವನ ಸ್ಥಿತಿಗತಿಗಳನ್ನು ಸ್ಥಿರಗೊಳಿಸಿ ಶಾಂತಿಯುತ ಕಾಶ್ಮೀರವೆಂಬುದನ್ನು ಖಚಿತಪಡಿಸಿಕೊಳ್ಳಲು ಕೇಂದ್ರ ಸರ್ಕಾರ ಈಗಾಗಲೇ ಸಾಕಷ್ಟು ಕ್ರಮಗಳನ್ನು ತೆಗೆದುಕೊಂಡಿರುತ್ತದೆ. ಆದರೂ ಸಹ ಅಲ್ಲಿನ ಭಯೋತ್ಪಾದಕರ ನುಸುಳುಕೋರರ ಹಾವಳಿ ತಡೆಗಟ್ಟಲು ಸಾಧ್ಯವಾಗಿಲ್ಲ. ಪ್ರಾಂತ ಕಾರ್ಯಕಾರಿ ಸಮಿತಿ ಸದಸ್ಯರಾದ ಎಂ.ಅನುಶ್ರೀ ಅವರು ಮಾತನಾಡುತ್ತಾ ಇತ್ತೀಚೆಗೆ ವಲಸೆ ಕಾರ್ಮಿಕರ ಮೇಲಿನ ದಾಳಿಗಳು ಮಾರುಕಟ್ಟೆಗಳಲ್ಲಿ ದಾಳಿಗಳು ಹಾಗೂ ಇಂದು ನಡೆದಿರುವ ಪ್ರವಾಸಿಗರ ಮೇಲಿನ ದಾಳಿ ಗಮನಿಸುವುದಾದರೆ ಕಾಶ್ಮೀರದ ಶಾಂತಿ ಮತ್ತು ಭಾರತದೊಂದಿಗಿನ ಏಕತೆಗೆ ಉಗ್ರರು ಅರ್ಥಾತ್ ಪ್ರತ್ಯೇಕವಾದಿಗಳು ತೀವ್ರ ಸವಾಲುವೂಡ್ಡುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ. ಆದ್ದರಿಂದ ಕೇಂದ್ರ ಸರ್ಕಾರ ಉಗ್ರರ ವಿರುದ್ಧ ವ್ಯಾಪಕ ಕಠಿಣ ಕ್ರಮಗಳನ್ನು ಕೈಗೊಂಡು ತಕ್ಕ ಉತ್ತರವನ್ನು ನೀಡಬೇಕೆಂದು ವಿದ್ಯಾರ್ಥಿ ಪರಿಷತ್ ಆಗ್ರಹಿಸುತ್ತದೆ. ಭಯೋತ್ಪಾದಕರ ದಾಳಿಯಲ್ಲಿ ತೀವ್ರವಾಗಿ ಗಾಯಗೊಂಡಿರುವವರಿಗೆ ಹಾಗೂ ಹತ್ಯೆಗೊಳಗಾಗಿರುವವರಿಗೆ ವಿದ್ಯಾರ್ಥಿ ಪರಿಷತ್ ಸಂತಾಪವನ್ನು ಸೂಚಿಸುತ್ತದೆ. ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಕಾರ್ಯಕರ್ತರಾದ ದರ್ಶನ್, ಸಾಗರ್, ರಾಂಪುರ ಶರಣಬಸವ, ಮಾರುತಿ, ನವೀನ್, ದೀಲೀಪ್, ಸಂತೋಷ್, ಪವನ್, ಆಂಜಿನೇಯ, ಸುರೇಖಾ, ರೂಪಾಲಿಕ, ಮಧುಬಾಲ ಮುಂತಾದವರು ಭಾಗವಹಿಸಿದ್ದರು.
ಲೋಕದರ್ಶನ ವರದಿ
ಪ್ರವಾಸಿಗರ ಮೇಲೆನ ದಾಳಿ ಎಬಿವಿಪಿ ತೀವ್ರ ಖಂಡನೆ